ಹುಚ್ಚುನಾಯಿಗೆ ಕಲ್ಲು ಹೊಡೆದು ಸಾಯಿಸಿದಂತೆ ಕಾಂಗ್ರೆಸ್ ಸರ್ಕಾರ ಓಡಿಸಲಿದ್ದಾರೆ ಜನ: ಕಾರಜೋಳ

By Kannadaprabha News  |  First Published Oct 17, 2023, 4:00 AM IST

ಐಟಿ ದಾಳಿ ವೇಳೆ ಗುತ್ತಿಗೆದಾರ ಬಳಿ ₹ 42ಕೋಟಿ ಹಣ ಸಿಕ್ಕಿದೆ. ನೈತಿಕತೆ ಇದ್ದರೆ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ಜನರೇ ಹುಚ್ಚು ನಾಯಿಗೆ ಕಲ್ಲು ಹೊಡೆದು ಸಾಯಿಸಿದಂತೆ ಸಾಯಿಸುತ್ತಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆಕ್ರೋಶಭರಿತರಾಗಿ ಹೇಳಿದರು. 


ಬೆಳಗಾವಿ (ಅ.17): ಐಟಿ ದಾಳಿ ವೇಳೆ ಗುತ್ತಿಗೆದಾರ ಬಳಿ ₹ 42ಕೋಟಿ ಹಣ ಸಿಕ್ಕಿದೆ. ನೈತಿಕತೆ ಇದ್ದರೆ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ಜನರೇ ಹುಚ್ಚು ನಾಯಿಗೆ ಕಲ್ಲು ಹೊಡೆದು ಸಾಯಿಸಿದಂತೆ ಸಾಯಿಸುತ್ತಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆಕ್ರೋಶಭರಿತರಾಗಿ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರ ಕುಮ್ಮಕ್ಕಿನಿಂದ ಕಾಂಟ್ರಾಕ್ಟರ್‌ ಅಸೋಸಿಯೇಷನ್‌ ನಮ್ಮ ಸರ್ಕಾರದ ಮೇಲೆ ಶೇ.40% ಕಮಿಷನ್‌ ಸುಳ್ಳು ಆರೋಪ ಮಾಡಿತು. 

ಇದನ್ನು ಚುನಾವಣೆಯಲ್ಲಿ ಲಾಭ ಪಡೆಯಲು ಕಾಂಗ್ರೆಸ್ ಯತ್ನ ಮಾಡಿತು. ಅವರ ಸರ್ಕಾರದಲ್ಲಿ ಈಗ ಕೋಟಿ ಕೋಟಿ ಹಣ ಸಿಕ್ಕಿದೆ. ಇದಕ್ಕೆ ಕಾಂಗ್ರೆಸ್‌ನವರು, ಕಾಂಟ್ರಾಕ್ಟರ್ ಅಸೋಸಿಯೇಷನ್ ಅವರೇ ಉತ್ತರಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ಕೆಸರಲ್ಲಿ ಕಲ್ಲಿಟ್ಟು ದಾಟುವ ಪ್ರಯತ್ನ ಮಾಡಿದ್ದರು. ಇದೀಗ ಅವರೇ ಸಿಕ್ಕಿಕೊಂಡಿದ್ದಾರೆ. ಐದು ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಫಂಡಿಂಗ್ ಮಾಡಲು ಹಣ ಸಂಗ್ರಹಿಸುತ್ತಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ನೈತಿಕ ಹೊಣೆ ಹೊರಬೇಕಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

Tap to resize

Latest Videos

ಜನರು ನನ್ನನ್ನು ಮನೆಮಗಳಂತೆ ಪ್ರೀತಿಯಿಂದ ಕಾಣುತ್ತಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಗುತ್ತಿಗೆದಾರರಿಂದ ಹಣ ಸಂಗ್ರಹಿಸಿದ್ದು ಮೇಲ್ನೋಟಕ್ಕೆ ಸಾಬೀತಾಗುತ್ತಿದೆ. ಮುಖ್ಯಮಂತ್ರಿಗಳ ಸಹಕಾರ, ಸಹಮತವಿಲ್ಲದೆ ಇಷ್ಟೊಂದು ಹಣ ಸಂಗ್ರಹ ಸಾಧ್ಯವಾ ಎಂದು‌ ಪ್ರಶ್ನಿಸಿದ ಅವರು, ಇದಕ್ಕಾಗಿ ಸಿಎಂ ರಾಜೀನಾಮೆ ಕೊಡುವಂತೆ ಒತ್ತಾಯ ಮಾಡಿರುವೆ. ಕಾಂಗ್ರೆಸ್‌ನವರ ಮೇಲೆ ₹ 70 ಲಕ್ಷ ಕೋಟಿ ಹಣ ಸಂಗ್ರಹ, ದುರುಪಯೋಗ ಮಾಡಿಕೊಂಡ ಆರೋಪಗಳಿವೆ. ಕೆಲವರು ಜೈಲಿಗೆ ಹೋಗಿ ಬಂದಿದ್ದಾರೆ, ಕೆಲವರು ಜಾಮೀನು ಮೇಲೆ ಹೊರಗೆ ಇದ್ದಾರೆ.

ಮುಂದಿನ‌‌‌ ದಿನಗಳಲ್ಲಿ ಇನ್ನೂ ಕೆಲವರು ಜೈಲಿಗೆ ಹೋಗುವವರಿದ್ದಾರೆ. ಯಾರು ತಪ್ಪು ಮಾಡುತ್ತಾರೆ ಅವರು ಶಿಕ್ಷೆ ಅನುಭವಿಸಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಕು ಎಂದು ಹೇಳಿದರು. ಘಟಪ್ರಭಾದಲ್ಲಿ ಮಹಿಳೆಗೆ ಚಪ್ಪಲಿ ಹಾಕಿ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿತಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ದೀನದಲಿತರಿಗೆ ರಕ್ಷಣೆಯಿಲ್ಲ, ಮಹಿಳೆಯರಿಗೂ ರಕ್ಷಣೆಯಿಲ್ಲ. ಈ ಹಿಂದೆ ಇದೇ ಜಿಲ್ಲೆಯಲ್ಲಿ ದಲಿತರಿಗೆ ಮಲ ತಿನ್ನಿಸಿದ ಘಟನೆ ಕಾಂಗ್ರೆಸ್ ಸರ್ಕಾರ ಇದ್ದಾಗ ಆಗಿದೆ ಎಂದು ದೂರಿದರು.

ಶೀಘ್ರ ರಾಜ್ಯಾಧ್ಯಕ್ಷರ ನೇಮಕ: ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಖಂಡಿತವಾಗಿಯೂ ರಾಜ್ಯ ಬಿಜೆಪಿಗೆ ಬಲ ತುಂಬುವ ಕೆಲಸ ಆಗಲಿದೆ. ನಮ್ಮ ವರಿಷ್ಠರು ಬೇರೆ ಬೇರೆ ರಾಜ್ಯಗಳ ಚುನಾವಣೆಯಲ್ಲಿ ಬಿಜಿ ಇದ್ದಾರೆ. ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ನೇಮಕವಾಗಲಿದೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಇವರೆಲ್ಲಾ ಚಿಗುರುತ್ತಾರೆ: ಭಗವಾನ್ ವಿರುದ್ಧ ಸುಧಾಕರ್ ಆಕ್ರೋಶ

ಕಾಂಗ್ರೆಸ್ ನ 41 ಶಾಸಕರೇ ಅಸಮಾಧಾನ: ಬಿ.ಆರ್. ಪಾಟೀಲ್, ರಾಯರೆಡ್ಡಿ, ಶಾಮನೂರು ಸೇರಿದಂತೆ ಕಾಂಗ್ರೆಸ್‌ನ 41 ಶಾಸಕರೇ ಅಸಮಾಧಾನ ಹೊರಹಾಕಿ ಪತ್ರ ಬರೆದಿದ್ದಾರೆ. ಒಂದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಅವರೇ ಹೇಳುತ್ತಿದ್ದಾರೆ‌. ಚುನಾವಣೆ ಪೂರ್ವದಲ್ಲಿ ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದೆ ಎಂದಿದ್ದರು. ಈಗ ಅವರೇ ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪನವರೇ ಸರ್ಕಾರದಲ್ಲಿ ಲಿಂಗಾಯತರಿಗೆ ಎರಡನೇ ದರ್ಜೆ ನಾಗರಿಕರಂತೆ ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಕಾರಜೋಳ ಹೇಳಿದರು.

click me!