ಪ್ರಧಾನಿ ಮೋದಿ ತುಂಬಾ ಎತ್ತರದ, ಜಗತ್ತು ಗೌರವಿಸುವ ನಾಯಕ: ಸಿ.ಟಿ.ರವಿ

By Kannadaprabha NewsFirst Published Dec 4, 2023, 10:23 PM IST
Highlights

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ನಮ್ಮ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಫಲಿತಾಂಶದಿಂದ ಮೈಮರೆಯುವಂತಿಲ್ಲ. 

ಚಿಕ್ಕಮಗಳೂರು (ಡಿ.04): ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ನಮ್ಮ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಫಲಿತಾಂಶದಿಂದ ಮೈಮರೆಯುವಂತಿಲ್ಲ. ಪ್ರತಿ ಚುನಾವಣೆ ಯನ್ನೂ ರಾಜಕೀಯ ಕಾರ್ಯಕರ್ತರು ಯುದ್ಧದ ರೀತಿಯೇ ಎದುರಿಸಬೇಕು ಎಂದರು. ನರೇಂದ್ರ ಮೋದಿ ಅವರು ತುಂಬಾ ಎತ್ತರದ, ಜಗತ್ತು ಗೌರವಿಸುವ ನಾಯಕರು. ಅವರ ಪ್ರಭಾವ ಎಲ್ಲಾ ಚುನಾವಣೆಯಲ್ಲೂ ಮತದಾರರ ಮೇಲೆ ಇದ್ದೇ ಇದೆ. 

ಈ ಬಾರಿಯೂ ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರ ಪರಿಶ್ರಮ ಮತ್ತು ಮೋದಿ ಪ್ರಭಾವ ಗೆಲುವಿಗೆ ಕಾರಣ ಎಂದರು. ತೆಲಂಗಾಣದಲ್ಲಿ ಗೆದ್ದಿರುವುದು ಕಾಂಗ್ರೆಸ್‌ಗೂ ಒಂದು ಸಂಜೀವಿನಿ. ಆದರೆ, ಅಲ್ಲಿ ನಿಜವಾದ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದು ಬಿಜೆಪಿ. ಹೈದರಾಬಾದ್ ಕಾರ್ಪೊರೇಷನ್ ಚುನಾವಣೆ ಗೆಲುವಿನ ನಂತರ ಉಪ ಚುನಾವಣೆಗಳಲ್ಲಿ ಸತತವಾಗಿ ಬಿಜೆಪಿ ಗೆಲುವು ಸಾಧಿಸಿತ್ತು. ಆಗೆಲ್ಲ ಕಾಂಗ್ರೆಸ್ ಠೇವಣಿ ಕಳೆದುಕೊಂಡಿತ್ತು. ಆದರೆ ಏಕಾಏಕಿ ವಿಧಾನ ಸಭೆ ಚುನಾವಣೆಯಲ್ಲಿ ಗೆಲುವು ಸಿಕ್ಕಿತು. 

Latest Videos

ಅಲ್ಲಿ ನಮ್ಮ ರಾಜ್ಯಾಧ್ಯಕ್ಷರನ್ನು ಬದಲಿ ಸಿದ್ದು, ಕರ್ನಾಟಕದ ಎಟಿಎಂ ತೆಲಂಗಾಣದಲ್ಲಿ ಕೆಲಸ ಮಾಡಿದ್ದು ಎಲ್ಲವೂ ಸೇರಿ ಕಾಂಗ್ರೆಸ್‌ಗೆ ಅನುಕೂಲವಾಯಿತು ಎಂದು ಹೇಳಿದರು. ಬಿಆರ್‌ಎಸ್‌ನ ಆಡಳಿತ ವಿರೋಧಿ ಅಲೆಯ ಮತಗಳನ್ನು ಸೆಳೆಯುವಲ್ಲಿ ನಾವು ವಿಫಲವಾದೆವು. ಆಂದ್ರದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿದ್ದು ವೈಎಸ್‌ಆರ್ ಪಕ್ಷ. ಆದರೆ ಅದರ ಪ್ರಭಾವ ತೆಲಂಗಾಣದಲ್ಲಿ ಕೆಲಸ ಮಾಡಿದ ಪರಿಣಾಮ ಟಿಡಿಪಿ ಪೂರ್ತಿ ಕಾಂಗ್ರೆಸ್‌ಗೆ ಬೆಂಬಲವಾಗಿ ನಿಂತಿತು. ಅದರ ಲಾಭ ಕಾಂಗ್ರೆಸ್‌ಗೆ ಆಗಿದೆ ಎಂದರು. ಪ್ರತಿ ಚುನಾವಣೆಗೂ ಭಿನ್ನ ವಿಚಾರಗಳು ಪ್ರಭಾವ ಬೀರುತ್ತವೆ. 

ಕನಕದಾಸರು ಹಾಕಿಕೊಟ್ಟ ದಾರಿಯಲ್ಲಿ ಸಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ಲೋಕಸಭೆ - ವಿಧಾನಸಭೆಗೆ ಹೀಗೆ ಆಗುತ್ತದೆ ಎಂದು ಹೇಳಲಾಗದು. ಈ ಫಲಿತಾಂಶ ಲೋಕಸಭಾ ಚುನಾವಣೆ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ. 2018 ರ ವಿಧಾನ ಸಭೆ ಚುನಾವಣೆಯಲ್ಲಿ ಈ ಎಲ್ಲಾ ರಾಜ್ಯಗಳಲ್ಲಿ ನಾವು ಅಧಿಕಾರ ಕಳೆದುಕೊಂಡಿದ್ದೆವು. ಆದರೆ, 2019 ರ ಲೋಕಸಭಾ ಚುನಾವಣೆಯಲ್ಲಿ ಆ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆದ್ದಿತ್ತು ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿ ಮನೆ ಮನೆಗೆ ಕಾರ್ಡ್‌ಗಳನ್ನು ಕೊಟ್ಟಾಗ ಸ್ವಲ್ಪ ಎಚ್ಚರಿಕೆ ವಹಿಸಬೇಕಿತ್ತು. ಒಳ ಮೀಸಲಾತಿ ಕೊಟ್ಟ ಬಗ್ಗೆ ಮನವರಿಕೆ ಮಾಡಿಕೊಡುವಲ್ಲಿ ಸೋತೆವು. ಅದರಿಂದ 32 ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಪರಿಣಾಮ ಆಯಿತು ಎಂದು ಹೇಳಿದರು.

click me!