
ಹಾಸನ (ನ.14) : ಹಾಸನ ಜಿಲ್ಲೆಯಲ್ಲಿ ಮುಂದಿನ ವಾರ ಪ್ರವಾಸ ಮಾಡುತ್ತೇನೆ. ಮಾಜಿ ಪ್ರಧಾನಿ ದೇವೇಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡಿ ಪಕ್ಷ ಬಲಪಡಿಸುತ್ತೇನೆ. ಹಾಸನ ಪ್ರವಾಸದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ನಾನು ಮರೆಯೋದಿಲ್ಲ. ಪ್ರವಾಸ ಮುಗಿಸಿದ ಬಳಿಕ ಪಾರ್ಲಿಮೆಂಟ್‌ಗೂ ಹೋಗುತ್ತೇನೆ ಎಂದರು.
ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಆಮಂತ್ರಣ ವಿಚಾರದಲ್ಲಿನ ಚರ್ಚೆ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಹೆಚ್ ಡಿ ದೇವೇಗೌಡರು, ನಾನು ಈ ವಿಚಾರದಲ್ಲಿ ಏನೂ ಮಾತನಾಡಲ್ಲ. ಯಾರಾರು ಏನೇನು ಮಾಡಿದರು ಎಂದು ಈಗ ವಿಶ್ಲೇಷಣೆ ಮಾಡಲ್ಲ ಎಂದ ಗೌಡರು, ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು.
Sugata Srinivasaraju ಒಂದು ಟ್ವೀಟ್ ಮಾಡಿದ್ದಾರೆ, ಅದು ದೇಶದಾದ್ಯಂತ ಚರ್ಚೆ ಆಗಿದೆ. ಅದಕ್ಕಿಂತ ಹೆಚ್ಚಿಗೆ ನಾನು ಏನೂ ಹೇಳೋದಿಲ್ಲ. ಹಾಸನ ಜಿಲ್ಲೆ ಪ್ರವಾಸದ ಬಳಿಕ ರಾಜ್ಯ ಪ್ರವಾಸವನ್ನು ಮಾಡುತ್ತೇನೆ. ರಾಜ್ಯವನ್ನು ಮರೆಯೊದಿಲ್ಲ. ಮುಂಬರುವ ಚುನಾವಣೆಗೆ ಜೆಡಿಎಸ್ ಬಲಪಡಿಸುವ ನಿಟ್ಟಿನಲ್ಲಿ ಪ್ರವಾಸ ಮಾಡುತ್ತೇನೆ. ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವ ಬಗ್ಗೆ ವಿಶ್ವಾಸವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ದೇವೇಗೌಡರಿಗೆ ತಲುಪದ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಆಹ್ವಾನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.