ಮಿಸ್ಟರ್ ಡಿಕೆಶಿ ನಿಮ್ಮ ಕೆಟ್ಟ ರಾಜಕೀಯ, ಆಟ ನಡೆಯಲ್ಲ: ದೇವೇಗೌಡ

By Kannadaprabha News  |  First Published Oct 2, 2023, 3:40 AM IST

ಜೆಡಿಎಸ್ ಪಕ್ಷವನ್ನು ಶೂನ್ಯ ಮಾಡಿಬಿಡುತ್ತೇನೆ. ಅಲ್ಲಿ ಒಬ್ಬ ಸಮರ್ಥ ನಾಯಕನನ್ನು ಇರಲು ಬಿಡಲ್ಲ ಎಂದು ಮಿಸ್ಟರ್ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ, ಮಿಸ್ಟರ್‌ ಡಿಕೆಶಿಯವರೇ, ನಿಮ್ಮ ಈ ಕಸನು ಎಂದಿಗೂ ಈಡೇರುವುದಿಲ್ಲ. 


ರಾಮನಗರ (ಅ.02): ಜೆಡಿಎಸ್ ಪಕ್ಷವನ್ನು ಶೂನ್ಯ ಮಾಡಿಬಿಡುತ್ತೇನೆ. ಅಲ್ಲಿ ಒಬ್ಬ ಸಮರ್ಥ ನಾಯಕನನ್ನು ಇರಲು ಬಿಡಲ್ಲ ಎಂದು ಮಿಸ್ಟರ್ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ, ಮಿಸ್ಟರ್‌ ಡಿಕೆಶಿಯವರೇ, ನಿಮ್ಮ ಈ ಕಸನು ಎಂದಿಗೂ ಈಡೇರುವುದಿಲ್ಲ. ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ. ಅದು ನಿಮಗೆ ಗೊತ್ತಿರಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು. ಬಿಡದಿಯ ಕೇತಿಗಾನಹಳ್ಳಿಯ ಎಚ್.ಡಿ.ಕುಮಾರಸ್ವಾಮಿ ಅವರ ತೋಟದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು ಹಾಗೂ ಹಿರಿಯ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಡಿಕೆಶಿ ಅವರೇ, ನಿಮ್ಮ ಕೆಟ್ಟ ರಾಜಕೀಯ ಆಟ ಏನೆಂದು ನನಗೆ ಗೊತ್ತಿದೆ. ಅದೆಲ್ಲ ನನ್ನ ಬಳಿ ನಡೆಯಲ್ಲ. 

ಅದು ನಿಮಗೆ ಗೊತ್ತಿರಲಿ, ನಿಮ್ಮಿಂದ ನಮ್ಮ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ ಎಂದರು. ಆ ವ್ಯಕ್ತಿಗೆ ಉತ್ತರ ಕೊಡಬೇಕು, ಕೊಡುವ ಕೆಲಸ ಮಾಡುತ್ತೇವೆ. ಇವತ್ತು ಕುಮಾರಸ್ವಾಮಿ ಅವರು ಗಟ್ಟಿಯಾದ ಸಂದೇಶ ಕೊಟ್ಟಿದ್ದಾರೆ. ನಮ್ಮ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ವೇಳೆ ಯಾರಾದರೂ ಹಾಗೆ ಭಾವಿಸಿದ್ದರೆ ಅದು ಅವರ ಭ್ರಮೆ ಅಷ್ಟೇ. ಈ ಸಭೆ ಮೂಲಕ ಕುಮಾರಸ್ವಾಮಿ ಅವರು ಒಳ್ಳೆಯ ಸಂದೇಶ ನೀಡಿದ್ದಾರೆ. ಪಕ್ಷದ ಶಕ್ತಿ ಏನು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಈ ಸಭೆಗೆ ಬಂದ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದು ದೇವೇಗೌಡರು ಭಾವುಕರಾದರು. ಪಕ್ಷದ ಬೆಳೆವಣಿಗೆಗೆ ಒಳ್ಳೆಯ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ರಾಜಕೀಯ ಬೆಳವಣಿಗೆ ಆಗುತ್ತಿದೆ ಎಂದು ಬಿಜೆಪಿ-ಜೆಡಿಎಸ್‌ ಮೈತ್ರಿಯನ್ನು ಸಮರ್ಥಿಸಿಕೊಂಡರು.

Tap to resize

Latest Videos

ಬಿಜೆಪಿ-ಜೆಡಿಎಸ್ ಮೈತ್ರಿ: ಅಸಮಾಧಾನ ಹೋಗಲಾಡಿಸಲು ಶಾಸಕರು, ಎಂಎಲ್‌ಸಿಗಳ ಸಭೆ ನಡೆಸಿದ ದೇವೇಗೌಡರು!

ಕಾವೇರಿ ವಿಚಾರದಲ್ಲಿ ನಮ್ಮಲ್ಲಿ ಒಗ್ಗಟ್ಟು ಇಲ್ಲ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡಿನ ರಾಜಕಾರಣಿಗಳಲ್ಲಿರುವ ಒಗ್ಗಟ್ಟು ನಮ್ಮಲ್ಲಿಲ್ಲ. ಕಾವೇರಿ ನೀರಿಗಾಗಿ ಕರೆಕೊಟ್ಟಿರುವ ಬಂದ್‌ ವಿಚಾರದಲ್ಲೇ ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಮಾಜಿ ಪ್ರದಾನಿ ಎಚ್‌.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು. ನಗರದ ಸಂಸದರ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಾವೇರಿ ಕೊಳ್ಳದ ಪ್ರತಿ ಅಣೆಕಟ್ಟೆಯ ಸ್ಥಳ ಪರಿಶೀಲನೆ ಮಾಡಿ ನೀರು ಎಷ್ಟಿದೆ ಎಂದು ವಿವರ ತಂದಿದ್ದಾರೆ. 

ನನ್ನ ಬಳಿ ಮಾತು ಹೇಳಿ ಹೋಗ್ತಿದ್ದರೆ ಏನಾಗ್ತಿತ್ತು?: ಜೆಡಿಎಸ್-ಬಿಜೆಪಿ ಮೈತ್ರಿಗೆ ಇಬ್ರಾಹಿಂ ಅಸಮಾಧಾನ!

ಅದೇ ವರದಿ ಆಧರಿಸಿ ನಾನು ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ನಿಷ್ಪಕ್ಷಪಾತವಾಗಿ ಎರಡು ರಾಜ್ಯಗಳ ಸ್ಥಿತಿ ಅಧ್ಯಯನ ಮಾಡಲು ತಜ್ಞರ ಸಮಿತಿ ಕಳಿಸಿ ಎಂದು ಆ ಪತ್ರದಲ್ಲಿ ಕೇಳಿದ್ದೇನೆ. ನಾನು ಬರೆದ ಪತ್ರದ ಸಾರಾಂಶದ ಬಗ್ಗೆ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬೊಮ್ಮಾಯಿ ಎಲ್ಲರೂ ಸ್ವಾಗತಿಸಿದ್ದಾರೆ. ನಮ್ಮ ಬೆಳೆ ಉಳಿಸಿಕೊಳ್ಳಲು 7೦ ಟಿಎಂಸಿ ನೀರು ಬೇಕು. ನಾನು ಹಿರಿಯ ರಾಜಕಾರಣಿಯಾಗಿ ನಮ್ಮಲ್ಲಿ ಐಕ್ಯತೆ ಇಲ್ಲ ಎಂದು ಹಲವು ಬಾರಿ ಹೇಳಿದ್ದೇನೆ. ಆದರೆ ತಮಿಳುನಾಡಿನ ಪರಿಸ್ಥಿತಿ ಬೇರೆ ಇದೆ. ಈ ವಿಚಾರದಲ್ಲಿ ಸರ್ಕಾರದ ನಿಲುವು ಬಂದ ಮೇಲೆ ನಾವು ಮತ್ತು ನಮ್ಮ ಪಕ್ಷ ಪ್ರತಿಕ್ರಿಯೆ ನೀಡುತ್ತೇವೆ ಎಂದರು.

click me!