ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ರಾಷ್ಟ್ರನಾಯಕರ ಮಟ್ಟದ ಚರ್ಚೆಯಾಗಬೇಕು, ಮೈತ್ರಿ ಎಂದರೆ ಕಾರ್ಯಕರ್ತರ ನಡುವೆ ಸಾಮರಸ್ಯ ಇರಬೇಕು ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಆಗುತ್ತಿದೆ. ನಾನು ಬಿಜೆಪಿ, ಜೆಡಿಎಸ್ ಮೈತ್ರಿ ವಿರೋಧ ಮಾಡಲ್ಲ ಎಂದು ಸ್ವಪಕ್ಷದ ವಿರುದ್ಧವೇ ಮಾಜಿ ಸಚಿವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗುಡುಗಿದ್ದಾರೆ.
ಚಿತ್ರದುರ್ಗ (ಅ.09): ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ರಾಷ್ಟ್ರನಾಯಕರ ಮಟ್ಟದ ಚರ್ಚೆಯಾಗಬೇಕು, ಮೈತ್ರಿ ಎಂದರೆ ಕಾರ್ಯಕರ್ತರ ನಡುವೆ ಸಾಮರಸ್ಯ ಇರಬೇಕು ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಆಗುತ್ತಿದೆ. ನಾನು ಬಿಜೆಪಿ, ಜೆಡಿಎಸ್ ಮೈತ್ರಿ ವಿರೋಧ ಮಾಡಲ್ಲ ಎಂದು ಸ್ವಪಕ್ಷದ ವಿರುದ್ಧವೇ ಮಾಜಿ ಸಚಿವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗುಡುಗಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಜೆಡಿಎಸ್, ಕಾಂಗ್ರೆಸ್ ವಿರೋಧಿಸಿಕೊಂಡು ಬಂದಿದ್ದಾರೆ,. ಈ ಹಿಂದೆ ಜೆಡಿಎಸ್ ಗೆ ವಚನ ಭ್ರಷ್ಟರು ಎಂದು ನಾವೇ ಹೇಳಿದ್ದೆವು. ಅಂಥವರ ಜತೆ ಯಾವ ರೀತಿ ಮೈತ್ರಿ ಎಂದು ಜನ ಕೇಳುತ್ತಿದ್ದಾರೆ ಎಂದರು.
ರಾಜ್ಯ ನಾಯಕರನ್ನು ಹೊರಗಿಟ್ಟು ಮೈತ್ರಿ ಅಪೂರ್ಣ ಆಗುತ್ತದೆ. ರಾಜ್ಯ ನಾಯಕರು, ಬಿಎಸ್ ವೈ ರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಮ್ಮ ರಾಜ್ಯ ನಾಯಕರು ಬಿಎಸ್‌ವೈರನ್ನು ಕತ್ತಲೆಯಲ್ಲಿಟ್ಟು ಮೈತ್ರಿ. ಮಾಡಿಕೊಂಡಿದ್ದಾರೆ. ಬಿಜೆಪಿ ಕಾಂಗ್ರೆಸ್ ಮೈತ್ರಿ ಎಷ್ಟರಮಟ್ಟಿಗೆ ಯಶಸ್ವಿ ಆಗುತ್ತದೆ. ಮೈತ್ರಿ ಎರಡನೇ ಭಾಗ, ಈವರೆಗೆ ರಾಜ್ಯಾದ್ಯಕ್ಷ, ವಿಪಕ್ಷ ನಾಯಕರ ಆಯ್ಕೆ ಆಗಿಲ್ಲ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ನೋವಿನಿಂದ ಮಾತಾಡುತ್ತಿದ್ದಾರೆ. ಬಿಜೆಪಿ ಒಂದು ವಿಭಿನ್ನ ಪಕ್ಷವೆಂದು ಹೇಳುತ್ತೇವೆ. ಕಾರ್ಯಕರ್ತರನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದರು.
undefined
ಬೆಳ್ಳಂ ಬೆಳ್ಳಿಗ್ಗೆ ಬೆಂಗಳೂರಿನಲ್ಲಿ ಮಳೆರಾಯ ಆಗಮನ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಬೇರೆಯವರಿಗೆ ಟೀಕೆ ಮಾಡಲು ನಮಗೆ ಯಾವ ನೈತಿಕತೆ ಇದೆ. ಮೊದಲು ರಾಜ್ಯಾದ್ಯಕ್ಷ, ವಿಪಕ್ಷ ನಾಯಕರ ಆಯ್ಕೆ ಮಾಡಲಿ. ಲೋಕಸಭೆ ಚುನಾವಣೆ ಪೂರ್ವದಲ್ಲೇ ಆಯ್ಕೆ ಆಗಬೇಕು. ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗುವ ಅಪೇಕ್ಷೆ ಹೇಳಿದ್ದೇನೆ. ಪಕ್ಷದ ನಾಯಕರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ. ನಾನು ಸಂಘಟನೆಯಿಂದ ಬಂದವನು, ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲ. ನಮ್ಮದೇ ಪಕ್ಷದ ಕೆಲವರು ಹಾಗೇ ಅಪಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಸೋಲಿಗೆ ನಾಯಕರ ದೌರ್ಬಲ್ಯ ಕಾರಣ ಎಂದು ರೇಣುಕಾಚಾರ್ಯ ತಿಳಿಸಿದರು.