ಕಾಂಗ್ರೆಸ್‌ಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಚುನಾವಣೆಗಾಗಿ ಈ ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅಧಿವೇಶನದಲ್ಲಿ ಮಹದಾಯಿ ಬಗ್ಗೆ ಒಂದು ಶಬ್ದನ್ನೂ ಮಾತಾಡಿಲ್ಲ.
ಹುಬ್ಬಳ್ಳಿ (ಜ.04): ಕಾಂಗ್ರೆಸ್‌ಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಚುನಾವಣೆಗಾಗಿ ಈ ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅಧಿವೇಶನದಲ್ಲಿ ಮಹದಾಯಿ ಬಗ್ಗೆ ಒಂದು ಶಬ್ದನ್ನೂ ಮಾತಾಡಿಲ್ಲ. ಎಲ್ಲಿ ಮಾತಾಡಬೇಕು ಅಲ್ಲಿ ಮಾತಾಡೋದು ಬಿಟ್ಟು, ಇಲ್ಲಿ ಬಂದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಧಿನಾಯಕಿ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಒಂದು ಹನಿ ನೀರು ಕೊಡಲ್ಲಾ ಅಂದಿದ್ರು. ಸೋನಿಯಾ ಗಾಂಧಿ ಮಾತು ಮೀರಿ ಹೋರಾಡ್ತೀರಾ..? ಕಾಂಗ್ರೆಸ್ ಕರ್ನಾಟಕದ ಹಿತಾಸಕ್ತಿಯ ಬಗ್ಗೆ ಒಮ್ಮೆಯೂ ಹೋರಾಡಿಲ್ಲ. ಮಹದಾಯಿ ಹೋರಾಟಗಾರರು, ರೈತರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದ ಕಾಂಗ್ರೆಸ್. ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ನೀರಾವರಿ ಯೋಜನೆ ಜಾರಿ ಮಾಡ್ತೀವಿ ಅಂದಿದ್ದಾರೆ ಸಿದ್ದರಾಮಯ್ಯ. ಯಾವನ್ರೀ ಇವಾ..? ಎಂದು ಸಿದ್ದರಾಮಯ್ಯ ವಿರುದ್ಧ ಶೆಟ್ಟರ್ ಆಕ್ರೋಶ ಹೊರಹಾಕಿದ್ದಾರೆ
ಇವರು ಸುಳ್ಳುಗಾರರು, ಇವರನ್ನು ಜನ ನಂಬಲ್ಲ. ನ್ಯಾಯಾಧಿಕರಣದಲ್ಲಿ ನಮ್ಮ ಪರ ಆದೇಶ ಬಂದಿದ್ದು, ಯೋಜನೆ ಜಾರಿ ಮಾಡುತ್ತೇವೆ. ಗೋವಾದವರು ಯಾವುದೇ ತಕರಾರು ಮಾಡಿದ್ರೂ ಪ್ರಯೋಜನವಿಲ್ಲ. ವಿಪಕ್ಷಗಳು ರಚನಾತ್ಮಕ ಸಲಹೆ, ಸಹಕಾರ ಕೊಡಲಿ.ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನಾಟಕವನ್ನು ಜನರು ನಂಬಲ್ಲ ಎಂದು ಅವರು ಹೇಳಿದರು.
ಸಾವರ್ಕರ್ ಬಗ್ಗೆ ಸದನದಲ್ಲಿಯೇ ಮಾತನಾಡಲಿ: ಮಾಜಿ ಸಿಎಂ ಶೆಟ್ಟರ್
ಕಟೀಲ್ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ರಸ್ತೆ ಅಭಿವೃದ್ಧಿ ಬಿಡಿ ಲವ್ ಜಿಹಾದ್ ಬಗ್ಗೆ ಗಮನ ಕೊಡಿ ನಳಿನ್ ಕುಮಾರ್ ಕಟೀಲ್ ಹೇಳಿಕೆ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು, ನಳಿನ್ ಕುಮಾರ್ ಕಟೀಲ್ ಹೇಳಿರುವ ಉದ್ದೇಶವೇ ಬೇರೆ. ಅವರು ಆ ಅರ್ಥದಲ್ಲಿ ಹೇಳಲಿಕ್ಕೆ ಸಾಧ್ಯವೇ ಇಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ತಾನಾಗಿಯೇ ನಡೆಯುತ್ತಿರುತ್ತವೆ. ಹೀಗಾಗಿ ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಲವ್ ಜಿಹಾದ ಕೂಡ ಗಂಭೀರ ಸಮಸ್ಯೆ. ಹಿಂದೂ ಹೆಣ್ಣು ಮಕ್ಕಳನ್ನು ಬ್ರೇನ್ ವಾಶ್ ಮಾಡಿ ಕರೆದುಕೊಂಡು ಹೋಗುತ್ತಿದ್ದಾರೆ. ಲವ್ ಜಿಹಾದ್ ಹೆಸರಲ್ಲಿ ಹಿಂದೂ ಯುವತಿಯರನ್ನು ವಂಚಿಸಲಾಗುತ್ತಿದೆ. ಲವ್ ಜಿಹಾದದಿಂದ ಎಷ್ಟೋ ಹೆಣ್ಣು ಮಕ್ಕಳ ಜೀವನ ಹಾಳಾಗಿದೆ. ಇದೊಂದು ಜ್ವಲಂತ ಗಂಭೀರ ಸಮಸ್ಯೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಅಭಿವೃದ್ಧಿ ಬೇಡ ಎಂದು ಯಾರೂ ಕೂಡ ಹೇಳಲಿಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.