ಬರ ಪರಿಹಾರ ವಿತರಣೆಯಲ್ಲಿ ರೈತರಿಗೆ ಅನ್ಯಾಯ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಸನ (ಫೆ.17): ಬರ ಪರಿಹಾರ ವಿತರಣೆಯಲ್ಲಿ ರೈತರಿಗೆ ಅನ್ಯಾಯ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಂಸದ ಪ್ರಜ್ವಲ್ ರೇವಣ್ಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಮೂರನೇ ತ್ರೈಮಾಸಿಕ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಬರದ ನಷ್ಟದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಹೆಚ್ಚಿನ ಪರಿಹಾರ ದೊರಕಿರುವ ನಿಟ್ಟಿನಲ್ಲಿ ಪ್ರಯತ್ನ ಮಾಡುವುದಾಗಿ ಹೇಳಿದರು. ವಿವಿಧ ಯೋಜನೆಗಳ ಅಡಿಯಲ್ಲಿ ಸರ್ಕಾರಿ ಕಾಮಗಾರಿಗಳಿಗೆ ರೈತರ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಳ್ಳುವ ಮುನ್ನವೇ ರೈತರಿಗೆ ಮಾಹಿತಿ ನೀಡಬೇಕು,
ಜತೆಗೆ ಯಾವುದೇ ಕಾರಣಕ್ಕೂ ಒತ್ತಾಯದಿಂದ ರೈತರ ಜಮೀನು ಭೂ ಸ್ವಾಧೀನ ಪಡಿಸಿಕೊಳ್ಳುವುದು ಬೇಡ, ಅವರಿಗೆ ನೀಡಬೇಕಿರುವ ಪರಿಹಾರವನ್ನು ವಿತರಿಸಿಯೇ ಜಾಗವನ್ನು ಕಾಮಗಾರಿಗಳಿಗೆ ಬಳಸಿಕೊಳ್ಳುವುದು ಸೂಕ್ತ ಎಂದು ಹೇಳಿದರು. ಶಾಸಕ ಎಚ್.ಡಿ ರೇವಣ್ಣ ಮಾತನಾಡಿ, ಮೇ ತಿಂಗಳ ಆರಂಭದಿಂದಲೇ ಪ್ರೌಢ ಶಾಲೆಗಳು ಆರಂಭ ಆಗುತ್ತಿದ್ದು ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕಗಳನ್ನು ವಿತರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ತೋಟಗಾರಿಕೆ ಇಲಾಖೆ ವತಿಯಿಂದ ಸರ್ಕಾರಿ ಶಾಲೆ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಮಕ್ಕಳ ಕಲಿಕೆಗೆ ಉತ್ತಮ ಪರಿಸರ ಕಲ್ಪಿಸುವ ಸಲುವಾಗಿ ಕೆಲಸ ಮಾಡಬೇಕು ಎಂದರು.
ಪರೀಕ್ಷೆ ಸಮಯ ವಿದ್ಯುತ್ ಕಡಿತ ಬೇಡ: ಸಚಿವರಿಗೆ ಶಾಸಕ ಯಶಪಾಲ್ ಮನವಿ
ಹೇಮಾವತಿ ಜಲಾಶಯಗಳ ಮುಳುಗಡೆ ಸಂತ್ರಸ್ತರಿಗೆ ಹಲವು ವರ್ಷಗಳಿಂದ ಅರ್ಹರಿಗೆ ಹಕ್ಕುಪತ್ರ ನೀಡಿಲ್ಲ. ಇದರಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ಎದ್ದು ಕಾಣುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಎಸ್‌ಎಲ್‌ಒ ಮಂಜುನಾಥ್,‘ಮನೆಗಳನ್ನು ಕೊಡುವುದು ಎಇಗೆ ಬರುತ್ತದೆ ನನಗೆ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಕೊಡಿ ದಿಶಾ ಸಭೆಯಲ್ಲಿ ರೇವಣ್ಣ ಒತ್ತಾಯ ಮಾಡಿದಾಗ ಬರುವುದಿಲ್ಲ’ ಎಂದು ತಿಳಿಸಿದರು. ಇದರಿಂದ ಸಿಟ್ಟಾದ ಎಚ್.ಡಿ. ರೇವಣ್ಣ, ‘ನಿವೇಶನ ಹಕ್ಕುಪತ್ರ ನೀಡಲು ನಿಮಗೇನು ಕಷ್ಟ, ಈ ವಿಚಾರವನ್ನು ನಾಳೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ನನಗೆ ಯಾರ ಹಂಗೂ ಸಹ ಇಲ್ಲ, ೨೫ ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ’ ಎಂದರು.
ಕೊಬ್ಬರಿ ಖರೀದಿಯಲ್ಲಿ ಅಕ್ರಮ: ತನಿಖೆಗೆ ಸಂಸದ ಪ್ರಜ್ವಲ್ ರೇವಣ್ಣ ಆಗ್ರಹ
‘ಸಚಿವ ಕೃಷ್ಣ ಬೈರೇಗೌಡ ಕಚೇರಿಯಲ್ಲೆ ಧರಣಿ ಕೊರುತ್ತೇನೆ. ಅಲ್ಲೇ ಪಂಚೆ ಹಾಸಿಕೊಂಡು ಮಲಗುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ವಿಶೇಷ ಭೂಸ್ವಾದೀನಾಧಿಕಾರಿ ಮಂಜುನಾಥ್, ‘ನಮಗೆ ನಿಮ್ಮ ಪಿಎ ಅವರಿಗೆ ಈ ಬಗ್ಗೆ ಪತ್ರ ವಿವರವಾಗಿ ನೀಡಿದ್ದೇನೆ. ಅವರಿಗೆ ಅಗತ್ಯ ಮಾಹಿತಿ ಒದಗಿಸಿದ್ದೇನೆ. ಈ ಬಗ್ಗೆ ನೀವು ಸಹ ಹೇಳಿ’ ಎಂದು ಮಹೇಶ್ ಅವರಿಗೆ ಮಂಜುನಾಥ್ ತಿಳಿಸಿದರು. ಈ ವೇಳೆ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು. ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಅರಣ್ಯಾಧಿಕಾರಿ ಸೌರಭ್ ಕುಮಾರ್ ಇದ್ದರು.