ಜಾರಕಿಹೊಳಿ ರಾಸಲೀಲೆ ಸಿ.ಡಿ. ಬಗ್ಗೆ ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ!

Published : Mar 09, 2021, 02:54 PM ISTUpdated : Mar 09, 2021, 03:01 PM IST
ಜಾರಕಿಹೊಳಿ ರಾಸಲೀಲೆ ಸಿ.ಡಿ. ಬಗ್ಗೆ ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ!

ಸಾರಾಂಶ

ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಬಗ್ಗೆ ಮಾಜಿ ಶಾಸಕರೊಬ್ಬರು ಸ್ಫೋಟಕ ಹೇಳಿಕೆ ಕೊಟ್ಟು ರಾಜ್ಯ ರಾಜಕಾರಣದಲ್ಲಿ ಸಂಚನಲ ಮೂಡಿಸಿದ್ದಾರೆ.

ಬೆಂಗಳೂರು, (ಮಾ.09):  ಸಂಟರಗಾಳಿ, ಜ್ವಾಲಾಮುಖಿಯಂತೆ ಸ್ಫೋಟಿಸಿದ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ. ರಾಜ್ಯ ರಾಜಕಾರಣದಲ್ಲಿ ಅಲ್ಲೋಕ, ಕಲ್ಲೋಲ ಸೃಷ್ಟಿಸಿದೆ.

ಅಲ್ಲದೇ ಈ ಸಿ.ಡಿ. ರಮೇಶ್ ಜಾರಕಿಹೊಳಿಯ ಮಂತ್ರಿ ಸ್ಥಾನವನ್ನು ನುಂಗಿದೆ. ಇದೀಗ ಈ ಪ್ರಕರಣವನ್ನು ಸ್ವತಃ ದೂರುದಾರ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ವಾಪಸ್ ಪಡೆದುಕೊಂಡಿದ್ದಾರೆ. ಇನ್ನು ಈ ಸಿ.ಡಿ. ಬಗ್ಗೆ 4 ತಿಂಗಳ ಹಿಂದೆ ಎಚ್ಚರಿಸಿದ್ದೆ ಎಂದು ಮಾಜಿ ಶಾಸಕ ನಾಗರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಸಲೀಲೆ CD: ಸ್ಫೋಟಕ ಸುಳಿವು ಕೊಟ್ಟ ರಮೇಶ್ ಜಾರಕಿಹೊಳಿ

ಹೌದು...ಈ ಬಗ್ಗೆ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ನಾಗರಾಜ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ಸಿಡಿ ಬಗ್ಗೆ ನಾಲ್ಕು ತಿಂಗಳ ಹಿಂದೆ ಎಚ್ಚರಿಸಿದ್ದೆ. ಅಂತಹ ಯಾವುದೇ ಕೃತ್ಯ ನಾನು ಮಾಡಿಲ್ಲ ಎಂದು ರಮೇಶ್ ಹೇಳಿದ್ದರು. ರಮೇಶ್ ಜಾರಕಿಹೊಳಿ ರಾಜಕೀಯ ಭವಿಷ್ಯ ಮುಗಿಸಲು ನಡೆಸಿದ ಷಡ್ಯಂತ್ರ ಎಂದರು.

ನನಗೆ ಬಾಲಚಂದ್ರ ಹೇಳಿಕೆ ನಾಲ್ಕು ತಿಂಗಳ ಹಿಂದೆ ಹೇಳಿದ್ದರು. ರಮೇಶ್ ಅಣ್ಣ ಬಗ್ಗೆ ಸಿಡಿ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ನಾನು ಕೇಳಿದೆ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು. ಹೀಗಾಗಿ ನಾನು ರಮೇಶ್ ಅಣ್ಣ ಅವರನ್ನು ಕೇಳಿದ್ದೆ. ಆದರೆ ನಂದೆಲ್ಲಿ ಅಂತಹ ಸಿಡಿ ಇರಲಿಕ್ಕೆ ಸಾಧ್ಯವಿಲ್ಲ. ಅಂತಹ ತಪ್ಪು ನಾನು ಮಾಡಿಲ್ಲ ಅಂತ ಹೇಳಿದ್ದರು. ಅದನ್ನು ನಾನು ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೇಳಿದ್ದೆ ಎಂದು ಸ್ಪಷ್ಟಪಡಿಸಿದರು.

ರಾಸಲೀಲೆ CD: ಜಾರಕಿಹೊಳಿ ಸುಳಿವು ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಸಿಎಂ

ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಇದು ಹೊರತುಪಡಿಸಿ ನನಗೆ ಬೇರೆ ಯಾವುದೇ ಮಾಹಿತಿ ಗೊತ್ತಿಲ್ಲ. ಆದರೆ ಜಾರಕಿಹೊಳಿ ಕುಟುಂಬಕ್ಕೆ ಹೋಗಿರುವ ಮರ್ಯಾದೆ ವಾಪಸು ಬರಬೇಕು ಎಂದು ನಾಗರಾಜ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?
ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!