ಅಕ್ಕಿ ಕೊಡದ ಕೇಂದ್ರದ ವಿರುದ್ಧ ಹೋರಾಟ: ಡಿ.ಕೆ.ಶಿವಕುಮಾರ್‌

By Kannadaprabha News  |  First Published Jun 16, 2023, 10:56 AM IST

ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿ ಸಾಧ್ಯವಿಲ್ಲ. ಕೆಲ ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿ ಮಾಡಬೇಕು. ಯಾರ ಬಳಿಯೂ ಬೆಟ್ಟು ಮಾಡಿ ತೋರಿಸಿಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ಅಕ್ಕಿ ಹಾಗೂ ಬಡವರ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಕೇಂದ್ರದ ನಿಲುವು ಸರಿಯಲ್ಲ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌


ಮೈಸೂರು(ಜೂ.16):  ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿರುವ ವಿಚಾರಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದವರೇನು ಪುಕ್ಸಟ್ಟೆಅಕ್ಕಿ ಕೊಡುತ್ತಿಲ್ಲ. ಅಕ್ಕಿ ಹಾಗೂ ಬಡವರ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಅಕ್ಕಿ ಕೊಡದಿರುವ ಕೇಂದ್ರದ ತೀರ್ಮಾನದ ವಿರುದ್ಧ ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟ್ಟೆಕೇಳಿಲ್ಲ. ಮುಂಬರುವ ಜು.1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ಕೊಡಲು ತೀರ್ಮಾನಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ. ನಮಗೆ ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಉಳಿದ ರಾಜ್ಯಗಳಿಗೂ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ. ಅಕ್ಕಿ ಕೊಡದಿರುವ ಕೇಂದ್ರದ ನಿಲುವನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತದೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ. ಮುಂದಿನ ರೂಪುರೇಷೆ ಬಗ್ಗೆ ಶುಕ್ರವಾರ ಮಾತನಾಡುತ್ತೇನೆ ಎಂದು ತಿಳಿಸಿದರು.

Latest Videos

undefined

ಕುಂಟು ನೆಪ ಹೇಳಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ: ಸಿದ್ದು ವಿರುದ್ಧ ಬೊಮ್ಮಾಯಿ ವಾಗ್ದಾಳಿ

ಕರ್ನಾಟಕದ ರೈತರಿಂದಲೇ ಅಕ್ಕಿ ಖರೀದಿಸಬಹುದೆಂಬ ಕೂಗಿನ ಕುರಿತು ಪ್ರತಿಕ್ರಿಯಿಸಿದ ಅವರು, ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿ ಸಾಧ್ಯವಿಲ್ಲ. ಕೆಲ ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿ ಮಾಡಬೇಕು. ಯಾರ ಬಳಿಯೂ ಬೆಟ್ಟು ಮಾಡಿ ತೋರಿಸಿಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ಅಕ್ಕಿ ಹಾಗೂ ಬಡವರ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಕೇಂದ್ರದ ನಿಲುವು ಸರಿಯಲ್ಲ ಎಂದು ಖಂಡಿಸಿದರು.

click me!