ಜಾತಿ ಜನಗಣತಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಹಿಂದು ಸಮಾಜವನ್ನು ಛಿದ್ರಗೊಳಿಸುವ ಕೆಟ್ಟ ಸಂಪ್ರದಾಯಕ್ಕೆ ಕೈ ಹಾಕಿದೆ. ಇದಕ್ಕೆ ನಾನು ಛೀಮಾರಿ ಹಾಕ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು.
ಶಿವಮೊಗ್ಗ (ಮಾ.02): ಜಾತಿ ಜನಗಣತಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಹಿಂದು ಸಮಾಜವನ್ನು ಛಿದ್ರಗೊಳಿಸುವ ಕೆಟ್ಟ ಸಂಪ್ರದಾಯಕ್ಕೆ ಕೈ ಹಾಕಿದೆ. ಇದಕ್ಕೆ ನಾನು ಛೀಮಾರಿ ಹಾಕ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು. ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿ ಗಣತಿ ವರದಿ ಸ್ವೀಕಾರದ ಮೂಲಕ ಸಿದ್ದರಾಮಯ್ಯ ಕೆಟ್ಟ ಸಂಪ್ರದಾಯ ಹುಟ್ಟು ಹಾಕಿದ್ದಾರೆ. ಚುನಾವಣಾ ಸಂದರ್ಭದಲ್ಲಿ ತಮಗೆ ಲಾಭ ಆಗಬಹುದು ಎಂಬ ಕಾರಣದಿಂದ ಸಿದ್ದರಾಮಯ್ಯ ಸ್ವೀಕಾರ ಮಾಡಿದ್ದಾರೆ ಎಂದು ಟೀಕಿಸಿದರು.
ಜಾತ್ಯತೀತ ಪಕ್ಷ ಅಂತ ಹೇಳುವ ಕಾಂಗ್ರೆಸ್ ಈ ವರದಿ ಸ್ವೀಕಾರದ ವೇಳೆ ಕಾನೂನಾತ್ಮಕ ಚಿಂತನೆ ನಡೆಸಬೇಕಿತ್ತು. ಇದು ಚರ್ಚೆಗೆ ಬಂದ್ರೆ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರೇ ಹೊಡೆದಾಡ್ತಾರೆ. ಸಮಾಜ ಛಿದ್ರ ಮಾಡಲು ಕಾಂಗ್ರೆಸ್ ಪ್ರಯತ್ನ ಮಾಡಿದೆ. ಹಿಂದು ಸಮಾಜ ಒಗ್ಗಟ್ಟಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ನವರು ಹಿಂದು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಜಾತಿ ಜನಗಣತಿ ಮಾಡಬೇಕಾದವರು ಕೇಂದ್ರ ಸರ್ಕಾರದವರು. ಇದು ರಾಜ್ಯ ಸರ್ಕಾರದ ಕೆಲಸ ಅಲ್ಲ.
undefined
ಭಾರತವನ್ನು ವಿಶ್ವದ 3ನೇ ಆರ್ಥಿಕ ರಾಷ್ಟ್ರವನ್ನಾಗಿಸಲು ಶ್ರಮಿಸಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಇದು ಗೊತ್ತಿದ್ದರೂ ಜಾತಿಗಣತಿಗೆ ₹150ರಿಂದ ₹200 ಕೋಟಿ ವೆಚ್ಚ ಮಾಡಿದ್ದಾರೆ. ಕಾಂಗ್ರೆಸ್‌ನ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಶಾಮನೂರು ಶಿವಶಂಕರಪ್ಪ ಬಹಿರಂಗವಾಗಿ ವರದಿಯನ್ನು ವಿರೋಧ ಮಾಡಿದ್ದಾರೆ. ಅಷ್ಟಕ್ಕೂ ಈ ವರದಿ 9 ವರ್ಷಗಳ ಹಿಂದೆ ತಯಾರಿಸಿದ ವರದಿಯಾಗಿದೆ. 9 ವರ್ಷಗಳ ಹಿಂದೆಯೇ ಅಂದಿನ ಅಧ್ಯಕ್ಷ ಕಾಂತರಾಜ್ ವರದಿ ರೆಡಿ ಇದೆ, ಸಿಎಂ ಹೇಳಿದರೆ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದರು. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ವೇಳೆಯೂ ಬಿಡುಗಡೆ ಮಾಡಲಿಲ್ಲ. ಏಕೆ ಬಿಡುಗಡೆ ಮಾಡಲಿಲ್ಲ ಅಂದ್ರೆ ಸಿಎಂ ಕುಮಾರಸ್ವಾಮಿ ಒಪ್ಪಲಿಲ್ಲ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗೆ ಬಿಜೆಪಿ ಆಕ್ರೋಶ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವಿನ ಹಿನ್ನೆಲೆಯಲ್ಲಿ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದಕ್ಕೆ ಬಿಜೆಪಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಸಚಿವರಾದ ಸಿ.ಟಿ.ರವಿ, ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರರು, ಈ ರೀತಿ ದೇಶದ್ರೋಹದ ಘೋಷಣೆ ಕೂಗುವವರನ್ನು ಪಾಕಿಸ್ತಾನಕ್ಕೆ ಕಳುಹಿಸಿ ಎಂದು ಕಿಡಿಕಾರಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಕೇಳುತ್ತಿದ್ದ ಘೋಷಣೆ ಇದೀಗ ವಿಧಾನಸೌಧಕ್ಕೂ ಕಾಲಿಟ್ಟಿದೆ. ಇದೇ ರೀತಿ ಬಿಟ್ಟರೆ ಸಂಸತ್ತಿನವರೆಗೂ ಈ ಘೋಷಣೆ ಮುಟ್ಟಬಹುದು.
ನಾನು ದ್ವೇಷದ ರಾಜಕಾರಣ ಮಾಡೋಲ್ಲ, ಅದು ನನಗೆ ಗೊತ್ತಿಲ್ಲ: ಸಂಸದೆ ಸುಮಲತಾ
ಕಾಂಗ್ರೆಸ್‌ನ ತುಕ್ಡೆ ಗ್ಯಾಂಗ್‌ಗೆ ಬೆಂಬಲ ನೀಡುವ ನೀತಿಯೂ ಇದಕ್ಕೆ ಕಾರಣ. ಅತಿಯಾದ ಓಲೈಕೆ ಪರಿಣಾಮ ಪಾಕಿಸ್ತಾನ ಘೋಷಣೆಯೊಂದಿಗೆ ಗೆಲುವಿನ ಸಂಭ್ರಮಾಚರಣೆ ಸ್ಥಿತಿಗೆ ಬಂದಿದ್ದಾರೆ, ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಂಥವರಿಗೆ ತಿಹಾರ್ ಜೈಲು ಸೂಕ್ತ ಜಾಗ ಎಂದು ಮಾಜಿ ಸಚಿವ ಸಿ.ಟಿ.ರವಿ ಕಿಡಿಕಾರಿದ್ದಾರೆ. ಇನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಈ ಘೋಷಣೆಗೆ ತೀವ್ರ ಕಿಡಿಕಾರಿದ್ದು, ರಾಜ್ಯ ಸರ್ಕಾರ ದೇಶದ ಪರವಾಗಿದೆಯಾ? ಪಾಕಿಸ್ತಾನದ ಪರವಾಗಿದೆಯಾ ಸ್ಪಷ್ಟಪಡಿಸಬೇಕು, ಪಾಕಿಸ್ತಾನದ ಪರ ಘೋಷಣೆ ಕೂಗಿದ ದೇಶದ್ರೋಹಿ ಬಂಧಿಸಬೇಕು, ನಾಸಿರ್ ಹುಸೇನ್ ರಾಜ್ಯದ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.