ಬಣ ರಾಜಕೀಯ: ಸಿದ್ದರಾಮಯ್ಯ, ಪರಮೇಶ್ವರ್ ಕಿವಿ ಹಿಂಡಿದ ಹಿರಿಯ ಕಾಂಗ್ರೆಸ್ ನಾಯಕ

Published : Jan 29, 2020, 10:00 PM IST
ಬಣ ರಾಜಕೀಯ: ಸಿದ್ದರಾಮಯ್ಯ, ಪರಮೇಶ್ವರ್ ಕಿವಿ ಹಿಂಡಿದ ಹಿರಿಯ ಕಾಂಗ್ರೆಸ್ ನಾಯಕ

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಶುರುವಾಗಿದ್ದು, ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದಲ್ಲದೇ ಸಲಹೆ ನೀಡಿದ್ದಾರೆ.

ಬೆಂಗಳೂರು, [ಜ.29]: ಪಕ್ಷದ ನಾಯಕರಲ್ಲಿಅಹಂ ಪ್ರವೃತ್ತಿ ಬೆಳೆದು, ಹಿರಿಯರನ್ನು ಕಡೆಗಣಿಸಿರುವುದೇ ಕಾಂಗ್ರೆಸ್‌ನ ಈಗಿನ ಸ್ಥಿತಿಗೆ ಕಾರಣ ಎಂದು ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ಇಂದು [ಬುಧವಾರ] ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹೈಕಮಾಂಡ್‌ ಅಧಿಕಾರ ಇದ್ದಾಗ ಒಂದು ರೀತಿ, ಅಧಿಕಾರ ಇಲ್ಲದಾಗ ಮತ್ತೊಂದು ರೀತಿ ನಡೆದುಕೊಳ್ಳುತ್ತೆ. ಅಧಿಕಾರ ಇರುವಾಗ ಕಾಣುವ ಉತ್ಸಾಹ ನಂತರ ಕಾಣುವುದಿಲ್ಲ' ಎಂದು ಹೈಕಮಾಂಡ್ ನಡೆಗೆ ಬೇಸರ ವ್ಯಕ್ತಪಡಿಸಿದರು.

ಅತ್ತ ದೆಹಲಿಯಲ್ಲಿ ಡಿಕೆಶಿ ಬ್ಯಾಟಿಂಗ್: ಇತ್ತ ಬೆಂಗ್ಳೂರಲ್ಲಿ ಸಿದ್ದು ಬಣ ಮೀಟಿಂಗ್ 

ರಾಜ್ಯದಲ್ಲಿ ಬಣ ರಾಜಕೀಯ ಬಗ್ಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರೇನೂ ದಿಢೀರ್‌ ಬೆಳೆದು ನಿಂತವರಲ್ಲ, ಎಲ್ಲರಿಂದಾಗಿ ಅವರು ಅಧಿಕಾರ ಪಡೆದುಕೊಂಡರು. ಪರಮೇಶ್ವರ್‌ ಕೂಡ ಸಂಸ್ಥೆಯೊಂದನ್ನು ಕಟ್ಟಿ ಆ ಮೂಲಕ ರಾಜಕೀಯಕ್ಕೆ ಬಂದವರು ಎಂದು ನೇರವಾಗಿ ಹೇಳಿದರು. 

ಅಹಂ ಭಾವ ತೊರೆದು, ಹಿರಿಯರೆಲ್ಲರ ಸಲಹೆಯೊಂದಿಗೆ ಪಕ್ಷ ಕಟ್ಟುವ ಕೆಲಸ ಆಗಬೇಕು. ಪದೇ ಪದೇ  ವರಿಷ್ಠರನ್ನು ಎಡತಾಕುವ ಬದಲು ರಾಜ್ಯ ನಾಯಕರೇ ಗೊಂದಲ ಬಗೆಹರಿಸಿಕೊಂಡು ಮುಂದೆ ಸಾಗಬೇಕು. ಪಕ್ಷ ಸಂಘಟನೆ ಚುರುಕುಗೊಳಿಸಬೇಕೆಂದು ಕಿವಿಮಾತು ಹೇಳಿದರು.

ಮಧುಬಂಗಾರಪ್ಪ ಕಾಂಗ್ರೆಸ್‌ಗೆ..? ಜಿಲ್ಲೆಯ 'ಕೈ' ಹಿರಿಯ ನಾಯಕ ಕಾಗೋಡು ಮಾತೇನು..?

ಕೆಪಿಸಿಸಿ ಅಧ್ಯಕ್ಷ ಆಯ್ಕೆಯಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರು ಎಂಬ ಎರಡು ಬಣಗಳು ಆಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಮಹಾತ್ಮ ಗಾಂಧಿ ನರೇಗಾ ಯೋಜನೆ 5 ಕೋಟಿ ಮಾನವ ದಿನ ಕಡಿತ; ಪ್ರಿಯಾಂಕ್ ಖರ್ಗೆ ಆರೋಪ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?