ಕಾಂಗ್ರೆಸ್‌ನಿಂದ ಸುಳ್ಳು ಆಶ್ವಾಸನೆ; ಶಿರಸಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ

Published : Mar 05, 2023, 07:48 AM IST
ಕಾಂಗ್ರೆಸ್‌ನಿಂದ ಸುಳ್ಳು ಆಶ್ವಾಸನೆ; ಶಿರಸಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ

ಸಾರಾಂಶ

ಕಾಂಗ್ರೆಸ್‌ ಪಕ್ಷ ಸುಳ್ಳು ಆಶ್ವಾಸನೆಗಳನ್ನು ನೀಡುವ ಮೂಲಕ ಮತದಾರರನ್ನು ಮೋಸಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

 ಶಿರಸಿ (ಮಾ.5) : ಕಾಂಗ್ರೆಸ್‌ ಪಕ್ಷ ಸುಳ್ಳು ಆಶ್ವಾಸನೆಗಳನ್ನು ನೀಡುವ ಮೂಲಕ ಮತದಾರರನ್ನು ಮೋಸಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ(BJP) ಅಭಿವೃದ್ಧಿಯನ್ನು ಸಹಿಸದೇ ಕಾಂಗ್ರೆಸ್‌(Congress) ಅರ್ಥವಿಲ್ಲದ ಟೀಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್‌ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿದರು.

ಪ್ರಧಾನಿ ಭೇಟಿಯಿಂದ ಶಿವಮೊಗ್ಗಕ್ಕೆ ನಯಾಪೈಸೆ ಪ್ರಯೋಜವಾಗಿಲ್ಲ: ರೈತ ಮುಖಂಡ...

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಆರ್‌.ಡಿ. ಹೆಗಡೆ, ಬಿಜೆಪಿ ಆಡಳಿತಕ್ಕೆ ಬಂದ ನಂತರ ಉತ್ತರ ಕನ್ನಡ(Uttarakannada) ಜಿಲ್ಲೆ ಸಾಕಷ್ಟುಅಭಿವೃದ್ಧಿ ಕಾಣುತ್ತಿದೆ. ಆದರೆ, 30 ವರ್ಷಗಳ ಕಾಲ ಕಾಂಗ್ರೆಸ್‌ ಪಕ್ಷ(Congress party)ದ ಉಸ್ತುವಾರಿ ಸಚಿವರು ಆಡಳಿತದಲ್ಲಿದ್ದರೂ ಯಾವುದೇ ಅಭಿವೃದ್ಧಿ ಮಾಡಿರಲಿಲ್ಲ. ಅಭಿವೃದ್ಧಿ ಕಾಮಗಾರಿ(Development work)ಗಳು ಕಣ್ಣೆದುರೇ ಕಾಣುತ್ತಿದ್ದರೂ ಅಭಿವೃದ್ಧಿ ಪ್ರಶ್ನಿಸುವ ಕಾಂಗ್ರೆಸ್‌ ಮುಖಂಡರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.

ಅರಣ್ಯ ಅತಿಕ್ರಮಣ ಮಾಡಿ ಜಿಪಿಎಸ್‌ ಆದವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡುವುದಾಗಿ ಶಾಸಕರು ಆಶ್ವಾಸನೆ ನೀಡಿದ್ದರು. ಅದರ ಪ್ರಕಾರ ಗ್ರಾಮೀಣ ಭಾಗದಲ್ಲಿ ಅರಣ್ಯ ಅತಿಕ್ರಮಣ ಮಾಡಿದ ಕುಟುಂಬಗಳಿಗೆ ಮನೆ ನೀಡುವ ಕೆಲಸ ನಡೆದಿದೆ. ಅಭಿವೃದ್ಧಿಗೆ ಅಡ್ಡಗಾಲು ಹಾಕುವವರೇ ಕಾಂಗ್ರೆಸಿಗರು ಎಂದು ಆರೋಪಿಸಿದ ಅವರು, ಈ ಹಿಂದೆ ಶಿರಸಿಯಲ್ಲಿದ್ದ ಡಯಾಲಿಸಿಸ್‌ ಕೇಂದ್ರವನ್ನು ದಾಂಡೇಲಿಗೆ ಒಯ್ಯುವಾಗ ಸುಮ್ಮನಿದ್ದರು. ಶಿರಸಿಯಲ್ಲಿದ್ದ ಸಣ್ಣ ನೀರಾವರಿ ಇಲಾಖೆಯನ್ನು ಹಿಂದಿನ ಉಸ್ತುವಾರಿ ಸಚಿವರು ಹಳಿಯಾಳಕ್ಕೆ ತೆಗೆದುಕೊಂಡು ಹೋಗುವಾಗ ಅವರ ಎದುರು ಇಲ್ಲನ ಕಾಂಗ್ರೆಸ್‌ ಮುಖಂಡರು ಮಂಡಿಯೂರಿ ಕುಳಿತರು. ಆಗ ಅದನ್ನು ತಡೆಯುವ ತಾಕತ್ತು ಇಲ್ಲದವರು ಈಗ ಅಭಿವೃದ್ಧಿಯ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ ನಾಯಕರಿಗೆ ಇದೆಯಾ ಎಂದು ಪ್ರಶ್ನಿಸಿದರು.

Lokayukta raid: ಶಾಸಕ ಮಾಡಳ, ಸಿಎಂ ಬೊಮ್ಮಾಯಿ ಇಬ್ಬರೂ ರಾಜಿ​ನಾಮೆ ನೀಡ​ಲಿ; ಕಾಂಗ್ರೆಸ್ ಆಗ್ರಹ

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಳ ಅಧ್ಯಕ್ಷ ರಾಜೇಶ ಶೆಟ್ಟಿ, ಬಿಜೆಪಿ ವಕ್ತಾರ ಸದಾನಂದ ಭಟ್ಟ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಂದನ ಸಾರ್ಗ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಸೇರಿದಂತೆ ಹಲವರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ