ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು: ಸರ್ಕಾರದ ವಿರುದ್ಧ ಮುಗಿಬಿದ್ದ ಮಾಜಿ ಸಿಎಂಗಳು

Published : May 27, 2020, 02:26 PM ISTUpdated : May 27, 2020, 07:17 PM IST
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು: ಸರ್ಕಾರದ ವಿರುದ್ಧ ಮುಗಿಬಿದ್ದ ಮಾಜಿ ಸಿಎಂಗಳು

ಸಾರಾಂಶ

ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ವೀರ್‌ ಸಾವರ್ಕರ್ ಹೆಸರಿಡಲು ಸಿಎಂ ಬಿಎಸ್‌ ಯಡಿಯೂರಪ್ಪ ಸರ್ಕಾರ ಮುಂದಾಗಿರುವುದಕ್ಕೆ ಕರ್ನಾಟಕದ ಮಾಜಿ ಸಿಎಂಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬಿಎಸ್‌ವೈ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು, (ಮೇ.27): ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ವೀರ್‌ ಸಾವರ್ಕರ್ ಸರಿಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂಗಳಾದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

"

ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್‌ ಹೆಸರು ನಾಮಕರಣಕ್ಕೆ ಸಂಬಂಧಪಟ್ಟಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಎಚ್‌ಡಿ. ಕುಮಾರಸ್ವಾಮಿ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಸಿದ್ದರಾಮಯ್ಯ ಟ್ವೀಟ್ ಏಟು..!

ಯಲಹಂಕ‌ ಮೇಲ್ಸೆತುವೆಗೆ ವಿ.ಡಿ.ಸಾವರ್ಕರ್ ಹೆಸರಿಡುವ ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ರಾಜ್ಯದ ಸ್ವಾತಂತ್ರ್ಯಹೋರಾಟಗಾರರೊಬ್ಬರ ಹೆಸರಿಡಬೇಕೆಂದು  ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ತೆರೆ ಹಿಂದಿನ‌ ಸೂತ್ರಧಾರರೇ ಹೊರತು, ಚುನಾಯಿತ ಸರ್ಕಾರ ಅಲ್ಲ‌ ಎನ್ನುವುದಕ್ಕೆ ಯಲಹಂಕ ಮೇಲ್ಸೆತುವೆಗೆ ಸಾವರ್ಕರ್ ಹೆಸರಿಡುವ ಅವಸರದ ನಿರ್ಧಾರವೇ‌ ಪುರಾವೆ. ನೀವು ವಿರೋಧ ಪಕ್ಷಗಳ ಸಹಕಾರ ಬಯಸುತ್ತಿರುವುದು ಇಂತಹ ಜನವಿರೋಧಿ ನಿರ್ಧಾರಗಳಿಗಾಗಿಯೇ? ಎಂದು ಸಿಎಂ ಬಿಎಸ್‌ವೈಗೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ಟ್ವೀಟ್

 'ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು' ಎಂದು ಕಿಡಿಕಾರಿದ್ದಾರೆ.

'ಸ್ವಾತಂತ್ರ್ಯ ಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ಎಂದು ಪ್ರಶ್ನಿಸಿರುವ ಎಚ್‌ಡಿಕೆ, ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹ ಮಾಡುತ್ತೇನೆ' ಎಂದು ಟ್ವೀಟ್‌ ಮಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್