ಕಾಂಗ್ರೆಸ್ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ ದೂರು ನೀಡಿದ್ದರು. ಹೀಗಾಗಿ ದೂರಿನನ್ವಯ ಇದೀಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ(ಏ.16): ಮಾಜಿ ಬಿಜೆಪಿ ಶಾಸಕ ಸಂಜಯ ಪಾಟೀಲ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ 10 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ ದೂರು ನೀಡಿದ್ದರು. ಹೀಗಾಗಿ ದೂರಿನನ್ವಯ ಇದೀಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಶಹಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 143,149, 323, 504, 506 ಸಹ ಕಲಂ 149ರ ಅನ್ವಯ ಕೇಸ್ ದಾಖಲಿಸಿಕೊಳ್ಳಲಾಗಿದೆ. ಹತ್ತು ಜನ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
undefined
ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕರೆಂಟು ಹೋಗುತ್ತೆ, ಬಸ್ ನಿಲ್ಲುತ್ತೆ, 2000 ಬಂದ್ ಅಗುತ್ತೆ: ರಮೇಶ್ ಜಾರಕಿಹೊಳಿ
ಆಯಿಷಾ ಸನದಿ, ಸುಜಯ ಜಾಧವ್, ಜಯಶ್ರೀ ಸೂರ್ಯವಂಶಿ, ಪ್ರಭಾವತಿ ಮಾಸ್ತಮರಡಿ ಸೇರಿ 10 ಜನರ ವಿರುದ್ಧ ಕೇಸ್ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೂಂಡಾಗಳ ಮೂಲಕ ಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಸಂಜಯ್ ಪಾಟೀಲ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.