ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಯಿಂದ ಕುಡುಕರಿಗೆ ದೊಡ್ಡ ಆಘಾತವಾಗಿದೆ. ಶೇ 40 ಪಸೆಂರ್‍ಟ್ ಮದ್ಯ ದುಬಾರಿಯಾಗಿದೆ. ಮದ್ಯಪ್ರಿಯರು ಬೀದಿಗಿಳಿದು ಬಂದ್ರೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಕೂರಲು ಆಗೋದಿಲ್ಲ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಾಗಲಕೋಟೆ (ಆ.05): ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಯಿಂದ ಕುಡುಕರಿಗೆ ದೊಡ್ಡ ಆಘಾತವಾಗಿದೆ. ಶೇ 40 ಪಸೆಂರ್‍ಟ್ ಮದ್ಯ ದುಬಾರಿಯಾಗಿದೆ. ಮದ್ಯಪ್ರಿಯರು ಬೀದಿಗಿಳಿದು ಬಂದ್ರೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಕೂರಲು ಆಗೋದಿಲ್ಲ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾಗಲಕೋಟೆ ನಗರದ ಬಸವೇಶ್ವರ ಸರ್ಕಲ್ ಬಳಿ ನಡೆಸಿದ ಬಿಜೆಪಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಅವಧಿಯಲ್ಲಿ ಬೆಲೆ ಏರಿಕೆ ಜಾಸ್ತಿಯಾಗಿದೆ.
ಕುಡುಕರು (ಮದ್ಯಪ್ರಿಯರು) ಬೀದಿಗೆ ಇಳಿದರೆ ಸರ್ಕಾರ ಬೀಳುತ್ತೆ ಎಂದ ಕಾರಜೋಳ ಮದ್ಯದ ದರವನ್ನು ಹಿಂದಿನ ಶೇ 20 ಮತ್ತು ಈಗಿನ ಶೇ 20 ಒಟ್ಟು ಶೇ 40ರಷ್ಟಕ್ಕೆ ಏರಿಸಿದ್ದಾರೆ ಎಂದು ಹೇಳಿದರು. ಎಸ್ಸಿ, ಎಸ್ಟಿಸಮುದಾಯಕ್ಕೆ ಮಿಸಲಿಟ್ಟಹಣ ದುರ್ಬಳಕೆ ಮಾಡಿಕೊಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದ ಕಾರಜೋಳ ಅವರು, ಎಸ್ಸಿ, ಎಸ್ಟಿಗಳ ಮೀಸಲಾತಿ ಹಣವನ್ನು ಅವರ ಅಭಿರ್ವೃದ್ಧಿಗೆ ಬಳಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು. ಉಡುಪಿಯಲ್ಲಿ ನಡೆದ ವಿದ್ಯಾರ್ಥಿಗಳ ಆಶ್ಲೀಲ ವಿಡಿಯೊ ಪ್ರಕರಣ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳು ರಾಜ್ಯದಲ್ಲಿ ನಡೆಯುತ್ತಿದ್ದು, ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಜನಸಾಮಾನ್ಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದರು.
ಲೋಕಸಭೆ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಿರುವ .11 ಸಾವಿರ ಕೋಟಿ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಹಣವನ್ನು ಗ್ಯಾರಂಟಿ ಯೋಜನೆಗೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಪರಿಶಿಷ್ಟಜಾತಿ, ಪಂಗಡದವರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದರು. ಸರ್ಕಾರ ದಿವಾಳಿಯತ್ತ ಹೊರಟಿದ್ದು, ಸಿದ್ದರಾಮಯ್ಯನವರನ್ನು ಅತ್ಯಂತ ವೀಕ್ ಸಿಎಂ ಎಂದು ಟೀಕಿಸಿದರು. ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಸರ್ಕಾರವನ್ನು ಜನರು ಶೀಘ್ರವೇ ಕಿತ್ತೆಸೆಯಲಿದ್ದಾರೆ ಎಂದರು. ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಅವರ ಶಾಸಕರೇ ಹೇಳುತ್ತಿದ್ದು, ಅವರಲ್ಲಿಯೇ ಅಸಮಾಧಾನ ಉಂಟಾಗಿದೆ. ರಾಜ್ಯದಲ್ಲಿ ವಸ್ತುಗಳ ಬೆಲೆ ಏರಿಕೆಯಾಗಿದ್ದರಿಂದ ಜನರು ಜೀವನ ನಡೆಸುವುದು ಕಷ್ಟವಾಗಿದೆ. ರಾಜ್ಯ ಸರ್ಕಾರವು ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ತಮ್ಮ ಖಜಾನೆ ತುಂಬಿಸಿಕೊಳ್ಳುತ್ತಿದ್ದಾರೆ ಎಂದು ಕಾರಜೋಳ ಆರೋಪಿಸಿದರು.
ಕುಮಟಾದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡೇ ಮಾಡುತ್ತೇವೆ: ಸಚಿವ ಮಂಕಾಳ ವೈದ್ಯ
ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಮಾಜಿ ಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಉಪಾಧ್ಯಕ್ಷ ಅಶೋಕ ಲಿಂಬಾವಳಿ, ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬೆಳಗಾವಿ ಪ್ರಭಾರ ಬಸವರಾಜ ಯಂಕಂಚಿ, ನಗರ ಮಂಡಲ ಆದ್ಯಕ್ಷ ಸದಾನಂದ ನಾರಾ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣುರ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಜಯಲಕ್ಷ್ಮಿ ಮುಕುಮನಾಳ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಸವಿತಾ ಹೊಸೂರ, ಪ್ರಧಾನ ಕಾರ್ಯದರ್ಶಿ ಉಮಾ ಚಟ್ಟರಕಿ, ಕಾವೇರಿ ರಾಥೋಡ, ಭಾಗೀರಥಿ ಪಾಟೀಲ, ಸುಜಾತಾ ಶಿಂಧೆ, ವಿಜಯಲಕ್ಷ್ಮಿ ಆಚಾರ್ಯ, ಮಹಾದೇವಿ ಮೂಲಿಮನಿ, ಸುಜಾತಾ ಶಿಂಧೆ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಕಾಶ ಕಾಳೆ, ರಾಜ್ಯ ಕಾರ್ಯಕಾರಣಿ ಸದಸ್ಯ ಶಿವಾನಂದ ಟವಳಿ, ನಾಗರಾಜ ಕಟ್ಟಿಮನಿ, ಕಾಂತು ಖಾತೆದಾರ, ಮಲ್ಲಿಕಾರ್ಜುನ ಗಬ್ಬೂರ, ರಾಜೇಂದ್ರ ಬಳೂಲಮಠ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.