ಶಿರಾ ನಗರವನ್ನು ಜಿಲ್ಲಾ ಕೇಂದ್ರವಾಗಿಸುವುದು ನನ್ನ ಸಂಕಲ್ಪ ಆ ನಿಟ್ಟಿನಲ್ಲಿ ನನ್ನ ಅಧೀಕಾರದ ಅವಧಿಯಲ್ಲಿ ಸುಮಾರು 3250 ಕೋಟಿ ರೂಪಾಯಿ ಅನುದಾನ ಕ್ಷೇತ್ರಕ್ಕೆ ತಂದು ಅಭಿವೃದ್ಧಿ ಮಾಡಿದ್ದೇನೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.
ಶಿರಾ (ಏ.13): ಶಿರಾ ನಗರವನ್ನು ಜಿಲ್ಲಾ ಕೇಂದ್ರವಾಗಿಸುವುದು ನನ್ನ ಸಂಕಲ್ಪ ಆ ನಿಟ್ಟಿನಲ್ಲಿ ನನ್ನ ಅಧೀಕಾರದ ಅವಧಿಯಲ್ಲಿ ಸುಮಾರು 3250 ಕೋಟಿ ರೂಪಾಯಿ ಅನುದಾನ ಕ್ಷೇತ್ರಕ್ಕೆ ತಂದು ಅಭಿವೃದ್ಧಿ ಮಾಡಿದ್ದೇನೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದರು. ಅವರು ತಾಲೂಕಿನ ಗೌಡಗೆರೆ ಹೋಬಳಿಯ ಉದ್ದರಾಮನಹಳ್ಳಿ ಗೇಟ್ ಬಳಿ ತಾಲೂಕು ಕಾಂಗ್ರೆಸ್ ಸಮಿತಿ ಬುಧವಾರ ಹಮ್ಮಿಕೊಂಡಿದ್ದ ಹೆಂದೊರೆ, ನಾದೂರು, ಹೊಸಹಳ್ಳಿ, ಮೇಲ್ಕುಂಟೆ ಮತ್ತು ಬಂದಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆ ಮಾಡಬೇಕು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯ. ಬೆಲೆ ಏರಿಕೆ ಮಾಡುವ ಮೂಲಕ ಬಡ ಕುಟುಂಬಗಳಿಗೆ ಸಂಕಷ್ಟತಂದೊಡ್ಡಿರುವ ಭ್ರಷ್ಟಬಿಜೆಪಿ ಸರಕಾರ ತೊಲಗಿಸುವ ಸಂಕಲ್ಪ ಪ್ರತಿಯೊಬ್ಬ ಮತದಾರರು ಮಾಡಬೇಕಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತ ಜೊತೆಗೆ ಗೃಹಲಕ್ಷಿತ್ರ್ಮೕ ಯೋಜನೆ ಇಡೀ ಕುಟುಂಬ ನಿರ್ವಹಣೆ ಮಾಡುವ ಮಹಿಳೆಗೆ 2 ಸಾವಿರ ರೂಪಾಯಿ ಮಾಸಿಕ ವೇತನ ನೀಡುವ ಮೂಲಕ ಬಡ ಕುಟುಂಬಗಳ ಆರ್ಥಿಕ ಸುಭದ್ರತೆಗೆ ಸಂಕಲ್ಪ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ನೀಡುವ ಮೂಲಕ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಯುವಂತೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ ಎಂದರು.
ಸಂಪರ್ಕ ಕೊರತೆಯಿಂದಾಗಿ ರಘುಪತಿ ಭಟ್ಟರಿಗೆ ವಿಷಯ ತಿಳಿಸಲು ಸಾಧ್ಯವಾಗಿಲ್ಲ: ಕೋಟ ಶ್ರೀನಿವಾಸ ಪೂಜಾರಿ
ಮಾಜಿ ಜಿ.ಪಂ ಸದಸ್ಯ ಸಿ.ಆರ್.ಉಮೇಶ್ ಮಾತನಾಡಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ನಾನು ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ಏಕೆಂದರೆ ಅವರು ನನಗೆ ಜಡಿಎಸ್‌ನಲ್ಲಿ ಟಿಕೇಟ್ ನೀಡಿದ್ದರೆ. ನನ್ನ ರಾಜಕೀಯ ಗುರುಗಳಾದ ಟಿ.ಬಿ.ಜಯಚಂದ್ರ ಅವರ ಸೇವೆ ಮಾಡಲು ಆಗುತ್ತಿರಲಿಲ್ಲ. 2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರು ಮುಂದಿನ ದಿನಗಳಲ್ಲಿ ನಮಗೆ ಟಿಕೇಟ್ ಕೊಡುವುದಾಗಿ ಹೇಳಿದ್ದರು. ಆದರೆ ಟಿಕೇಟ್ ನೀಡಲಿಲ್ಲ. ಅದರಿಂದ ನನಗೆ ಬೇಸರವಿಲ್ಲ. ಟಿಬಿ ಜಯಚಂದ್ರ ಅವರ ಅಭಿವೃದ್ಧಿ ಕಾರ್ಯ ಮೆಚ್ಚಿ ಮತ್ತೊಮ್ಮೆ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದರು.
ಟಿಬಿಜೆ ಗೆಲ್ಲಿಸುವುದು ನಮ್ಮ ಗುರಿ: ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಮಾತನಾಡಿದ ಬೆಸ್ಕಾಂ ನಿವೃತ್ತ ತಾಂತ್ರಿಕ ನಿರ್ದೇಶಕ ಹುಲಿಕುಂಟೆ ಶ್ರೀರಾಮೇಗೌಡ ಮದಲೂರು ಕೆರೆಗೆ ಕಾಲುವೆ ನಿರ್ಮಾಣ ಮಾಡಿ ಹೇಮಾವತಿ ನೀರು ಹರಿಸುವ ಮೂಲಕ ರೈತರ ಬದುಕನ್ನು ಹಸನು ಮಾಡಿ, ಶಿರಾ ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ಧಿ ಮಾಡಿದ ಮಾಜಿ ಸಚಿವ ಜಯಚಂದ್ರ ರವರ ಅಭಿವೃದ್ಧಿ ಕಾಮಗಾರಿಗಳು ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದೇನೆ. ಟಿ.ಬಿ.ಜಯಚಂದ್ರ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದರು.
ಬಿಜೆಪಿ ಟಿಕೆಟ್ ಮಿಸ್ ಆಗಲು ಬಿಎಸ್‌ವೈ, ವಿಜಯೇಂದ್ರ ಕಾರಣ: ಗೂಳಿಹಟ್ಟಿ ಶೇಖರ್
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಆರ್ ಮಂಜುನಾಥ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್ ಬರಗೂರು, ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಗೌಡ, ಮುಖಂಡ ಗುಳಿಗೇನಹಳ್ಳಿ ನಾಗರಾಜ್, ಶಶಿಧರ್ ಗೌಡ, ಭೂವನಹಳ್ಳಿ ಸತ್ಯನಾರಾಯಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿಲ್ಲಾ ಜಿಎಸ್ ರವಿ, ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರೂಪೇಶ್ ಕೃಷ್ಣಯ್ಯ, ಲಿಂಗದಹಳ್ಳಿ ಸುಧಾಕರ್ ಗೌಡ, ಹೊಸಹಳ್ಳಿ ರಾಮಚಂದ್ರಪ್ಪ, ಬರಗೂರು ಮುದ್ದುಕೃಷ್ಣೇಗೌಡ, ಸಿಗಲಹಳ್ಳಿ ವಿರೇಂದ್ರ, ಶಿವಕುಮಾರ್ ಚಿನ್ನಿ, ಗಿರೀಶ್ ಎಚ್.ಎಲ್, ವೀರಭೊಮ್ಮನಹಳ್ಳಿ ಜಯಣ್ಣ, ಆರ್.ಕೆ.ಮಾರುತಿ ರಂಗಾಪುರ ಸೇರಿದಂತೆ ಹಲವರು ಹಾಜರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.