ಸಿಎಂ ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಲಿ: ಕೆ.ಎಸ್‌.ಈಶ್ವರಪ್ಪ

By Kannadaprabha NewsFirst Published Dec 7, 2023, 2:00 AM IST
Highlights

ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಲಿ. ಆದರೆ, ಅವರು ರಾಜಕಾರಣ ಬಿಟ್ಟು ಇನ್ನಾದರೂ ಬಡವರ ಪರ ಧ್ವನಿಯೆತ್ತಿ ಸರ್ಕಾರದ ಯೋಜನೆಗಳನ್ನು ಸಾಕಾರಗೊಳಿಸಲಿ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಶಿವಮೊಗ್ಗ (ಡಿ.07): ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಲಿ. ಆದರೆ, ಅವರು ರಾಜಕಾರಣ ಬಿಟ್ಟು ಇನ್ನಾದರೂ ಬಡವರ ಪರ ಧ್ವನಿಯೆತ್ತಿ ಸರ್ಕಾರದ ಯೋಜನೆಗಳನ್ನು ಸಾಕಾರಗೊಳಿಸಲಿ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಡವರ ಉದ್ಧಾರಕ್ಕಾಗಿಯೇ ಕಾಂಗ್ರೆಸ್ ಇದೆ ಎನ್ನುವವರು ಸಿದ್ದರಾಮಯ್ಯ ಹೇಳುತ್ತಾರೆ. ದೇವರಾಜ ಅರಸು ಹೆಸರು ಹೇಳಿಕೊಂಡು ಆಡಳಿತ ನಡೆಸುತ್ತಿದ್ದಾರೆ. ಕಳೆದ 10 ತಿಂಗಳಿನಿಂದ ರಾಜ್ಯದಲ್ಲಿ ಯಾವ ಅಭಿವೃದ್ಧಿಯೂ ಆಗಿಲ್ಲ. 

ಇನ್ನೊಂದು ಕಡೆ ಇವರೇ ನೀಡಿದ ಗ್ಯಾರಂಟಿಗಳು ಕೂಡ ಜನರನ್ನು ತಲುಪುತ್ತಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಸಂಪೂರ್ಣ ಅಭಿವೃದ್ಧಿ ಕುಂಠಿತವಾಗಿದೆ. ಹಿಂದುಳಿದ ವರ್ಗಗಳು ಸೇರಿದಂತೆ ದಲಿತರ, ಬಡವರ, ಕಷ್ಟಗಳು ಹೆಚ್ಚಾಗಿವೆ, ಅವರ ಕಲ್ಯಾಣವಾಗುತ್ತಿಲ್ಲ. ರಾಜ್ಯದ ಅಭಿವೃದ್ಧಿಯೇ ಇಲ್ಲವಾಗಿದೆ. ಶಿವಮೊಗ್ಗ ಸೇರಿದಂತೆ ಇಡೀ ರಾಜ್ಯದಲ್ಲಿ ಒಂದೇ ಒಂದು ವಸತಿ ನಿರ್ಮಾಣವಾಗಿಲ್ಲ. ಶಿವಮೊಗ್ಗದಲ್ಲಿ ಸುಮಾರು 4800 ಮನೆಗಳು ನಿರ್ಮಾಣಕ್ಕಾಗಿ ಕಾಯುತ್ತಿವೆ ಎಂದರು.

Latest Videos

ಬಿಜೆಪಿಗೆ ಜನಬೆಂಬಲ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭಾ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮೂರು ರಾಜ್ಯದ ಜನ ಬಿಜೆಪಿ ಜೊತೆ ಇದ್ದಾರೆ. ನಾವೇಕೆ ಕಾಂಗ್ರೆಸ್ ಜೊತೆ ಹೋಗಬೇಕು ಎಂದು ಮತದಾರರು ಮಾಡಿದ ತೀರ್ಮಾನ 3 ರಾಜ್ಯಗಳಲ್ಲಿನ ಫಲಿತಾಂಶ ಸಾಕ್ಷಿ. ಕಾಂಗ್ರೆಸ್ ತನ್ನ ಸಾಧನೆಗಿಂತ ಗ್ಯಾರಂಟಿಯ ಮೋಸದ ಭರವಸೆ ನೀಡುತ್ತಿದ್ದಾರೆ. ತೆಲಂಗಾಣದ ಶಾಸಕರಿಗೆ ಇದು ಅರ್ಥವಾಗಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ಶಾಸಕರನ್ನು ಕಟ್ಟು ಹಾಕಬೇಕು ಅಂತಾ ಪ್ರಯತ್ನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಪ್ರಯತ್ನ ದೇಶದಲ್ಲಿ ಎಲ್ಲೂ ಸಫಲವಾಗಲ್ಲ ಎಂದು ಕುಟುಕಿದರು.

ಒಂದು ಸಮುದಾಯ ಓಲೈಕೆ ಮಾಡಲು ಸರ್ಕಾರ ಇಲ್ಲ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕರ್ನಾಟಕದ ಜಮೀರ್, ಜಾರ್ಜ್, ಡಿ.ಕೆ. ಶಿವಕುಮಾರ್‌ ಕಾರಣರಾಗಿದ್ದಾರೆ. ಜಮೀರ್ ಅವರು ಮುಸ್ಲಿಂ ವೋಟುಗಳ ಮೇಲೆ ಪ್ರಭಾವ ಬೀರಿದ್ದಾರೆ. ಇದು ಮುಂದೆ ನಡೆಯುವುದಿಲ್ಲ. ಅಲ್ಲಿ ಬಿಜೆಪಿ ಕೇವಲ ಒಂದು ಸ್ಥಾನದಲ್ಲಿತ್ತು. ಈಗ 8 ಸ್ಥಾನಗಳನ್ನು ಪಡೆದಿದ್ದೇವೆ. ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳನ್ನು ಸೋಲಿಸಿದ್ದು, ಬಿಜೆಪಿಯ ಸಾಧನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಗಿರೀಶ್ ಪಟೇಲ್, ದತ್ತಾತ್ರಿ, ಕೆ.ವಿ.ಅಣ್ಣಪ್ಪ, ಸುಧೀಂದ್ರ ಇದ್ದರು.

click me!