ಇದ್ದಕ್ಕಿದ್ದಂತೆ ಬಿಜೆಪಿಗೆ ಗುಡ್‌ಬೈ ಹೇಳಿ ಎದ್ದು ನಡೆದ ಕೇಂದ್ರದ ಮಾಜಿ ಮಂತ್ರಿ

Published : Nov 17, 2020, 08:56 PM IST
ಇದ್ದಕ್ಕಿದ್ದಂತೆ ಬಿಜೆಪಿಗೆ ಗುಡ್‌ಬೈ ಹೇಳಿ ಎದ್ದು ನಡೆದ ಕೇಂದ್ರದ ಮಾಜಿ ಮಂತ್ರಿ

ಸಾರಾಂಶ

ಮಹಾರಾಷ್ಟ್ರದಲ್ಲಿ ಬಿರುಸಿನ ರಾಜಕಾರಣ/ ಪಕ್ಷ ತೊರೆದ ಹಿರಿಯ ನಾಯಕ/ ಕೇಂದ್ರದ ಮಾಜಿ ಸಚಿವ ಜಯಸಿಂಗ್ ರಾವ್ ಗಾಯಕ್ವಾಡ್ ರಾಜೀನಾಮೆ/ ಪಕ್ಷ ಸಂಘಟನೆ ಮಾಡುವ  ಆಸೆ ಹೊಂದಿದ್ದೆ

ಮುಂಬೈ(ನ. 17)  ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಜಯಸಿಂಗ್ ರಾವ್ ಗಾಯಕ್ವಾಡ್ ಪಾಟೀಲ್  ಮಂಗಳವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ  ರಾಜೀನಾಮೆ ನೀಡಿ ಪಕ್ಷದಿಂದ ಹೊರಬಂದಿದ್ದಾರೆ. 

ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ಗಾಯಕ್ವಾಡ್ , ಪಕ್ಷಕ್ಕಾಗಿ ಕೆಲಸ ಮಾಡಲು ಸಿದ್ಧವಿದ್ದರೂ ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ನಾಯಕ ಪಕ್ಷ ತೊರೆದಿದ್ದಾರೆ.  ಅಧಿಕಾರದ ವೇಳೆ ಜನರಿಗೆ ಸೇವೆ ಮಾಡಿದ ತೃಪ್ತಿ ಇದೆ ಎಂದಿದ್ದಾರೆ.

ನನಗೆ ವಿಧಾನಸಭೆ ಅಥವಾ ಲೋಕಸಭೆಯ ಸದಸ್ಯನಾಗಬೇಕು ಎಂಬ ಬಯಕೆ ಇರಲಿಲ್ಲ. ಪಕ್ಷ ಸಂಘಟನೆಯ ಕೆಲಸ ಮಾಡುವ ಇಚ್ಛೆ ಹೊಂದಿದ್ದೆ. ಅದು ಯಾವುದು ಸಾಧ್ಯವಾಗದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಕೆಂಡಾಮಂಡಲ!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ