ಕಾಂಗ್ರೆಸ್‌ ಗ್ಯಾರಂಟಿ ಭರವಸೆಗಳಿಂದ ಸೋಲು: ಸಿ.ಎಸ್‌.ಪುಟ್ಟರಾಜು

Published : May 18, 2023, 02:40 AM IST
ಕಾಂಗ್ರೆಸ್‌ ಗ್ಯಾರಂಟಿ ಭರವಸೆಗಳಿಂದ ಸೋಲು: ಸಿ.ಎಸ್‌.ಪುಟ್ಟರಾಜು

ಸಾರಾಂಶ

ನನ್ನ ಮೇಲೆ ನಿರಂತರ ಅಪಪ್ರಚಾರ, ಕಾಂಗ್ರೆಸ್‌ನ ಗ್ಯಾರಂಟಿ ಭರವಸೆಗಳಿಂದ ಚುನಾವಣೆಯಲ್ಲಿ ನನಗೆ ಸೋಲಾಗಿದೆ. ಸೋಲಿನಿಂದ ಹತಾಶನಾಗಿಲ್ಲ. ಮುಂದಿನ ದಿನಗಳಲ್ಲೂ ಕ್ಷೇತ್ರದಲ್ಲಿದ್ದು ನಿಮ್ಮ ಕಷ್ಟಸುಖದಲ್ಲಿ ಸದಾ ಜೊತೆಗಿರುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಪಾಂಡವಪುರ (ಮೇ.18): ನನ್ನ ಮೇಲೆ ನಿರಂತರ ಅಪಪ್ರಚಾರ, ಕಾಂಗ್ರೆಸ್‌ನ ಗ್ಯಾರಂಟಿ ಭರವಸೆಗಳಿಂದ ಚುನಾವಣೆಯಲ್ಲಿ ನನಗೆ ಸೋಲಾಗಿದೆ. ಸೋಲಿನಿಂದ ಹತಾಶನಾಗಿಲ್ಲ. ಮುಂದಿನ ದಿನಗಳಲ್ಲೂ ಕ್ಷೇತ್ರದಲ್ಲಿದ್ದು ನಿಮ್ಮ ಕಷ್ಟಸುಖದಲ್ಲಿ ಸದಾ ಜೊತೆಗಿರುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಪಟ್ಟಣದ ಟಿಎಪಿಸಿಎಂಎಸ್‌ ಸಭಾಂಗಣದಲ್ಲಿ ಅಪಘಾತದಲ್ಲಿ ಮೃತಪಟ್ಟ ಪುರಸಭೆ ಸದಸ್ಯ ಬಿ.ವೈ.ಬಾಬು ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಸಾಕಷ್ಟುಅಭಿವೃದ್ಧಿ ಕೆಲಸ ಮಾಡಿದ್ದರೂ ನಿರಂತರ ಅಪಪ್ರಚಾರ ಮಾಡಿದರು. ಸೋಲಿನಿಂದ ಕ್ಷೇತ್ರದ ನನ್ನ ಕಾರ್ಯಕರ್ತರು, ಮುಖಂಡರು ಹೆದರುವ ಅಗತ್ಯವಿಲ್ಲ. ಸೋಲಿನಿಂದ ನಾನು ವಿಚಲಿತನಾಗಿಲ್ಲ. ನಮ್ಮ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಎದೆಗುಂದಬಾರದು. ನಾನು ರಾಜಕೀಯದಿಂದ ಹಿಂದೆ ಸರಿಯುವ ಮಾತೇ ಇಲ್ಲ. ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಕಾರ್ಯಕರ್ತರಿಗೆ ಧೈರ್ಯ ಹೇಳಿದರು.

ಎಂಟಿಬಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ: ಶಾಸಕ ಶರತ್‌ ಬಚ್ಚೇಗೌಡ

2004ರಲ್ಲಿ ನಾನು ಪ್ರಥಮ ಬಾರಿಗೆ ಶಾಸಕನಾದಾಗ ನನಗೆ 43,878 ಮತಗಳು ಸಿಕ್ಕಿದ್ದವು. 2018 ರಲ್ಲಿ 96 ಸಾವಿರ ಮತಗಳು ಸಿಕ್ಕಿದ್ದವು. 2023 ಚುನಾವಣೆಯಲ್ಲಿ ನನಗೆ ಸುಮಾರು 80 ಸಾವಿರ ಮತಗಳು ಮಾತ್ರ ಸಿಕ್ಕಿವೆ. ಕಳೆದ ಬಾರಿಗಿಂತ 16 ಸಾವಿರ ಮತಗಳು ಕಡಿಮೆಯಾಗಿವೆ. ಇದಕ್ಕೆ ನನ್ನ ವಿರುದ್ಧ ರೈತ ಸಂಘ ನಿರಂತರ ಅಪಪ್ರಚಾರ ಮತ್ತು ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಹಾಗೂ ಬಿಜೆಪಿ ಅಭ್ಯರ್ಥಿಯ ಕಡಿಮೆ ಮತಗಳಿಕೆಯೂ ಕಾರಣವಾಯಿತು. ಕ್ಷೇತ್ರದಲ್ಲಿ ಹಲವು ಯೋಜೆಗಳಿಗೆ ಕೋಟ್ಯಾಂತರ ರು. ಹಣ ಬಿಡುಗಡೆಯಾಗಿ ಕಾಮಗಾರಿ ಮುಗಿದು, ಹಲವು ಕಾಮಗಾರಿಗಳು ನಡೆಯುತ್ತಿವೆ. ಆದಾಗ್ಯೂ ಮತದಾರರು ನನ್ನನ್ನು ಗೆಲ್ಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಬಾಬು ನಿಧನವೂ ಸೋಲಿಗೆ ಕಾರಣ: ಮೇಲುಕೋಟೆ ಕ್ಷೇತ್ರದಲ್ಲಿ ನನ್ನ ಸೋಲಿಗೆ ಪುರಸಭೆ ಸದಸ್ಯ ಬಿ.ವೈ.ಬಾಬು ಅಕಾಲಿಕ ನಿಧನವೂ ಕಾರಣವಾಯಿತು. ಮೇ 7 ರಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ರ್ಯಾಲಿ ನಿಗದಿಯಾಗಿತ್ತು. ದುರದೃಷ್ಟವಶಾತ್‌ ಅಂದು ಬೆಳಗ್ಗೆ 8 ಗಂಟೆಗೆ ಅಪಘಾತದಲ್ಲಿ ಪುರಸಭೆ ಸದಸ್ಯ ಬಾಬು ನಿಧನರಾದರು. ಪಕ್ಷದ ಮುಖಂಡರ ಮನೆಯಲ್ಲಿ ಶೋಕ ಇದ್ದಿದ್ದರಿಂದ ನಾನು ದೇವೇಗೌಡರ ರ್ಯಾಲಿಯನ್ನು ಅನಿವಾರ್ಯವಾಗಿ ರದ್ದು ಮಾಡಿದ್ದೆ. ದೇವೇಗೌಡರು ಕ್ಷೇತ್ರಕ್ಕೆ ಬಂದಿದ್ದರೆ ನನ್ನ ಮತಗಳಿಗೆ ಇನ್ನಷ್ಟುವೃದ್ಧಿಯಾಗುತ್ತಿತ್ತು ಎಂದು ತಮ್ಮ ಸೋಲಿನ ಕಾರಣಗಳನ್ನು ವಿವರಿಸಿದರು.

ಟಿಎಪಿಸಿಎಂಎಸ್‌ ಅಧ್ಯಕ್ಷ ಡಿ.ಶ್ರೀನಿವಾಸ್‌ ಮಾತನಾಡಿ, ಮೇಲುಕೋಟೆ ಕ್ಷೇತ್ರದ ಅಭಿವೃದ್ಧಿಯಲ್ಲಿ ಮಾಜಿ ಶಾಸಕ ಸಿ.ಎಸ್‌.ಪುಟ್ಟರಾಜು ಪಾತ್ರ ಬಹಳ ದೊಡ್ಡದು. ಆದರೂ ಜನ ಅವರನ್ನು ಸೋಲಿಸುವ ಮೂಲಕ ಕ್ಷೇತ್ರವನ್ನು ಮತ್ತಷ್ಟುಹಿಂದಕ್ಕೆ ಕೊಂಡೊಯ್ದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೂ ಮುನ್ನ ಇತ್ತೀಚೆಗೆ ಮೃತಪಟ್ಟಪುರಸಭೆ ಸದಸ್ಯ ಬಿ.ವೈ.ಬಾಬು ಭಾವಚಿತ್ರಕ್ಕೆ ಮಾಜಿ ಶಾಸಕ ಸಿ.ಎಸ್‌.ಪುಟ್ಟರಾಜು ಹಾಗೂ ಮುಖಂಡರು ಪುಷ್ಪಾರ್ಚನೆ ಸಲ್ಲಿಸಿದರು. ಈ ವೇಳೆ ಜೆಡಿಎಸ್‌ ತಾಲೂಕು ಅಧ್ಯಕ್ಷ ಎಸ್‌.ಎ.ಮಲ್ಲೇಶ್‌, ಪುರಸಭೆ ಮಾಜಿ ಅಧ್ಯಕ್ಷ ಲಿಂಗರಾಜು(ಗುಣ), ವೀರಶೈವ ಸಮುದಾಯದ ಮುಖಂಡ ದ್ಯಾವಪ್ಪ, ಗುರುಸ್ವಾಮಿ ಸೇರಿದಂತೆ ಹಲವರು ಇದ್ದರು.

ಅರುಣ್‌ ಕುಮಾರ್‌ ಪುತ್ತಿಲ ಎಫೆಕ್ಟ್: ಬಿಜೆಪಿ ವೋಟು ಶೇ.4.90 ಕುಸಿತ!

ಕಾರ್ಯಕರ್ತರ ತಂಟೆಗೆ ಬಂದರೆ ಸುಮ್ಮನಿರಲ್ಲ: ಚುನಾವಣೆ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಹಲವು ಕಡೆ ರೈತಸಂಘದ ಕಾರ್ಯಕರ್ತರು ಜೆಡಿಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ನಮ್ಮ ಕಾರ್ಯಕರ್ತರ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಮಾಜಿ ಶಾಸಕ ಸಿ.ಎಸ್‌.ಪುಟ್ಟರಾಜು ಎಚ್ಚರಿಸಿದರು. ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ರೈತ ಸಂಘದ ಕಾರ್ಯಕರ್ತರು ನಮ್ಮ ಪಕ್ಷದ ಮುಖಂಡ ಲಕ್ಷ್ಮೀಶ ಅವರ ಕಾಲು ಮುರಿದ್ದಾರೆ. ಈ ಬಗ್ಗೆ ದೂರು ದಾಖಲಾಗಿದೆ. ಕ್ಷೇತ್ರದಾದ್ಯಂತ ಹಲ್ಲೆಗಳು, ದೌರ್ಜನ್ಯಗಳು ನಡೆದಿವೆ. ನಾವು ಇದುವರೆಗೂ ಕ್ಷೇತ್ರದಲ್ಲಿ ಶಾಂತಿ ಕಾಪಾಡಿಕೊಂಡು ಬಂದಿದ್ದೇವೆ. ನೂತನ ಶಾಸಕರೂ ಸಹ ಶಾಂತಿ ಕಾಪಾಡಬೇಕು. ನಮ್ಮ ಕಾರ್ಯಕರ್ತರ ತಂಟೆಗೆ ಬಂದರೆ ನಾವು ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ