ಬಿಜೆಪಿ ಅಧ್ಯಕ್ಷ ಹುದ್ದೆ ಕೇಳಿದ್ದೇನೆ, ಕೊಟ್ಟರೆ ಮಜಾನೇ ಬೇರೆ: ವಿ.ಸೋಮಣ್ಣ

By Kannadaprabha News  |  First Published Aug 12, 2023, 11:41 PM IST

‘ಬಿಜೆಪಿ ರಾಜ್ಯಾಧ್ಯಕ್ಷ ನೀಡುವಂತೆ ನಾನು ಕೇಳಿದ್ದು, ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಅದರ ಮಜಾನೇ ಬೇರೆ’ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಈ ಮೂಲಕ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿಯಾಗಿದ್ದೇನೆ ಎಂಬ ಸಂದೇಶವನ್ನು ಮತ್ತೊಮ್ಮೆ ರವಾನಿಸಿದ್ದಾರೆ.


ಬೆಂಗಳೂರು (ಆ.12): ‘ಬಿಜೆಪಿ ರಾಜ್ಯಾಧ್ಯಕ್ಷ ನೀಡುವಂತೆ ನಾನು ಕೇಳಿದ್ದು, ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಅದರ ಮಜಾನೇ ಬೇರೆ’ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಈ ಮೂಲಕ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿಯಾಗಿದ್ದೇನೆ ಎಂಬ ಸಂದೇಶವನ್ನು ಮತ್ತೊಮ್ಮೆ ರವಾನಿಸಿದ್ದಾರೆ. ‘ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಹೇಳಿದ್ದೇನೆ. ಕಾರ್ಯಾಧ್ಯಕ್ಷ ಹುದ್ದೆಯನ್ನೂ ಸೃಷ್ಟಿಸಬೇಕು. ಒಂದು ಕಾರಾರ‍ಯಧ್ಯಕ್ಷ ಸ್ಥಾನ ನೀಡಲಾಗದಿದ್ದರೆ ಎರಡು ಕಾರ್ಯಾಧ್ಯಕ್ಷ ಸ್ಥಾನ ಸೃಷ್ಟಿಮಾಡಬೇಕು. ನನಗೆ ಅಧ್ಯಕ್ಷ ಸ್ಥಾನ ನೀಡಿದರೆ, ಅದರ ಮಜಾನೇ ಬೇರೆ. ನಾನು ಕೆಲಸ ಮಾಡುವುದರಲ್ಲಿ ಹಿಂದೆ ಬೀಳುವುದಿಲ್ಲ’ ಎಂದರು.

ಗೋವಿಂದರಾಜ ನಗರ ತೊರೆದು ಕಾಲ ಮೇಲೆ ಕಲ್ಲು ಹಾಕಿಕೊಂಡೆ: ವಿಧಾನಸಭೆ ಚುನಾವಣೆಯಲ್ಲಿ ಮಾಡಿದ ಸ್ವಯಂಕೃತ ಅಪರಾಧದಿಂದಾಗಿ ಸೋಲನುಭವಿಸಿ ಗೋವಿಂದರಾಜನಗರ ಕ್ಷೇತ್ರದ ಜನತೆಗೆ ಅಪಚಾರ ಮಾಡಿದ್ದು, ನನ್ನ ಕಾಲಿನ ಮೇಲೆ ನಾನೇ ಕಲ್ಲು ಹಾಕಿಕೊಂಡಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ನಮ್ಮವರೇ ನನಗೆ ಮೋಸ ಮಾಡಿದ್ದು, ಎಲ್ಲರಿಗೂ ಗೊತ್ತು. 

Tap to resize

Latest Videos

ನನ್ನ ಬಳಿ ಪೆನ್‌ಡ್ರೈವ್‌ ಇರೋದು ನಿಜ, ಸಮಯ ಬಂದಾಗ ಬಿಡುಗಡೆ: ಲಕ್ಷ್ಮಣ ಸವದಿ

ಪಕ್ಷದ ನಾಯಕರ ಒತ್ತಾಯಕ್ಕೆ ಮಣಿದು ಎರಡು ಕಡೆ ಸ್ಪರ್ಧಿಸಿದ್ದೆ. ಹೈಕಮಾಂಡ್‌ ನೀಡಿದ ಟಾಸ್ಕ್‌ ಅನ್ನು ನಾನೊಬ್ಬನೇ ಗಂಭೀರವಾಗಿ ತೆಗೆದುಕೊಂಡು ಕೆಲಸ ಮಾಡಿದೆ. ಇಷ್ಟಾದರೂ ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು. ಒಂದು ಕಡೆ ಮೂರು ಸಾವಿರ ಮತದಿಂದ ಸೋತರೆ, ಮತ್ತೊಂದೆಡೆ 70 ಸಾವಿರ ಮತಗಳನ್ನು ಪಡೆದೆ. ನಾನು ಹೇಗೆ ಸೋಲನುಭವಿಸಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಬೇಸರ ವ್ಯಕ್ತಪಡಿಸಿದರು.

ಹಿರಿಯರ ಮಾತು ಕೇಳಿ ತಪ್ಪು ಮಾಡಿದೆ: ‘ಚುನಾವಣೆ ವೇಳೆ ಹಿರಿಯರ ಮಾತು ಕೇಳಿ ತಪ್ಪು ಮಾಡಿದೆ. ನನ್ನ ಗೆಲುವು ಖಚಿತವಾಗಿದ್ದ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರವನ್ನು ಬಿಟ್ಟು ಬೇರೆ ಕಡೆಗೆ ತೆರಳಿದೆ. ಸೋಲುತ್ತೇನೆ ಎಂದು ಜೀವನದಲ್ಲಿ ನೆನೆಸಿರಲಿಲ್ಲ. ಆದರೆ, ಸೋಲನುಭವಿಸಬೇಕಾಯಿತು. ನನಗೆ ನಮ್ಮ ಪಕ್ಷದವರೇ ತೊಂದರೆ ಕೊಟ್ಟರು. ನನ್ನ ಪಾಡಿಗೆ ನಾನು ಇದ್ದೆ. ಗೋವಿಂದರಾಜ ಕ್ಷೇತ್ರದ ಅಭಿವೃದ್ಧಿಯಲ್ಲಿ ನಾನು ತೊಡಗಿಸಿಕೊಂಡಿದ್ದೆ. ಆದರೆ, ನನ್ನನ್ನು ಅಲ್ಲಿಂದ ತೆರವುಗೊಳಿಸಿ ಬೇರೆ ಎರಡು ಕಡೆ ಚುನಾವಣೆಗೆ ನಿಲ್ಲುವಂತೆ ಸೂಚಿಸಿದರು. 

ಸರ್ಕಾರದ 6ನೇ ಗ್ಯಾರಂಟಿ ವಕೀಲರ ರಕ್ಷಣೆ ಕಾಯ್ದೆ: ಸಿದ್ದರಾಮಯ್ಯ ಭರವಸೆ

ನಾನು ಅವರ ಮಾತು ಕೇಳಿದ್ದೆ ತಪ್ಪಾಯಿತು. ಬಂಗಾರದಂತಹ ಗೋವಿಂದರಾಜನಗರವನ್ನು ನಾನು ಕಳೆದುಕೊಂಡೆ’ ಎಂದು ಚುನಾವಣೆ ವೇಳೆ ಆಗಿರುವಂತಹ ತಪ್ಪುಗಳ ಬಗ್ಗೆ ಮೆಲುಕು ಹಾಕಿದರು. ‘ನಾನು 1983ರಿಂದ ಬೆಂಗಳೂರಲ್ಲಿ ಕೆಲಸ ಮಾಡಿದ್ದೇನೆ. ಸುಮಾರು 40 ವರ್ಷಕ್ಕಿಂತ ಹೆಚ್ಚು ಕಾಲ ದುಡಿದಿದ್ದೇನೆ. ಬಿಬಿಎಂಪಿ ಸದಸ್ಯನಾಗಿ, ವಿಧಾನಪರಿಷತ್‌ ಸದಸ್ಯನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ’ ಎಂದು ಹಳೆಯ ಮೆಲುಕು ಹಾಕಿದರು.

click me!