ರಾಷ್ಟ್ರಭಕ್ತರಾದ ವೀರ್ ಸಾವರ್ಕರ್ ಮತ್ತು ಹೆಗ್ಡೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರ್ಕಾರ, ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ?
ಕಾರ್ಕಳ (ಜೂ.16): ರಾಷ್ಟ್ರಭಕ್ತರಾದ ವೀರ್ ಸಾವರ್ಕರ್ ಮತ್ತು ಹೆಗ್ಡೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಸರ್ಕಾರ, ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ? ಪ್ರಣಾಳಿಕೆಯ ಭರವಸೆಗಳ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದೀರಾ ? ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಪುಟದಲ್ಲಿ ತೆಗೆದುಕೊಂಡ ಈ ಎರಡು ನಿರ್ಣಯದ ವಿರುದ್ಧ ಕಿಡಿಕಾರಿರುವ ಅವರು, ದೇಶಭಕ್ತ ಸ್ವಾತಂತ್ಯ ಹೋರಾಟಗಾರರ ಪಠ್ಯ ತೆಗೆಯಿರಿ ಎಂದ ನಕಲಿ ಗಾಂಧಿಪರಿವಾರ ನೀಡಿದ ಆದೇಶವನ್ನು ಪಾಲನೆ ಮಾಡುತ್ತಿದ್ದೀರಾ? ಮತಾಂಧ ಟಿಪ್ಪು, ದೇಶದ್ರೋಹಿ ಔರಂಗಜೇಬ್, ನಿಮ್ಮ ಅಧಿನಾಯಕಿ ಇಟಲಿ ಮೇಡಂ ಪಠ್ಯವನ್ನು ಸೇರಿಸಿ ಹೊಸ ಇತಿಹಾಸ ಬರೆಯುತ್ತೀರಾ ? ಎಂದು ಪ್ರಶ್ನಿಸಿದ್ದಾರೆ. ಕನ್ನಡಿಗರು ಹೀಗೇ ಸುಮ್ಮನೆ ಕುಳಿತರೆ ಬೆಂಗಳೂರಿನಲ್ಲಿ ಲೂಲು ಮಾಲ್ ಕಟ್ಟಿದವರ ಇತಿಹಾಸವನ್ನೂ ಮುಂದಿನ ಪೀಳಿಗೆಯ ಜನಕ್ಕೆ ಕಾಂಗ್ರೆಸಿಗರು ಹೇಳಿಕೊಡಬಹುದು.
undefined
ಪ್ರತಾಪ್ ಸಿಂಹ-ಎಚ್‌ಡಿಕೆ ಅಡ್ಜಸ್ಟ್‌ಮೆಂಟ್ ರಾಜಕಾರಣಿಗಳು: ಎನ್.ಚಲುವರಾಯಸ್ವಾಮಿ
ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿಗೂ ದೇಶಭಕ್ತರ ಪಠ್ಯದ ಸಾಲಿನಲ್ಲಿ ಅವಕಾಶ ನೀಡಬಹುದು. ವಿದ್ಯಾರ್ಥಿಗಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರದ ಈ ನೀತಿಯ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯಿದೆ ವಾಪಸ್ ತೆಗದುಕೊಳ್ಳುತ್ತದೆ ಎಂದು ನಾವು ಮೊದಲೇ ಎಚ್ಚರಿಸಿದ್ದೆವು. ಈಗ ಅದನ್ನು ನಿಜ ಮಾಡುತ್ತಿದೆ. ಸಮವಸ್ತ್ರ ಸಂಹಿತೆಯನ್ನು ಬದಿಗಿಟ್ಟಿದೆ. ಇಡಿ ರಾಜ್ಯಕ್ಕೆ ಹಿಜಾಬ್ ತೊಡಿಸುವ ಹುನ್ನಾರ ನಡೆಸಿದೆ ಎಂದು ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಕೇಂದ್ರದತ್ತ ಬೊಟ್ಟು ಮಾಡಿ ಜಾರಿಕೊಳ್ಳಬೇಡಿ: ನುಡಿದಂತೆ ನಡೆಯುತ್ತೇವೆ ಎಂದು ಪುಕ್ಕಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತೀರಾ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ವಿ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡುವ ವಿಚಾರದಲ್ಲಿ ರಾಜಕಾರಣ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಸುನಿಲ್ ಕುಮಾರ್, ನೀವು ಮತ ರಾಜಕಾರಣಕ್ಕಾಗಿ ಪ್ರಣಾಳಿಕೆ ಸಿದ್ಧಪಡಿಸುವಾಗ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿದ್ದಿರಾ?
ಈ ಹಿಂದೆ ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ಕೊಟ್ಟಅಕ್ಕಿಯನ್ನೇ ನಾನು ಉಚಿತವಾಗಿ ಕೊಟ್ಟೆಎಂದು ಡೋಂಗಿ ಹೊಡೆದವರು ನೀವಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಕೊಟ್ಟ ಭರವಸೆ ಈಡೇರಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಈ ಹೊರೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಈಗ ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎಂದು ಸಬೂಬು ಹೇಳುತ್ತಿದ್ದೀರಿ. ಕೇಂದ್ರ ಸರ್ಕಾರ ಕೊಡುತ್ತಿದ್ದ ಐದು ಕೆಜಿ ಅಕ್ಕಿ ಪೂರೈಕೆಯನ್ನು ಇದುವರೆಗೆ ನಿಲ್ಲಿಸಿಲ್ಲ. ಹೆಚ್ಚುವರಿ ಐದು ಕೆಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದು ನಿಮ್ಮ ವಾಗ್ದಾನ. ಅದರಂತೆ ನಡೆದುಕೊಳ್ಳಿ.
ಹೈನೋದ್ಯಮ ಅಭಿವೃದ್ಧಿಗೆ ಸರ್ಕಾರ ಕ್ರಮಕೈಗೊಳ್ಳಲಿ: ಎಚ್.ಡಿ.ಕುಮಾರಸ್ವಾಮಿ ಸಲಹೆ
ಅದನ್ನು ಬಿಟ್ಟು ಅಂಗಳ ಡೊಂಕು ಎಂದು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಕೀಳು ರಾಜಕಾರಣ ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ. ನಿಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವುದಕ್ಕಾಗಿ ಕೇಂದ್ರವನ್ನು ದೂಷಿಸುವ ಕೆಟ್ಟಚಾಳಿ ನಿಮಗೆ ಹೊಸದಲ್ಲ. ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಮೂಲಕ ಬಡವರ ಹಸಿವನ್ನು ನೀಗಿಸಿದ್ದು ಇದೇ ಕೇಂದ್ರ ಸರ್ಕಾರ ಎಂಬುದನ್ನು ಮರೆಯಬೇಡಿ ಎಂದು ಸುನಿಲ್ ಕುಮಾರ್ ಕಿವಿಮಾತು ಹೇಳಿದ್ದಾರೆ.