ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಮಾಜಿ ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬಗ್ಗೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಬೇಸರ ಹೊರ ಹಾಕಿರುವ ಪ್ರಸಂಗ ನಡೆದಿದೆ.
ತುಮಕೂರು (ನ.26): ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಮಾಜಿ ಸಚಿವ ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬಗ್ಗೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಬೇಸರ ಹೊರ ಹಾಕಿರುವ ಪ್ರಸಂಗ ನಡೆದಿದೆ. ಗುರುಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಸಿದ್ಧತೆಯನ್ನು ವೀಕ್ಷಿಸಲು ಆಗಮಿಸಿದ್ದ ವಿ.ಸೋಮಣ್ಣ ಅವರು ಖುದ್ದು ಸಿದ್ಧಲಿಂಗ ಸ್ವಾಮೀಜಿ ಬಳಿ ತಮ್ಮ ಅಳಲು ತೋಡಿಕೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ 2 ಕಡೆ ಸ್ಪರ್ಧೆ ಮಾಡುವ ಒತ್ತಡ ಸೃಷ್ಟಿಯಾಗಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ 2 ಗಂಟೆ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು. 2 ಕಡೆ ಸ್ಪರ್ಧೆಗೆ ಒಲ್ಲೆ ಎಂದೆ. ಇದಾದ ನಂತರ ಪ್ರಧಾನಿ ಮೋದಿ ಕೂಡ ದೆಹಲಿಗೆ ಕರೆಸಿಕೊಂಡಿದ್ದರು. ನಾಲ್ಕು ದಿವಸ ಅಲ್ಲಿಯೇ ಇರಿಸಿಕೊಂಡು ‘ನೀನು ಎರಡೂ ಕಡೆ ನಿಂತ್ಕೋ’ ಎಂದರು, ಏನ್ಮಾಡ್ಲಿ? ಎಂದ ಸೋಮಣ್ಣ ಕ್ಯಾಮರಾ ಕಂಡೊಡನೆ ಮಾತು ಬದಲಿಸಿದರು. ಗೋವಿಂದರಾಜನಗರ ಬಿಟ್ಟು ಬೇರೆ ಎರಡು ಕಡೆ ಹೋಗಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧವಾಯ್ತು ಎಂದೂ ಅವರು ಶ್ರೀಗಳೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.
undefined
ಡಿಕೆಶಿ ಪ್ರಾಮಾಣಿಕರಾಗಿದ್ದರೆ ಸಂಪುಟ ನಿರ್ಧಾರ ವಿರೋಧಿಸಬೇಕಿತ್ತು: ವಿಜಯೇಂದ್ರ
ಡಿ. 6ರ ಬಳಿಕ ಹೈಕಮಾಂಡ್ ಗೆ ಅಭಿಪ್ರಾಯ ತಿಳಿಸುವೆ: ಜ್ಯ ಬಿಜೆಪಿಯಲ್ಲಿ ನಡೆದಿರುವ ಬೆಳವಣಿಗೆಗಳಿಂದ ಬೇಸರಗೊಂಡು ಪಕ್ಷದ ಚಟುವಟಿಕೆಯಿಂದ ದೂರ ಉಳಿದಿರುವ ಮಾಜಿ ಸಚಿವ ವಿ ಸೋಮಣ್ಣ ಅವರು ಡಿ. 6ರ ನಂತರ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದರು. ನಗರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಡಿ. 7, 8 ಮತ್ತು 9ರಂದು ಪಕ್ಷದ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ ಅವರೊಂದಿಗೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿ ಅಭಿಪ್ರಾಯ ಹೇಳಿಕೊಳ್ಳುತ್ತೇವೆ ಎಂದರು. ಪಕ್ಷದಲ್ಲಿ ಯಾರು ಅಸಮಾಧಾನಿತರಿಲ್ಲ, ದೂರದೃಷ್ಟಿಯ ಚಿಂತನೆ ಇದೆ. ಹಾಗಾಗಿ, ಡಿ. 7,8 ಮತ್ತು 9 ರಂದು ನಾವೆಲ್ಲರೂ ದೆಹಲಿಗೆ ಹೋಗಿ ಹೈಕಮಾಂಡ್ ಬಳಿ ಅಭಿಪ್ರಾಯ ಅನಿಸಿಕೆ ಹೇಳಿಕೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದರು.
ಶ್ರೀಮಠದ ಆವರಣದಲ್ಲಿ ಗುರುಭವನ ನಿರ್ಮಿಸಲು ನಮ್ಮ ಕುಟುಂಬಕ್ಕೆ ಅವಕಾಶ ದೊರೆತಿದೆ. ಈ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಡಿ. 6 ರಂದು ಗುರುಭವನ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು. ಡಿ. 6 ರಂದು ಗುರುಭವನವನ್ನು ಉದ್ಘಾಟಿಸಿ ಶ್ರೀ ಮಠಕ್ಕೆ ಹಸ್ತಾಂತರ ಮಾಡಲಾಗುವುದು ಎಂದ ಅವರು ಈ ಗುರು ಭವನ ನಿರ್ಮಾಣ ಮಾಡಲು ಕುಟುಂಬಕ್ಕೆ ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ ಎಂದರು.
ರಾಜ್ಯ ಸರ್ಕಾರ ಪಾಕ್ ಇಸ್ಲಾಮಿಕ್ ಆಡಳಿತ ನಡೆಸುತ್ತಿದೆಯಾ?: ಕೆ.ಎಸ್.ಈಶ್ವರಪ್ಪ
ಗುರುಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಇಬ್ಬರು ಸಚಿವರು, ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸಲಿದ್ದಾರೆ. ಈ ಪವಿತ್ರ ಕಾರ್ಯಕ್ರಮಕ್ಕೆ ರಾಜಕೀಯ ಲೇಪನ ಬೆರೆಸುವುದು ಬೇಡ ಎಂದರು. ಇದೇ ಸಂದರ್ಭದಲ್ಲಿ ಸೋಮಣ್ಣ ಹಳೆಮಠದ ಪಕ್ಕದಲ್ಲಿ ನಿರ್ಮಿಸಲಾಗಿರುವ ಗುರುಭವನವನ್ನು ವೀಕ್ಷಿಸಿದರು.