ಕಾಂಗ್ರೆಸ್‌ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ: ಕೆ.ಎಸ್‌.ಈಶ್ವರಪ್ಪ ವಾಗ್ದಾಳಿ

By Kannadaprabha News  |  First Published Sep 10, 2023, 6:15 PM IST

ರಾಜ್ಯದಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. 139 ಜನ ಆತ್ಮಹತ್ಯೆ ಮಾಡಿಕೊಂಡಿರುವ ರೈತರಿಗೆ ಸರ್ಕಾರ ಇನ್ನೂ ಪರಿಹಾರ ಕೊಟ್ಟಿಲ್ಲ. ಬೆಳೆ ಪರಿಹಾರ ಇಲ್ಲ. ಬರಗಾಲ ಘೋಷಣೆ ಮಾಡುತ್ತಿಲ್ಲ. ಈ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. 


ಶಿವಮೊಗ್ಗ (ಸೆ.10): ರಾಜ್ಯದಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. 139 ಜನ ಆತ್ಮಹತ್ಯೆ ಮಾಡಿಕೊಂಡಿರುವ ರೈತರಿಗೆ ಸರ್ಕಾರ ಇನ್ನೂ ಪರಿಹಾರ ಕೊಟ್ಟಿಲ್ಲ. ಬೆಳೆ ಪರಿಹಾರ ಇಲ್ಲ. ಬರಗಾಲ ಘೋಷಣೆ ಮಾಡುತ್ತಿಲ್ಲ. ಈ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಮಳೆ ಇಲ್ಲದೇ ಜನ ಸಾಯುತ್ತಿದ್ದರೂ ಸರ್ಕಾರ ಬರಗಾಲ ಘೋಷಣೆ ಮಾಡದೇ ಕಾಲ ಕಳೆಯುತ್ತಿದ್ದಾರೆ. ಬೆಳೆ ಪರಿಹಾರ ಘೋಷಣೆ ಮಾಡದೇ ನಾಳೆ ಬಾ ಎನ್ನುವಂತೆ ಮಾತನಾಡ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು‌ ಜನರ ಸಂಕಷ್ಟ ಕೇಳುತ್ತಿಲ್ಲ. ಸಂಕಷ್ಟದಲ್ಲಿರುವ ರೈತರಿಗೆ ಧೈರ್ಯ ತುಂಬುತ್ತಿಲ್ಲ. ಮುಂದೆ ಇವರು ಯಾರು ಮಂತ್ರಿ ಆಗಲ್ಲ, ಇವರ ಸರ್ಕಾರ ಬರಲ್ಲ ಎಂದು ಭವಿಷ್ಯ ನುಡಿದರು.

ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ ಎಂದು ಮರುನಾಮಕರಣ ಮಾಡಲು ಹೊರಟಿದೆ. ಯಾವ ದೇಶಭಕ್ತ ಎದೆಯುಬ್ಬಿಸಿ ಭಾರತ್ ಮಾತಾ ಕೀ ಜೈ ಅಂತಾರೋ ಅವರು ಖುಷಿಪಡ್ತಾರೆ. ಯಾವ ವಿದೇಶಿ ವ್ಯಕ್ತಿಗಳು ಇಂಡಿಯಾ ಅಂತಾ ಹೆಸರು ಇಟ್ಟಾಗ ಸಂತೋಷ ಪಟ್ಟಿದ್ದರೋ ಅವರು ಇಂಡಿಯಾ ಅಂತಾ ಮುಂದುವರಿಯುತ್ತಾರೆ ಎಂದು ಪ್ರತಿಕ್ರಿಯಿಸಿದರು. ಭಾರತದಲ್ಲಿ ಹುಟ್ಟಿ ಸನಾತನ ಧರ್ಮದಲ್ಲಿ ಹುಟ್ಟಿದ್ದೇವೆ ಎನ್ನುವುದೇ ನಮಗೆ ಹೆಮ್ಮೆ. ಬ್ರಿಟನ್‌ ಪ್ರಧಾನಮಂತ್ರಿ ಸಹ ನಾನು ಹಿಂದು ಧರ್ಮೀಯ ಅಂತಾ ಹೇಳಲು ಖುಷಿಯಾಗುತ್ತದೆ ಎಂದಿದ್ದಾರೆ. ಇಂಡಿಯಾದಲ್ಲಿ ಇರುವವರು ಸನಾತನ ಧರ್ಮದ ಬಗ್ಗೆ ಮಾತನ್ನು ಟೀಕಿಸಿದ್ದಾರೆ. ಯಾರು ಯಾರು ಸನಾತನ ಧರ್ಮದ ಬಗ್ಗೆ ಟೀಕೆ ಮಾಡಿದ್ದಾರೆ. ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂದು ಕುಟುಕಿದರು.

Latest Videos

undefined

ಕಲ್ಗುಡಿ ಬ್ರಾಂಡ್ 'ಗನ್' ಕೊಡಗಿನ ಮಾರುಕಟ್ಟೆಗೆ ಎಂಟ್ರಿ: ಈ ಗನ್‌ನ ಸ್ಪೆಷಾಲಿಟಿ ಏನು?

ಬರಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ: ರಾಜ್ಯದಲ್ಲಿ ಮಳೆಯ ತೀವ್ರ ಅಭಾವದಿಂದ ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ನೆರವಿಗೆ ತುರ್ತಾಗಿ ಧಾವಿಸಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಬರ ಘೋಷಣೆ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಕಳೆದ ಎರಡು ತಿಂಗಳಿಂದ ಮೀನ-ಮೇಷ ಎಣಿಸುತ್ತಿದೆ. ಬರಪೀಡಿತ ತಾಲೂಕುಗಳ ಅಂಕಿ-ಅಂಶಗಳು ಸರ್ಕಾರದ ಬಳಿ ಇವೆ. ಕೂಡಲೇ ಪಟ್ಟಿ ಮಾಡಿ ಅವುಗಳನ್ನು ಬರಪೀಡಿತ ಪ್ರದೇ‍ಶಗಳು ಎಂದು ತಕ್ಷಣ ಸಾರುವ ಮೂಲಕ ರೈತರ ಸಂಕಷ್ಟ ನಿವಾರಣೆಗೆ ಧಾವಿಸಬೇಕು ಎಂದರು.

ಬರ ಘೋಷಣೆಗೆ ಕೇಂದ್ರ ಎನ್‌ಡಿಆರ್‌ಎಫ್‌ ನಿಯಮಾವಳಿಗಳನ್ನು ತಿದ್ದುಪಡಿ ಮಾಡಿಲ್ಲ ಎಂದು ಕಾಂಗ್ರೆಸ್‌ ಹೇಳುತ್ತಿದೆ. ವಿರೋಧ ಪಕ್ಷಗಳ ನಿಯೋಗವೊಂದನ್ನು ಕೇಂದ್ರಕ್ಕೆ ಕರೆದುಕೊಂಡು ಹೋದರೆ ತಾವು ರಾಜ್ಯಕ್ಕೆ ಏನೇನು ಬೇಕು ಅವೆಲ್ಲವುಗಳನ್ನು ಕೇಂದ್ರದಿಂದ ದೊರಕಿಸಿಕೊಡಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ಇದುವರೆಗೆ 139 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್‌ ಸರ್ಕಾರದ ಅಂಕಿ- ಸಂಖ್ಯೆಗಳಾಗಿವೆ. ರೈತರ ಆತ್ಮಹತ್ಯೆಗಳು ವೈಯಕ್ತಿಕ ಕಾರಣಗಳಿಂದ ಆಗುತ್ತವೆ ಎಂದು ಕಾಂಗ್ರೆಸ್ ಸರ್ಕಾರದ ಸಚಿವರೊಬ್ಬರು ಹೇಳಿಕೊಂಡಿದ್ದಾರೆ. ಇದು ನ್ಯಾಯವಾ? ಎಂದು ಪ್ರಶ್ನಿಸಿದರು.

ಗೆಳೆಯನ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನ: ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ ಗೊತ್ತಾ?

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬರೀ ಗ್ಯಾರಂಟಿಗಳ ಅನುಷ್ಠಾನದ ಕಡೆಗೆ ಹೆಚ್ಚು ಗಮನ ಹರಿಸಿದೆ. ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದರೂ ಇತ್ತ ಕಿಂಚಿತ್ತೂ ಗಮನ ಹರಿಸುತ್ತಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ರೈತರ ಸಮಸ್ಯೆಗಳ ಕಡೆಗೆ ಗಮನ ಹರಿಸದೇ ಇನ್ನೂ ಹನಿಮೂನ್ ಮೂಡ್‌ನಲ್ಲಿ ಇದ್ದಾರೆ. ಯಾವುದೇ ಸಚಿವರು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಆಪಾದಿಸಿದ ಅವರು, ರಾಜ್ಯದಲ್ಲಿ ಕೇವಲ ಒಂದೂವರೆ ಕೋಟಿ ಜನರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ಕೊಡಲು ಸಾಧ್ಯ. ಇನ್ನುಳಿದ ಐದೂವರೆ ಕೋಟಿ ಜನರ ಗತಿ ಏನು? ಅದರ ಮೇಲೆ ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಗ್ಯಾರಂಟಿ ಕಾರ್ಡ್‌ ಜೊತೆಗೆ ಈ ಸರ್ಕಾರವನ್ನೇ ಕೋರ್ಟ್‌ ವಜಾ ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದರು.

click me!