ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ಸುಳ್ಳು ಗೂಂಡಾ ಕಾಯ್ದೆ; ಶಾಸಕ ಮುನಿರಾಜುಗೌಡ ಆರೋಪಕ್ಕೆ ಗೃಹ ಸಚಿವ ಹೇಳಿದ್ದೇನು?

By Ravi Janekal  |  First Published Dec 15, 2023, 6:12 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಹಿಂದೂಪರ ಹೋರಾಟಗಾರರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಗೂಂಡಾ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸುವ ಕೆಲಸ ನಡೆಯುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಬಿಜೆಪಿ ಸದಸ್ಯ ತುಳಸಿ ಮುನಿರಾಜುಗೌಡ ಗುರುವಾರ ಮೇಲ್ಮನೆಯಲ್ಲಿ ಸರ್ಕಾರವನ್ನು ಆಗ್ರಹಿಸಿದರು.


ವಿಧಾನ ಪರಿಷತ್ತು (ಡಿ.15): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಹಿಂದೂಪರ ಹೋರಾಟಗಾರರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಗೂಂಡಾ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸುವ ಕೆಲಸ ನಡೆಯುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಬಿಜೆಪಿ ಸದಸ್ಯ ತುಳಸಿ ಮುನಿರಾಜುಗೌಡ ಗುರುವಾರ ಮೇಲ್ಮನೆಯಲ್ಲಿ ಸರ್ಕಾರವನ್ನು ಆಗ್ರಹಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವ ಕುರಿತು ಪ್ರಸ್ತಾಪಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂಪರ ಹೋರಾಟಗಾರರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಗೂಂಡಾ ಕಾಯಿದೆಯಡಿ ಪ್ರಕರಣಗಳನ ದಾಖಲಿಸಲಾಗುತ್ತಿದೆ. ಇದನ್ನು ಸರ್ಕಾರ ನಿಲ್ಲಿಸಬೇಕು. ಕಾನೂನಿನಡಿ ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು ಎಂದರು.

Tap to resize

Latest Videos

ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಹಿಂದುಗಳ ಮೇಲೆ ದೌರ್ಜನ್ಯ ಹೆಚ್ಚಳ : ಚಕ್ರವರ್ತಿ ಸೂಲಿಬೆಲೆ

ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವುದು ಸರಿಯಲ್ಲ. ಯಾವ ಆಧಾರದಲ್ಲಿ ಸದಸ್ಯರು ಈ ರೀತಿ ಹೇಳುತ್ತಿದ್ದಾರೋ ಗೊತ್ತಿಲ್ಲ. ಹಿಂದಿನ ಸರ್ಕಾರದಲ್ಲಿ ಕೋಮು ಸಂಘರ್ಷ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದವು. ನಮ್ಮ ಸರ್ಕಾರ ಬಂದ ಮೇಲೆ ಅಂತಹ ಪ್ರಕರಣಗಳನ್ನು ನಿಯಂತ್ರಿಸಿ ಕಾನೂನು, ಸುವ್ಯವಸ್ಥೆ ಕಾಪಾಡಲು ಕ್ರಮ ಸೂಕ್ತ ವಹಿಸಲಾಗಿದೆ. ಕೋಮು ಸಂಘರ್ಷ ಸಂಬಂಧ ನಮ್ಮ ಅವಧಿಯಲ್ಲಿ ಕೇವಲ ಎರಡು ಪ್ರಕರಣಗಳಾಗಿದೆ. ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮೂಡಲು ಸಾಧ್ಯವಾಗಿದೆ ಎಂದು ಹೇಳಿದರು.

ರಾಮ, ಹನುಮಂತ, ದೇವಸ್ಥಾನ ನಿಮಗೆ ಕೆಲ್ಸ ಕೊಡಿಸೋದಿಲ್ಲ..' ವಿವಾದ ಎಬ್ಬಿಸಿದ ಸ್ಯಾಮ್‌ ಪಿತ್ರೋಡಾ ಹೇಳಿಕೆ!

ಇದೇ ವೇಳೆ, ಹಿಂದಿನ ಸರ್ಕಾರ ಹಾಗೂ ಈಗಿನ ಸರ್ಕಾರದಲ್ಲಿ ಆಗಿರುವ ಕೊಲೆ, ಅತ್ಯಾಚಾರ ಪ್ರಕರಣಗಳ ಅಂಕಿ ಅಂಶಗಳನ್ನೂ ಸದನಕ್ಕೆ ನೀಡಿದ ಸಚಿವರು, ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 2254 ಕೊಲೆ, 915 ಅತ್ಯಾಚಾರ ಪ್ರಕರಣಗಳು ನಡೆದಿವೆ. ಆರ್.ಅಶೋಕ್ ಅವರು ಗೃಹಮಂತ್ರಿಯಾಗಿದ್ದಾಗ 4121 ಕೊಲೆ, 1639 ಅತ್ಯಾಚಾರ ಪ್ರಕರಣಗಳು, ಆರಗ ಜ್ಞಾನೇಂದ್ರ ಅವರು ಗೃಹ ಮಂತ್ರಿಯಾಗಿದ್ದಾಗ 2417 ಕೊಲೆ, 949 ಅತ್ಯಾಚಾರ ಪ್ರಕರಣಗಳು ನಡೆದಿವೆ. ಆದರೆ, ನಮ್ಮ ಸರ್ಕಾರ ಬಂದ ಕಳೆದ ಆರು ತಿಂಗಳಲ್ಲಿ 614 ಕೊಲೆ, 310 ಅತ್ಯಾಚಾರ ಪ್ರಕರಣಗಳು ನಡೆದಿವೆ. ಇವುಗಳನ್ನೂ ನಿಯಂತ್ರಿಸಲು ನಾವು ಕ್ರಮ ವಹಿಸುತ್ತಿದ್ದೇವೆ ಎಂದು ತಿಳಿಸಿದರು.

click me!