ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಯಾರೂ ಕನಸಿನಲ್ಲೂ ಊಹಿಸಿರಲಿಲ್ಲ. ಆದರೆ ಐದು ಗ್ಯಾರಂಟಿ ಎಂಬ ಸುಳ್ಳು ಭರವಸೆಗಳನ್ನು ನೀಡಿ ಇಸ್ಪೀಟ್‌ನ ಜೂಜಾಟ ಅಂದರ್ ಬಾಹರ್ ತರದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಆರ್.ಅಶೋಕ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರ (ಜೂ.23): ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಯಾರೂ ಕನಸಿನಲ್ಲೂ ಊಹಿಸಿರಲಿಲ್ಲ. ಆದರೆ ಐದು ಗ್ಯಾರಂಟಿ ಎಂಬ ಸುಳ್ಳು ಭರವಸೆಗಳನ್ನು ನೀಡಿ ಇಸ್ಪೀಟ್‌ನ ಜೂಜಾಟ ಅಂದರ್ ಬಾಹರ್ ತರದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಆರ್.ಅಶೋಕ್ ಲೇವಡಿ ಮಾಡಿದರು. ಗುರುವಾರ ಬಾಗೇಪಲ್ಲಿ ಕಸಬಾ ಹೋಬಳಿಯ ಕೊಂಡಂವಾರಿಪಲ್ಲಿ ಎಸ್‌ಎಲ್‌ಎನ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಮತ್ತು ರಾಜ್ಯದಲ್ಲಿ ಬಿ.ಎಸ್.ಯಡಯೂರಪ್ಪ. ಎಸ್.ಅರ್.ಬೋಮ್ಮಾಯಿ ನೇತೃತ್ವದ ಸರ್ಕಾರಗಳ ಅಭಿವೃದ್ಧಿ ಕೆಲಸಗಳನ್ನು ಜನಕ್ಕೆ ತಲುಪಿಸುವಲ್ಲಿ ವಿಫಲರಾದ ಕಾರಣ ಸೋತಿದ್ದೇವೆ ಎಂದರು.
ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಗಿದೆ: ಅದರೆ ನಮಗೆ ಇಡಿ ರಾಜ್ಯದಲ್ಲಿ ಕಳೆದ ಬಾರಿಗಿಂತ ಹೆಚ್ಚು ಮತಗಳು ಬಂದಿವೆ. ಕಾಂಗ್ರೆಸ್‌ಗೆ ಗೆಲ್ಲುತ್ತೇವೆ ಎಂಬ ನಂಬಿಕೆ ಇರಲಿಲ್ಲ. ಕಡಿಮೆ ಸೀಟುಗಳು ಬರುತ್ತೇವೆ ಆಗ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುವ ಲೆಕ್ಕ ಚಾರ ಹಾಕಿದ್ದರು. ಹಾಗೇನಾದರೂ ಅಗಿದ್ದರೆ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಅಧಿಕಾರಕ್ಕೆ ಬರಲಿಲ್ಲ ಗ್ಯಾರಂಟಿ ಗಳನ್ನು ಮಾಡುವುದಕ್ಕೆ ಅವಕಾಶ ಇಲ್ಲ ಎಂದು ನುಣುಚಿಕೊಳ್ಳಲು ಕಾಂಗ್ರೆಸ್‌ನವರು ಲೆಕ್ಕಚಾರ ಮಾಡಿದ್ದರು ಎಂದು ಹೇಳಿದರು. ಸಂಸದ ಪಿ.ಸಿ.ಮೋಹನ್ ಮಾತನಾಡಿ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ನಮ್ಮ ಪಕ್ಷ ಯಾವುದೇ ಗ್ಯಾರಂಟಿ ಭರವಸೆಗಳನ್ನು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ. ನಾವು ಸೋತಿಲ್ಲ ನಿರೀಕ್ಷೆಗೂ ಮೀರಿ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಂದರು.
ಮೋದಿ ಆಡಳಿತಾವಧಿಯಲ್ಲಿ ಸಣ್ಣ ಭ್ರಷ್ಟ್ರಚಾರ ತೋರಿಸಿ: ಸಂಸದ ಸದಾನಂದಗೌಡ
ಜನರೇ ಕಾಂಗ್ರೆಸ್ಸನ್ನು ಬೀದಿಗೆ ನಿಲ್ಲಿಸುತ್ತಾರೆ: ಸಂಸದ ಮುನಿಸ್ವಾಮಿ ಮಾತನಾಡಿ, ಈಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಕೈಲಾಗದವನು ಮೈಪರಚಿ ಕೊಂಡ ಎಂಬಂತೆ ಸಿದ್ದರಾಮಯ್ಯ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡುತ್ತಿಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯನವರೇ ನಿಮಗೆ ನಾಚಿಕೆಯಾಗಬೇಕು. ಮಹಿಳೆಯರಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಹೇಳಿ 4ರಿಂದ 5 ಮಹಿಳೆಯರು ಇರುವ ಮನೆಯಲ್ಲಿ ಯಾರಿಗೆ ಕೊಡುತ್ತೀರಾ. ಒಗ್ಗಟ್ಟಾಗಿದ್ದ ಮನೆಗಳಲ್ಲಿ ಅವರವರ ಜಗಳ ಮಾಡಿಕೊಳ್ಳುವ ಯೋಜನೆ ತಂದಿದ್ದಿರಾ. 60 ವರ್ಷಗಳು ಇಡಿ ದೇಶವನ್ನು ಕೊಳ್ಳೆ ಹೊಡೆದಿರುವ ನೀವು, ನಮ್ಮ ಬಗ್ಗೆ ಮಾತನಾಡುವ ನೈತಿಕತೆ ನಿಮಗೆ ಇಲ್ಲ. ಗ್ಯಾರಂಟಿ ಕೊಟ್ಟು ಈಗ ಗ್ಯಾರಂಟಿ ಇಲ್ಲದೆ ಸರ್ಕಾರವಾಗಿದೆ ನಿಮ್ಮದು. ಕೊಟ್ಟಿರುವ ಭರವಸೆಗಳನ್ನು ಈಡೇರಿಸಿ ಇಲ್ಲದಿದ್ದರೆ ಜನ ನಿಮ್ಮನ್ನು ಬೀದಿಯಲ್ಲಿ ನಿಲ್ಲಿಸುತ್ತಾರೆ, ಎಂದು ತರಾಟೆಗೆ ತೆಗೆದುಕೊಂಡರು.
ಕೆಲಸ ಮಾಡಲು ಇಷ್ಟ ಇಲ್ಲದಿದ್ದರೆ ಹೊರಡಿ: ಅಧಿಕಾರಿಗಳಿಗೆ ಶಾಸಕ ಇಕ್ಬಾಲ್ ತರಾಟೆ
ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ ಮಾತನಾಡಿ ಪಕ್ಷದ ವರಿಷ್ಠರು ರಾಜ್ಯದಲ್ಲಿ ಏಳು ತಂಡಗಳಾಗಿ, ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಮುಂದಿನ ದಿನಗಳಲ್ಲಿ ಬರುವ ಚುನಾವಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳು ಜನಕ್ಕೆ ತಲುಪಿಸುವ ಕೆಲಸ ಮಾಡಬೇಕು ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯ್ತಿ, ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಲು ಶ್ರಮಿಸಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ, ವಿಧಾನ ಪರಿಷತ್ ಸದಸ್ಯೆ ತುಳಸಿ ಮುನಿರಾಜು, ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು, ಬಿಜೆಪಿ ಮುಖಂಡರಾದ ಕೋನಪರೆಡ್ಡಿ, ವೇಣುಗೋಪಾಲ್, ರಾಜಣ್ಣ, ರಾಮಚಂದ್ರ ಗೌಡ, ಲೋಕೇಶ್ ಗೌಡ, ಸತ್ಯನಾರಾಯಣ ಮಹೇಶ್, ಎಲ್ಲಾ ಮಂಡಲ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಕಾರ್ಯಕರ್ತರು ಇದ್ದರು.