
ಸೊರಬ (ಏ.21): ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಸಮಾಜವಾದಿ ಪಾರ್ಟಿಯಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ವಿ.ಜಿ. ಪರಶುರಾಮ್ ವಿರುದ್ಧ ಸೊರಬ ಪೊಲೀಸ್ ಠಾಣೆಯಲ್ಲಿ ಚುನಾವಣೆ ನೀತಿ ಸಂಹಿತಿ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಏಪ್ರಿಲ್ 20ರಂದು ಸಮಾಜವಾದಿ ಪಾರ್ಟಿ(Samajavadi party)ಯಿಂದ ತಮ್ಮ ಉಮೇದುವಾರಿಕೆ ಸಲ್ಲಿಸಲು ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮುಂಭಾಗದಿಂದ ಮುಖ್ಯರಸ್ತೆಯ ಮೂಲಕ ತಾಲೂಕು ಕಚೇರಿ ತಲುಪುವ ಮೆರವಣಿಗೆ ವೇಳೆ ಪ್ರಚಾರದ ಕರಪತ್ರದಲ್ಲಿ ಧಾರ್ಮಿಕತೆಯನ್ನು ಬಿಂಬಿಸುವಂತಹ ಚಂದ್ರಗುತ್ತಿಯ ಶ್ರೀ ರೇಣುಕಾಂಬೆ ಮತ್ತು ಪರಮೇಶ್ವರ ದೇವರುಗಳ ಫೋಟೋಗಳನ್ನು ಮುದ್ರಿಸಲಾಗಿತ್ತು. ಇದು ಚುನಾವಣಾ ನೀತಿ ಸಂಹಿತೆಗೆ ವಿರೋಧವಾಗಿದೆ.
ಕರಪತ್ರದಲ್ಲಿ ದೇವರ ಫೋಟೋ ಮುದ್ರಣ: ಎಸ್‌ಪಿ ಅಭ್ಯರ್ಥಿ ಮೇಲೆ ನೀತಿಸಂಹಿತೆ ಉಲ್ಲಂಘನೆ ತೂಗುಗತ್ತಿ!
ಯಾವುದೇ ಪಕ್ಷದ ಮತ್ತು ಪಕ್ಷೇತರ ಅಭ್ಯರ್ಥಿಗಳು ಕರಪತ್ರ ಮತ್ತು ಫ್ಲೆಕ್ಸ್‌ಗಳಲ್ಲಿ ದೇವರ ಭಾವಚಿತ್ರ ಮತ್ತು ಹೆಸರನ್ನು ಬಳಸಿಕೊಳ್ಳುವಂತಿಲ್ಲ. ಅಲ್ಲದೇ ಕರಪತ್ರದಲ್ಲಿ ಮುದ್ರಣಾಲಯದ ಹೆಸರು, ಪ್ರತಿಗಳು ಮತ್ತು ಪ್ರಕಟಣೆ ಮಾಡುವವರು ಹೆಸರು ಯಾವುದೂ ಇರಲಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ದೇವರ ಫೋಟೋ ಹಾಕಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಈ ಬಗ್ಗೆ ಏ.21ರಂದು ಕನ್ನಡಪ್ರಭ ವರದಿ ಮಾಡಿತ್ತು.
ಇದರಿಂದ ಎಚ್ಚೆತ್ತುಕೊಂಡ ಸೊರಬ ವಿಧಾನಸಭಾ ಚುನಾವಣಾಧಿಕಾರಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಿ.ಜಿ. ಪರಶುರಾಮ್ ವಿರುದ್ಧ ಪಿಎಸ್‌ಐ ನಾಗರಾಜ್ ಪ್ರಕರಣ ದಾಖಲಿಸಿ, ಮುಂದಿನ ಕ್ರಮಕೈಗೊಂಡಿದ್ದಾರೆ.
ಶಿವಮೊಗ್ಗದಲ್ಲಿ ಹೊಸ ಮುಖಕ್ಕೆ ಮಣೆ ಹಾಕಿದ ಬಿಜೆಪಿ...ಈ ಬಾರಿ ಶಿವಮೊಗ್ಗದಲ್ಲಿ ಕಮಾಲ್ ಮಾಡುತ್ತಾ ಕಾಂಗ್ರೆಸ್..?
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.