
ಬೀದರ್ (ಸೆ.02): ಕಾಂಗ್ರೆಸ್‌ನ ‘ಇಂಡಿಯಾ’ ಭಾಗವಾಗಿರುವ ತಮಿಳುನಾಡು ಡಿಎಂಕೆ ಸರ್ಕಾರದ ಮುಖ್ಯಮಂತ್ರಿ ಸ್ಟಾಲಿನ್ ಮೆಚ್ಚಿಸಲು ರಾಜ್ಯದ ರೈತರ ಹಿತ ಬಲಿಕೊಟ್ಟು ಕಾವೇರಿ ನೀರು ಹರಿಸುವತ್ತ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದರು. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ರೈತರ ನೀರಿನ ಸಂಕಷ್ಟಅರಿವಿದ್ದೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ನಿರ್ಧಾರ ಕೈಗೊಂಡಿರುವ ಉದ್ದೇಶ ಇದೀಗ ಸ್ಪಷ್ಟವಾಗಿದೆ.
ತಮಿಳುನಾಡಿನ ಸ್ಟಾಲಿನ್ ಸರ್ಕಾರ ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವುದರಿಂದಲೇ ತಮಿಳು ರೈತರಿಗೆ ಕಾಂಗ್ರೆಸ್ ಸರ್ಕಾರ ಹೀಗೆ ಸಹಾಯ ಮಾಡಿದೆ ಎಂದು ಶ್ರೀರಾಮುಲು ಕಿಡಿಕಾರಿದರು. ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸುವಲ್ಲಿಯೇ ವಿಳಂಬ ಮಾಡಿದೆ. ‘ಇಂಡಿಯಾ’ ಮೈತ್ರಿಕೂಟದ ಹಿತಾಸಕ್ತಿಗೆ ರಾಜ್ಯದ ರೈತರ ಹಿತವನ್ನು ಬಲಿ ಕೊಟ್ಟಿದೆ ಎಂದರು.
ರಾಕಿ ಕಟ್ಟಿದ ಬಾಲಕಿ, ಬಾತ್‌ರೂಂಗೆ ಹೋಗಿ ಅತ್ತ ಬಾಲಕ: ಶಿಕ್ಷಕರು-ಪೋಷಕರ ನಡುವೆ ವಾಗ್ವಾದ
ಲೋಕಸಭೆಗೆ ಶ್ರೀರಾಮುಲು ಸ್ಪರ್ಧಿಸುವುದು ಸೂಕ್ತ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಸ್ಪರ್ಧೆಗಿಳಿಯುವುದು ಸೂಕ್ತ ಎಂದು ಮಾಜಿ ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಪಾಲಿಕೆಯ ಪ್ರತಿಪಕ್ಷದ ನಾಯಕ ಇಬ್ರಾಹಿಂಬಾಬು ಅವರ ಕಚೇರಿ ಉದ್ಘಾಟನಾ ಸಮಾರಂಭದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎಂಬುದು ನನ್ನ ಭಾವನೆ.
ಈ ಕುರಿತು ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು. ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದು, ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಮುಂದುವರಿಯಲಿದ್ದಾರೆ. ದೇಶದ ಆರ್ಥಿಕ ಹಾಗೂ ಸುರಕ್ಷತಾ ದೃಷ್ಟಿಯಿಂದ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ಅಗತ್ಯವೂ ಇದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದಲ್ಲಿ ಯಾರಲ್ಲೂ ಸಹಮತವಿಲ್ಲ. ಹೀಗಾಗಿ ಬಿಜೆಪಿ ನೇತೃತ್ವದಲ್ಲಿ ಕೇಂದ್ರದಲ್ಲಿ ಮತ್ತೆ ಸರ್ಕಾರ ಬರುವುದು ಖಚಿತ ಎಂದರು.
Mandya: ತಮಿಳುನಾಡಿಗೆ ನೀರು: ರೈತರ ಕಣ್ಣಲ್ಲಿ ರಕ್ತಕಣ್ಣೀರು..!
ನನ್ನ ರಕ್ತದ ಕಣಕಣದಲ್ಲೂ ಬಿಜೆಪಿಯಿದೆ. ಅದನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ನಾನು ಮಾಜಿ ಶಾಸಕ. ಡಿಕೆಶಿ ಅವರನ್ನು ಭೇಟಿ ಮಾಡಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಕೆಲಸವಿತ್ತು. ಹೀಗಾಗಿ ಅವರನ್ನು ಭೇಟಿ ಮಾಡಿದ್ದೆ. ಕಾಂಗ್ರೆಸ್ ಸೇರ್ಪಡೆ ಎನ್ನುವುದು ಕನಸಿನಲ್ಲೂ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್‌ನ ಗ್ಯಾರಂಟಿಗಳಿಂದ ನಮಗೆ ಸೋಲಾಗಿದೆ. ಆದರೆ, ನಾಡಿನ ಮತದಾರರ ಮನಸ್ಸು ಗೆದ್ದಿದ್ದೇವೆ. ನಮ್ಮ ಕೆಲಸಗಳು ಗೆದ್ದಿವೆ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೇರೆ ಪಕ್ಷವನ್ನು ಬೆಂಬಲಿಸಿದ್ದ ಪಾಲಿಕೆ ಸದಸ್ಯರು ಮತ್ತೆ ಪಕ್ಷಕ್ಕೆ ಸೇರುವ ವಿಚಾರದಲ್ಲಿ ನನ್ನ ವಿರೋಧವಿದೆ. ಈ ಕುರಿತು ಪಕ್ಷದ ಹಿರಿಯ ಮುಖಂಡರೇ ತೀರ್ಮಾನಿಸಲಿದ್ದಾರೆ ಎಂದು ಸೋಮಶೇಖರ ರೆಡ್ಡಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.