ಶಾಸಕ ಯತ್ನಾಳ್‌ಗೆ ನೋಟಿಸ್‌ ನೀಡಬೇಕು: ರೇಣುಕಾಚಾರ್ಯ

By Kannadaprabha News  |  First Published Dec 14, 2023, 1:08 PM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರನ್ನು ಟೀಕಿಸುವುದರಿಂದ ದೊಡ್ಡಮಟ್ಟದ ನಾಯಕನಾಗುತ್ತೇನೆಂಬ ಹಗಲುಗನಸು ಕಾಣಬೇಡಿ. ಭ್ರಮಾಲೋಕದಲ್ಲಿರುವ ನೀವು ದೊಡ್ಡಮಟ್ಟದ ನಾಯಕನಾಗಲು ಸಾಧ್ಯವೇ ಇಲ್ಲ.
 


ದಾವಣಗೆರೆ (ಡಿ.14): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರನ್ನು ಟೀಕಿಸುವುದರಿಂದ ದೊಡ್ಡಮಟ್ಟದ ನಾಯಕನಾಗುತ್ತೇನೆಂಬ ಹಗಲುಗನಸು ಕಾಣಬೇಡಿ. ಭ್ರಮಾಲೋಕದಲ್ಲಿರುವ ನೀವು ದೊಡ್ಡಮಟ್ಟದ ನಾಯಕನಾಗಲು ಸಾಧ್ಯವೇ ಇಲ್ಲ. ಯತ್ನಾಳ್‌ ಅನಗತ್ಯ ಟೀಕೆ ಮಾಡುತ್ತಾ ಪಕ್ಷಕ್ಕೆ ಮುಜುಗರ ತರುತ್ತಿದ್ದಾರೆ. ತಕ್ಷಣ ಯತ್ನಾಳ್‌ಗೆ ನೋಟಿಸ್ ನೀಡಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಒತ್ತಾಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪನವರಿಗೆ ಪದೇ ಪದೆ ಟೀಕಿಸುವುದರಿಂದ ದೊಡ್ಡಮಟ್ಟದ ನಾಯಕನಾಗಲು ಸಾಧ್ಯ ಇಲ್ಲ. ಈ ವಿಚಾರದಲ್ಲಿ ಹಗಲುಗನಸು ಕಾಣಬೇಡಿ, ಭ್ರಮಾಲೋಕದಿಂದ ಹೊರ ಬನ್ನಿ ಎಂದರು.

ನಮಗೂ ಏರುಧ್ವನಿಯಲ್ಲಿ ಮಾತನಾಡಲು ಬರುತ್ತದೆ. ಹಿಂದೆ ಯತ್ನಾಳ್‌ರನ್ನು ಕೇಂದ್ರ ಸಚಿವರನ್ನಾಗಿ ಮಾಡಿದ್ದು ಯಡಿಯೂರಪ್ಪ. ಜೆಡಿಎಸ್‌ಗೆ ಇದೇ ಯತ್ನಾಳ್ ಹೋದಾಗ ಮತ್ತೆ ಬಿಜೆಪಿಗೆ ವಾಪಸ್ಸು ಕರೆ ತಂದಿದ್ದು ಸಹ ಯಡಿಯೂರಪ್ಪನವರೇ ಎಂಬುದನ್ನು ಯತ್ನಾಳ್ ಮರೆಯಬಾರದು ಎಂದು ತಿಳಿಸಿದರು. ಹಿಂದಿನ ಸರ್ಕಾರದಲ್ಲಿ ಮಂತ್ರಿ ಮಾಡಲಿಲ್ಲವೆಂದು ಯತ್ನಾಳ್ ಈಗಲೂ ಟೀಕಿಸುತ್ತಿದ್ದಾರೆ. ನಾವೇ ಬಹಳಷ್ಟು ಜನ ಹೋಗಿ ಶಾಸಕರನ್ನು ಒಪ್ಪಿಸಿದ್ದೆವು. ಆದರೂ, ಬಸವನಗೌಡ ಪಾಟೀಲ್ ಯತ್ನಾಳ್ ಮಾಜಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿ.ವಿಜಯೇಂದ್ರರನ್ನು ಟೀಕಿಸುತ್ತಿದ್ದಾರೆ ಎಂದು ದೂರಿದರು.

Latest Videos

undefined

ಹುಕ್ಕಾಬಾರ್‌ ನಿಯಂತ್ರಣಕ್ಕೆ ಕಾನೂನು: ಗೃಹ ಸಚಿವ ಪರಮೇಶ್ವರ್‌

ಅನಗತ್ಯವಾಗಿ ಯಡಿಯೂರಪ್ಪ, ವಿಜಯೇಂದ್ರರಿಗೆ ಟೀಕೆ ಯಾಕೆ ಮಾಡಬೇಕು? ಇದರಿಂದ ಯಾವುದೇ ಪ್ರಯೋಜನವೂ ಇಲ್ಲ. ವಿಜಯೇಂದ್ರ ಅವರನ್ನು ಗುರಿಯಾಗಿಟ್ಟುಕೊಂಡು, ಮಾತನಾಡುವುದು ಯತ್ನಾಳ್‌ಗೆ ಶೋಭೆ ತರುವುದಿಲ್ಲ. ಇದರಿಂದ ಯತ್ನಾಳ್ ವ್ಯಕ್ತಿತ್ವಕ್ಕೆ ಧಕ್ಕೆ ಬರುತ್ತದೆ. ಇನ್ನಾದರೂ ಯತ್ನಾಳ್ ತಮ್ಮ ಮಾತಿನ ಮೇಲೆ ನಿಗಾ ಇಡಲಿ ಎಂದು ಸಲಹೆ ನೀಡಿದರು. ಬಿಜೆಪಿ ಬಿಟ್ಟಿದ್ದ ವೇಳೆ ಬಸವನಗೌಡ ಪಾಟೀಲ್ ಯತ್ನಾಳ್ ಜೆಡಿಎಸ್‌ ಸೇರಿದ್ದರು. ಆಗ ಅಲ್ಪಸಂಖ್ಯಾತರ ಟೋಪಿ ಧರಿಸಿದ್ದರು. ನನಗೂ ಕೆಲವರು ವಿಜಯಪುರದಿಂದ ಯತ್ನಾಳ್ ಮುಸ್ಲಿಮರ ಟೋಪಿ ಧರಿಸಿದ್ದ ಫೋಟೋಗಳನ್ನು ಕಳುಹಿಸಿದ್ದಾರೆ. ಯತ್ನಾಳ್‌ ಕಾಲಕ್ಕೆ ತಕ್ಕಂತೆ ಬದಲಾಗುತ್ತಿದ್ದಾರೆ. ನಮಗೂ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಗೊತ್ತು. ಯತ್ನಾಳ್‌ರ ಅಡ್ಜಸ್ಟ್‌ಮೆಂಟ್ ರಾಜಕಾರಣ ಎಲ್ಲಿದೆ, ಯಾರ ಜೊತೆಗಿದೆ ಎಂಬ ವಿಚಾರವೂ ಗೊತ್ತಿದೆ ಎಂದು ತಿಳಿಸಿದರು.

click me!