ರೈತರ ಬೇಡಿಕೆಗಳನ್ನು ಚುನಾವಣಾ ಪ್ರಣಾಳಿಕೆ ಬಹಿರಂಗವಾಗಿ ಬಿಡುಗಡೆ ಮಾಡುವ ಮೂಲಕ ಬದ್ಧತೆ ತೋರುವ ಪಕ್ಷಕ್ಕೆ ರಾಜ್ಯದ ರೈತರ ಬೆಂಬಲ ಇರುತ್ತದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರ ಶಾಂತಕುಮಾರ ಹೇಳಿದರು.
ಬೆಳಗಾವಿ (ಮಾ.18) : ರೈತರ ಬೇಡಿಕೆಗಳನ್ನು ಚುನಾವಣಾ ಪ್ರಣಾಳಿಕೆ ಬಹಿರಂಗವಾಗಿ ಬಿಡುಗಡೆ ಮಾಡುವ ಮೂಲಕ ಬದ್ಧತೆ ತೋರುವ ಪಕ್ಷಕ್ಕೆ ರಾಜ್ಯದ ರೈತರ ಬೆಂಬಲ ಇರುತ್ತದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರ ಶಾಂತಕುಮಾರ(Kurabooru shantakumar) ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರ ಪ್ರಣಾಳಿಕೆ(Farmers' Manifesto)ಯನ್ನು ರಾಜ್ಯದಲ್ಲಿರುವ ಪ್ರಬಲ ಯಾವುದೇ ಪಕ್ಷ ಬಹಿರಂಗ ಒಪ್ಪಿಗೆ ಸೂಚಿಸಿ ಜಾರಿಗೆ ತರಲು ಭರವಸೆ ನೀಡುವ ಪಕ್ಷ ಬಹಿರಂಗವಾಗಿ ಬೆಂಬಲಿಸಲು ಕರೆ ನೀಡಲಾಗುವುದು ಎಂದರು.
ಚುನಾವಣೆಗೂ ಮುನ್ನ ಬಿಜೆಪಿ, ಕಾಂಗ್ರೆಸ್ ಪ್ರಚಾರದ ಅಬ್ಬರ; ಮತದಾರರ ಚಿತ್ತ ಯಾರತ್ತ?
ಸರ್ಕಾರಿ ನೌಕರರಿಗೆ, ಶಾಸಕರು, ಮಂತ್ರಿಗಳಿಗೆ ಎಲ್ಲ ವರ್ಗದವರಿಗೂ ಪ್ರತಿ ತಿಂಗಳು ಸಂಬಳ ರೂಪದಲ್ಲಿ ಕನಿಷ್ಠ ಆದಾಯ ಬರುತ್ತದೆ, ಅದೇ ರೀತಿ ದಿನದಲ್ಲಿ ಕನಿಷ್ಠ 12 ಗಂಟೆ ದುಡಿಯುವ ರೈತರಿಗೆ ಕನಿಷ್ಠ ಆದಾಯ ಖಾತರಿ ಭದ್ರತೆ ಯೋಜನೆ ಜಾರಿಗೆ ಬರಬೇಕು. ಪ್ರಾಣಿಗಳ ಹಾವಳಿ, ಹಾಗೂ ದಾಳಿಯಿಂದ ರೈತನ ಬದುಕು ಹಾಳಾಗುತ್ತಿದೆ. ಆದಕಾರಣ ಹಗಲು ವೇಳೆಯಲ್ಲಿ ಕೃಷಿ ಪಂಪಶೆಟ್ಟಗಳಿಗೆ 12 ಗಂಟೆಗಳ ನಿರಂತರ ವಿದ್ಯುತ್ ನೀಡುವ ಭರವಸೆ ನೀಡಬೇಕು. ದೇಶದ ಉದ್ಯಮಿಗಳ ಸಾಲ ಮನ್ನ ಮಾಡಿದ ರೀತಿಯಲ್ಲಿಯೇ ಅತಿವೃಷ್ಟಿಹಾನಿ ಕೊರೋನ ಸಂಕಷ್ಟದಿಂದ ತತ್ತರಿಸಿರುವ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಆಗಬೇಕು , ಕೃಷಿ ಸಾಲ ನೀತಿ ಬದಲಾಗಬೇಕು ಎಂದು ಆಗ್ರಹಿಸಿದರು.
ರೈತನಿಗೆ ಬಡ್ಡಿ ರಹಿತವಾಗಿ ಕೃಷಿ ಸಾಲ ಎಲ್ಲ ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ನೀಡುವಂತಾ ಯೋಜನೆ ಜಾರಿಗೆ ಬರಬೇಕು ಹಾಗೂ ಕೃಷಿ ಸಾಲಕ್ಕೆ ಸಿಬಿಲ… ಸ್ಕೋರ ಪರಿಗಣನೆ ಕೈ ಬಿಡುವುದಾಗಿ ಭರವಸೆ ನೀಡಬೇಕು ಮತ್ತು ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಶಾಸನ ಜಾರಿ, ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ಫಸಲ… ಭೀಮಾ ಬೆಳೆ ವಿಮೆ ಯೋಜನೆಯಡಿ ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಅನ್ವಯ ಮಾಡಬೇಕು. ಅಭಿವೃದ್ಧಿ ಹೆಸರಿನಲ್ಲಿ ರೈತರ ಕೃಷಿ ಭೂಮಿ ಭೂಸ್ವಾದಿನ ಪ್ರಕ್ರಿಯೆ ನಿಲ್ಲಿಸಬೇಕು, ಅಗತ್ಯ ಸಂದರ್ಭಗಳಲ್ಲಿ ರೈತರ ಅನುಮತಿ ಪಡೆಯಬೇಕು ಆಂತಹ ರೈತರಿಗೆ ಜೀವನ ಭದ್ರತೆ ರೂಪಿಸಬೇಕು ಹಾಗೂ ಕಬ್ಬು ಕಟಾವು ಸಾಗಾಣಿಕೆ ದುಬಾರಿ ವೆಚ್ಚ, ಹಾಗೂ ರೈತರ ಸುಲಿಗೆ ತಪ್ಪಿಸಲು ಕಬ್ಬಿನ ಎಫ್‌ಆರ್‌ಪಿ ದರ ರೈತರ ಹೊಲದಲ್ಲಿನ ದÜರ ಎಂದು ನಿಗದಿ ಪಡಿಸಬೇಕು ಎಂದರು.
ರೈತರು ಆಲೆಮನೆಗಳಲ್ಲಿ ಕಬ್ಬಿನಿಂದ ಎಥನಾಲ… ಉತ್ಪಾದನೆಗೆ , ಟ್ಯಾಕ್ಟರ ಮತ್ತಿತರ ಯಂತ್ರಗಳಿಗೆ ಬಳಸಿಕೊಳ್ಳಲು ರೈತರಿಗೆ ಅವಕಾಶ ನೀಡಬೇಕು. ಬಾಳೆ ಬೆಳೆಯನ್ನು ಸೇರಿಸುವ ರೀತಿಯಲ್ಲಿ ಕಬ್ಬು ಬೆಳೆಯ ಉತ್ಪಾದನೆಗೆ ಎನ್‌ಆರ್‌ಇಜಿ ಯೋಜನೆಯನ್ನು ಸೇರಿಸಬೇಕು ಮತ್ತು ಗ್ರಾಮೀಣ ಯುವಕರನ್ನು ವಲಸೆ ತಪ್ಪಿಸಿ ಕೃಷಿಯಲ್ಲಿ ತೊಡಗಿಸಿಕೊಳ್ಳಲು, ಗ್ರಾಮೀಣ ಭಾಗದಲ್ಲಿ ಕೃಷಿ ಪೂರಕ ಯೋಜನೆಗಳನ್ನು ಕೈಗೆತ್ತಿಕೊಳ್ಳುವ, ಭರವಸೆಬೇಕು ಎಂದರು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ರೈತರ ಗಂಡು ಮಕ್ಕಳ ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸದಲ್ಲಿ ಮೀಸಲಾತಿ ನೀಡಬೇಕು .ಕೃಷಿ ಉತ್ಪನ್ನ, ಹಾಗೂ ಕೃಷಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್‌ಟಿ ರದ್ದುಗೊಳಿಸಬೇಕೆಂದರು. ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳಿಗೆ ಪ್ರತ್ಯೇಕ ಮಾರುಕಟ್ಟೆ, ಪ್ರತ್ಯೇಕ ಹೆಚ್ಚುವರಿ ಧರ ನಿಗದಿ ಯೋಜನೆ ಜಾರಿಗೆ ಬರಬೇಕು. ವಿದೇಶಿ ಬಹುರಾಷ್ಟ್ರೀಯ ಬಂಡವಾಳಶಾಹಿ ಕಂಪನಿಗಳು ಚಿಲ್ಲರೆ ಮಾರಾಟ ವ್ಯವಸ್ಥೆಗೆ ಕಡಿವಾಣ ಹಾಕಬೇಕು, ಕೃಷಿ ಕ್ಷೇತ್ರದಲ್ಲಿ ಹೂಡಿಕೆ ನಿಷೇಧವಾಗಬೇಕೆಂದು ಆಗ್ರಹಿಸಿದರು.
ರಾಜ್ಯದ ಕಬ್ಬು ಬೆಳೆಗಾರರಿಗೆ ವಂಚನೆ ಎಸೆಗುತ್ತಿರುವ ಕಾನೂನುಗಳನ್ನ ಉಲ್ಲಂಘನೆ ಮಾಡುತ್ತಿರುವ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕುಟುಂಬಸ್ಥರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೂಳ್ಳಬಾರದು, ರಾಜ್ಯದಲ್ಲಿ ಜಾರಿಗೆ ತಂದಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವ ಭರವಸೆ ನೀಡಬೇಕು. ಕಬ್ಬಿನ ಹೆಚ್ಚುವರಿ ದರ . 150 ನಿಗದಿ ಆದೇಶ ತಡೆಯಾಜ್ಞೆ ತೆರವುಗೊಳಿಸಲು ರಾಜ್ಯ ಸರ್ಕಾರದ ತಕ್ಷಣ ಕ್ರಮ ಕೈಗೊಳ್ಳಬೇ ರೈತರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಬಹಿರಂಗವಾಗಿ ಬದ್ಧತೆ ತೋರುವ ಪಕ್ಷಕ್ಕೆ ರಾಜ್ಯದ ರೈತರ ಬೆಂಬಲ ಇರುತ್ತದೆ ಎಂದು ರಾಜ್ಯ ಕಬ್ಬು ಬೆಳಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರ ಶಾಂತಕುಮಾರ ಹೇಳಿದರು.
ಕಾಂಗ್ರೆಸ್ಸಿಗರು ಈಗಿನ ಮೊಘಲರಿದ್ದಂತೆ: ಅಸ್ಸಾಂ ಸಿಎಂ ಶರ್ಮಾ
ಈ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗುರುಸಿದ್ದಪ್ಪ ಕೋಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಬಿ. ಸಿದ್ದಾಳ್, ರಮೇಶ ಹಿರೇಮಠ, ಹತ್ತಳ್ಳಿ ದೇವರಾಜ, ಧಾರವಾಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಪರಶುರಾಮ… ಎತ್ತಿನಗುಡ್ಡ ಸೇರಿದಂತೆ ಇತರರು ಉಪಸ್ಥಿತರಿದ್ದರು.