ಸಿದ್ದು ವಿರುದ್ಧ ಗೆದ್ದರೆ ಸಿಎಂ ಆಗ್ತೀನಿ ಅಂತ 2 ಕಡೆ ಸ್ಪರ್ಧೆಗೆ ಒಪ್ಪಿದ್ದ ಸೋಮಣ್ಣ: ರೇಣುಕಾಚಾರ್ಯ

By Kannadaprabha News  |  First Published Nov 29, 2023, 6:03 AM IST

ಸೋಮಣ್ಣ ಅವರಿಗೆ ಎರಡು ಕಡೆ ಸ್ಪರ್ಧಿಸಿ ಎಂದು ಹೇಳಿದ್ದು ಹೈಕಮಾಂಡ್‌. ಯಡಿಯೂರಪ್ಪ ಅಲ್ಲ. ಸಿದ್ದರಾಮಯ್ಯ ವಿರುದ್ದ ಗೆದ್ದರೆ ಸಿಎಂ ಆಗ್ತೀನಿ ಎಂಬ ಭ್ರಮೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದರು ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.


ತುಮಕೂರು (ನ.29): ಸೋಮಣ್ಣ ಅವರಿಗೆ ಎರಡು ಕಡೆ ಸ್ಪರ್ಧಿಸಿ ಎಂದು ಹೇಳಿದ್ದು ಹೈಕಮಾಂಡ್‌. ಯಡಿಯೂರಪ್ಪ ಅಲ್ಲ. ಸಿದ್ದರಾಮಯ್ಯ ವಿರುದ್ದ ಗೆದ್ದರೆ ಸಿಎಂ ಆಗ್ತೀನಿ ಎಂಬ ಭ್ರಮೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದರು ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸೋಮಣ್ಣ ದೆಹಲಿಗೆ ಹೋಗಿ ವರಿಷ್ಠರ ಜತೆ ಚರ್ಚೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. 

ಆದರೆ, ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಸೋಮಣ್ಣರಿಗಿಲ್ಲ. ಬಿಜೆಪಿಯಲ್ಲಿ ಅನ್ಯಾಯವಾಗಿದೆ, ನಾನು ಕಾಂಗ್ರೆಸ್‌ನಲ್ಲಿದ್ದರೆ ಮಂತ್ರಿಯಾಗಿರುತ್ತಿದ್ದೆ ಎಂದು ಕೆಲವರ ಬಳಿ ಸೋಮಣ್ಣ ಹೇಳಿಕೊಂಡಿದ್ದಾರೆ. ಕಾಂಗ್ರೆಸ್‌ನವರು ಇವರಿಗೆ ಹಿಂದೆ ಏನು ಸ್ಥಾನಮಾನ ಕೊಟ್ಟಿದ್ದರು? ನೀವು ಸೋತು ಎಲ್ಲೋ ಇದ್ದಾಗ, ನಿಮ್ಮ ಕಣ್ಣೀರು ಒರೆಸಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಕೇಳಿದ ಖಾತೆ ಕೊಟ್ಟಿದ್ದು ಯಡಿಯೂರಪ್ಪ ಮಾಡಿದ ಅಪರಾಧವೇ? ಎಂದು ಪ್ರಶ್ನಿಸಿದರು.

Latest Videos

undefined

ರಾಜ್ಯ ಸರ್ಕಾರ ಹೊಸದಾಗಿ ಜಾತಿಗಣತಿ ನಡೆಸಲಿ: ಮಾಜಿ ಸಚಿವ ರೇಣುಕಾಚಾರ್ಯ

ವಿಜಯೇಂದ್ರ, ಆರ್‌.ಅಶೋಕ್‌ ನಾಳೆ ಅವಳಿ ತಾಲೂಕಿಗೆ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನ.30ರಂದು ಬೆಳಗ್ಗೆ 9ಕ್ಕೆ ಸವಳಂಗ ಸರ್ಕಲ್ ಗೆ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. ಸವಳಂಗ ಗ್ರಾಮದ ಮಿಕ್ಕಿಮಾರಮ್ಮ ದೇವಸ್ಥಾನದಲ್ಲಿ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷ ಹಾಗೂ ಆರ್.ಅಶೋಕ್ ವಿಪಕ್ಷ ನಾಯಕರಾದ ಮೇಲೆ ಇದೇ ಮೊದಲ ಬಾರಿ ಹೊನ್ನಾಳಿ ನ್ಯಾಮತಿ ತಾಲೂಕಿಗೆ ಆಗಮಿಸುತ್ತಿದ್ದು ಅವರನ್ನು ಸವಳಂಗ ಸರ್ಕಲ್ ನಲ್ಲಿ ಬಿಜೆಪಿ ಹೊನ್ನಾಳಿ ಮಂಡಲ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಗುವುದು. 

ಅಂದು ಹೊನ್ನಾಳಿ ನ್ಯಾಮತಿ ತಾಲೂಕಿನ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಅವಳಿ ತಾಲೂಕಿನಲ್ಲಿ ನೂತನ ರಾಜ್ಯಾಧ್ಯಕ್ಷರು ಹಾಗೂ ವಿಪಕ್ಷ ನಾಯಕರಿಗೆ ಬೃಹತ್ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಜಿ.ಪಂ.ಮಾಜಿ ಉಪಾಧ್ಯಕ್ಷ ಸುರೇಂದ್ರನಾಯ್ಕ, ಜಿಲ್ಲಾ ಪ್ರಧಾನಕಾರ್ಯದರ್ಶಿ ಅರಕೆರೆ ನಾಗರಾಜ್, ಮಾಜಿ ನಿರ್ದೇಶಕರಾದ ಶಿವು ಹುಡೇದ್, ಮಾರುತಿ ನಾಯ್ಕ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಗಿರೀಶ್ ಪಟೇಲ್, ಗ್ರಾ.ಪಂ.ಸದಸ್ಯರಾದ ಕೊಡತಾಳ್ ನಾಗರಾಜ್, ಗ್ರಾ.ಪಂ.ಅಧ್ಯಕ್ಷರಾದ ಗೋವಿಂದ್, ಸುರಹೊನ್ನೆ ಸದಣ್ಣ, ಮಾಜಿ ತಾ.ಪಂ.ಸದಸ್ಯ ಹನುಮಂತಪ್ಪ, ಸೋಗಿಲು ಮಂಜುನಾಥ್, ಸಂತೋಷ್, ಕಾಮೇಶ್ ನಾಯ್ಕ,ಬಿದರಹಳ್ಳಿ ಯೋಗೇಶ್, ಮಾದಾಪುರ ಮಂಜು ಪಾಟೀಲ್, ಸೇರಿ ಮತ್ತಿತತರಿದ್ದರು.

ಸೋಮಣ್ಣರಿಂದ ಸಿದ್ಧಗಂಗಾ ಮಠದಲ್ಲಿ ರಾಜಕಾರಣವೇಕೆ?: ರೇಣುಕಾಚಾರ್ಯ ಅಸಮಾಧಾನ

ವಿಪಕ್ಷ ನಾಯಕ ಆರ್.ಅಶೋಕ್ ಇಂದು ಬರ ಅಧ್ಯಯನ: ವಿಪಕ್ಷ ನಾಯಕ ಆರ್.ಅಶೋಕ್ 29ರಂದು (ಬುಧವಾರ) ಮಧ್ಯಾಹ್ನ 3 ಗಂಟೆಗೆ ಸವಳಂಗ ಸರ್ಕಲ್‍ನಿಂದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.

click me!