ಬಿಜೆಪಿಗೆ ಮೋದಿ ಇದ್ದಂತೆ ಕಾಂಗ್ರೆಸ್‌ ಪಕ್ಷಕ್ಕೆ ಸಿದ್ದರಾಮಯ್ಯ: ಎಂಟಿಬಿ ನಾಗರಾಜ್‌ ಹೊಗಳಿಕೆ!

By Kannadaprabha News  |  First Published Jun 11, 2023, 10:08 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಎಂಟಿಬಿ ನಾಗರಾಜ್‌ ಮತ್ತೆ ಹೊಗಳಿದ್ದಾರೆ. ಬಿಜೆಪಿಗೆ ಪ್ರಧಾನಿ ನರೇಂದ್ರ ಮೋದಿ ಹೇಗೆ ಒನ್‌ ಮ್ಯಾನ್‌ ಆರ್ಮಿಯೋ ಅದೇ ರೀತಿ ಕಾಂಗ್ರೆಸ್‌ ಪಕ್ಷಕ್ಕೆ ಸಿದ್ದರಾಮಯ್ಯ ಕೂಡ ಒನ್‌ ಮ್ಯಾನ್‌ ಆರ್ಮಿ. 


ಹೊಸಕೋಟೆ (ಜೂ.11): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಎಂಟಿಬಿ ನಾಗರಾಜ್‌ ಮತ್ತೆ ಹೊಗಳಿದ್ದಾರೆ. ಬಿಜೆಪಿಗೆ ಪ್ರಧಾನಿ ನರೇಂದ್ರ ಮೋದಿ ಹೇಗೆ ಒನ್‌ ಮ್ಯಾನ್‌ ಆರ್ಮಿಯೋ ಅದೇ ರೀತಿ ಕಾಂಗ್ರೆಸ್‌ ಪಕ್ಷಕ್ಕೆ ಸಿದ್ದರಾಮಯ್ಯ ಕೂಡ ಒನ್‌ ಮ್ಯಾನ್‌ ಆರ್ಮಿ. ಅವರಿಂದಲೇ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ 135 ಸ್ಥಾನ ಪಡೆಯಲು ಸಾಧ್ಯವಾಯಿತು ಎಂದು ಹೇಳಿದ್ದಾರೆ. ಹೊಸಕೋಟೆಯಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿ ಆದಾಗ ಸಚಿವ ಸಂಪುಟ ನಡೆಸದೆಯೇ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ದರು. ಆದರೆ ಈ ಬಾರಿ ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ಆ ರೀತಿ ಘೋಷಣೆ ಮಾಡಲು ಅವರಿಂದ ಆಗಿಲ್ಲ ಎಂದು ಇದೇ ವೇಳೆ ತಿಳಿಸಿದರು.

ಸುಳ್ಳು ಹೇಳಿ ಬಿಜೆಪಿ ಅಧಿಕಾರ ಕಸಿದುಕೊಂಡ ಕಾಂಗ್ರೆಸ್‌: ಕಾಂಗ್ರೆಸ್‌ ಚುನಾವಣೆಯಲ್ಲಿ ಸುಳ್ಳು ಆಶ್ವಾಸನೆ ಹಾಗೂ ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡುತ್ತಲೆ ಅಧಿಕಾರ ಕಸಿದುಕೊಂಡರು ಎಂದು ವಿಧಾನ ಪರಿಷತ್‌ ಸದಸ್ಯ ಎಂಟಿಬಿ ನಾಗರಾಜ್‌ ತಿಳಿಸಿದರು. ನಗರದಲ್ಲಿ ಆಯೋಜಿಸಿದ್ದ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಚುನಾವಣಾ ಸಂದರ್ಭದಲ್ಲಿ ತೆಗೆದುಕೊಂಡ ಮೀಸಲಾತಿ ನಿರ್ಧಾರ ಸಾಕಷ್ಟು ಪೆಟ್ಟು ಕೊಟ್ಟಿತು. 

Tap to resize

Latest Videos

ವಿದ್ಯುತ್‌ ಬಿಲ್‌ ಕಟ್ಟಬೇಡಿ, ಸಂಪರ್ಕ ಕಡಿತಗೊಳಿಸಿದ್ರೆ ನಾವಿದ್ದೇವೆ: ನಳಿನ್‌ ಕುಮಾರ್‌ ಕಟೀಲ್‌

ಒಂದಿಷ್ಟು ಸಮುದಾಯಕ್ಕೆ ಒಳಿತಾದರೂ ಬಂಜಾರ, ಲಂಬಾಣಿಯಂತಹ ಸಣ್ಣ ಸಮುದಾಯಗಳು ಪಕ್ಷಕ್ಕೆ ಮತ ನೀಡಿಲ್ಲ. ಮುಖ್ಯವಾಗಿ ಕಾಂಗ್ರೆಸ್‌, ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಕ್ಕೆ, ಕೌಂಟರ್‌ ಕೊಡಲು ನಮ್ಮ ಪಕ್ಷ ಸಂಪೂರ್ಣ ವಿಫಲವಾಯಿತು. ಕಾಂಗ್ರೆಸ್‌ ಗ್ಯಾರಂಟಿಗಳ ಘೋಷಣೆ ಮಾಡಿತು. ಚುನಾವಣೆ ಕೇವಲ 8 ದಿನ ಇದ್ದಾಗ ಬಿಜೆಪಿ ಪ್ರಣಾಳಿಕೆ ಘೋಷಣೆ ಮಾಡಿದ್ದು ಸೋಲಿಗೆ ಕಾರಣವಾಯಿತು ಎಂದರು. ಕಳೆದ ಉಪ ಚುನಾವಣೆಯಲ್ಲಿ ನಾನು ಸೋತಿದ್ರು ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ 400 ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದೆ. 

ಆದರೂ ಕೆಲವರು ಪಕ್ಷದಲ್ಲಿದ್ದುಕೊಂಡು ಪಕ್ಷದ್ರೋಹ ಮಾಡಿದರು. ಸಾಕಷ್ಟುಕಾರ್ಯಕರ್ತರು ಮೈಮರೆತ ಪರಿಣಾಮ ಸೋಲುಣಬೇಕಾಯಿತು ಎಂದು ಎಂಟಿಬಿ ನಾಗರಾಜ್‌ ತಿಳಿಸಿದರು. ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಹುಲ್ಲೂರು ಸಿ.ಮಂಜುನಾಥ್‌, ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್‌, ಟೌನ್‌ ಅಧ್ಯಕ್ಷ ಡಾ.ಸಿ.ಜಯರಾಜ್‌, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಹುಬ್ಬಳ್ಳಿ ಏರ್ಪೋರ್ಟ್‌ ವಿಸ್ತರಣೆಗೆ ಕೇಂದ್ರದಿಂದ 273 ಕೋಟಿ: ಪ್ರಲ್ಹಾದ್‌ ಜೋಶಿ

ಅಲ್ಲಾ ಕ್ಷಮಿಸಲ್ಲ: ಕ್ಷೇತ್ರಕ್ಕೆ ಬಂದಾಗಿನಿಂದ ನಾನು ಸರ್ವಧರ್ಮದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಪ್ರಮುಖವಾಗಿ ಅಲ್ಪಸಂಖ್ಯಾತರಗ್ರಾಮಗಳಾದ ಕಟ್ಟಿಗೇನಹಳ್ಳಿ, ಬೈಲನರಸಾಪುರ, ಹಿಂಡಿಗನಾಳ, ಮೇಡಿ ಮಲ್ಲಸಂದ್ರ ಗ್ರಾಮಗಳಲ್ಲಿ ಶೇ. 10ರಷ್ಟುಮತ ಹಾಕಿದ್ದೀರಿ. ಚುನಾವಣೆ ಸಂದರ್ಭದಲ್ಲಿ ನಮ್ಮ ಬಳಿ ಹಣ, ಉಡುಗೊರೆ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಕುರಾನ್‌, ಅಲ್ಲಾ ಮೇಲೆ ಪ್ರಮಾಣ ಮಾಡಿ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿದ್ದೀರಿ. ಮೂರು ಬಾರಿ ಪ್ರಾರ್ಥನೆ ಮಾಡುವ ನಿಮ್ಮನ್ನು ಅಲ್ಲಾ ಎಂದಿಗೂ ಕ್ಷಮಿಸಲ್ಲ ಎಂದು ಅಲ್ಪಸಂಖ್ಯಾತರ ವಿರುದ್ಧ ಎಂಟಿಬಿ ನಾಗರಾಜ್‌ ಬೇಸರ ವ್ಯಕ್ತಪಡಿಸಿದರು.

click me!