Mohammed Nalapad controversy ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ನಲಪಾಡ್‌ ವಿರುದ್ಧ ಎಫ್‌ಐಆರ್‌!

By Kannadaprabha News  |  First Published Feb 20, 2022, 4:50 AM IST
  • ಅನಧಿಕೃತವಾಗಿ ಫ್ಲೆಕ್ಸ್‌ ಅಳವಡಿಕೆ ಆರೋಪ
  • ಎಸ್‌.ಜೆ.ಪಾರ್ಕ್ ಠಾಣೆಯಲ್ಲಿ ಕೇಸ್‌, ಮತ್ತೆ ಸಂಕಷ್ಟ
  • ಫೆ.18ರಂದು ಅನಧೀಕೃತವಾಗಿ 15 ಫ್ಲೆಕ್ಸ್‌ ಅಳವಡಿಕೆ

ಬೆಂಗಳೂರು(ಫೆ.20): ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌(BK Hariprasad) ಅಭಿನಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುರಭವನದ ಎದುರು ಅನಧಿಕೃತವಾಗಿ ಫ್ಲೆಕ್ಸ್‌(Flex) ಅಳವಡಿಕೆ ಆರೋಪದಡಿ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌(mohammed haris nalapad) ವಿರುದ್ಧ ಎಸ್‌.ಜೆ.ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌(FIR) ದಾಖಲಾಗಿದೆ.

ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚಂದ್ರಕಾಂತ್‌ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು(Police) ಎಫ್‌ಐಆರ್‌ ದಾಖಲಿಸಿದ್ದಾರೆ. ಬಿ.ಕೆ.ಹರಿಪ್ರಸಾದ್‌ ಅವರ ಅಭಿನಂದನಾ ಕಾರ್ಯಕ್ರಮ ಸಂಬಂಧ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ಅವರು ಪುರಭವನದ ಎದುರು ಫೆ.18ರಂದು ಅನಧೀಕೃತವಾಗಿ 15 ಫ್ಲೆಕ್ಸ್‌ಗಳನ್ನು ಅಳವಡಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.

Tap to resize

Latest Videos

Youth Congress President: ಡಿಕೆಶಿ-ಸಿದ್ದು ಸಮ್ಮುಖದಲ್ಲಿ ಕಳಂಕಿತ ನಲಪಾಡ್‌ ಪದಗ್ರಹಣ

ಮತ್ತೊಂದು ಎಫ್‌ಐಆರ್‌:
ಕಾರ್ಪೊರೇಶನ್‌ ವೃತ್ತದ ಸುತ್ತಮುತ್ತ ಫ್ಲೆಕ್ಸ್‌, ಬ್ಯಾನರ್‌ ಬಂಟಿಂಗ್‌ಗಳ ಅಳವಡಿಕೆ ಸಂಬಂಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಬಿ.ಕೆ.ಹರಿಪ್ರಸಾದ್‌ ಅಭಿನಂದನಾ ಸಮಾರಂಭದ ಹಿನ್ನೆಲೆಯಲ್ಲಿ ಕಾರ್ಪೊರೇಶನ್‌ ಸುತ್ತಮುತ್ತ ಫ್ಲೆಕ್ಸ್‌, ಬ್ಯಾನರ್‌ ಅಳವಡಿಸಿ, ನಗರದ ಸೌಂದರ್ಯಕ್ಕೆ ಧಕ್ಕೆ ತರಲಾಗಿದೆ. ಈ ಮೂಲಕ ಹೈಕೋರ್ಟ್‌ ನಿರ್ದೇಶನ ಉಲ್ಲಂಘಿಸಲಾಗಿದೆ. ಹೀಗಾಗಿ ಈ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಅಳಡಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಆದರೆ, ದೂರುದಾರ ಸಾಯಿದತ್ತ ಅವರು ತಮ್ಮ ದೂರಿನಲ್ಲಿ ಎಲ್ಲಿಯೂ ಸಹ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹ್ಮಮದ್‌ ಹ್ಯಾರಿಸ್‌ ನಲಪಾಡ್‌ ಹೆಸರು ಪ್ರಸ್ತಾಪಿಸಿಲ್ಲ.

Karnataka Politics ಕಾಂಗ್ರೆಸ್ ಯುವ ಅಧ್ಯಕ್ಷರಾಗುತ್ತಿದ್ದಂತೆಯೇ ಮೊಹಮ್ಮದ್ ನಲಪಾಡ್‌ಗೆ ಟಾಂಗ್ ಕೊಟ್ಟ ಬಿಜೆಪಿ

ಈಶ್ವರಪ್ಪ ಬಂಧನಕ್ಕಾಗಿ ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಮುತ್ತಿಗೆ
ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಚಿವ ಕೆ.ಎಸ್‌.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮಹಮದ್‌ ನಲಪಾಡ್‌ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ಬಿಡುಗಡೆಗೊಳಿಸಿದರು.

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಈಶ್ವರಪ್ಪ ಅವರು ಹೇಳಿಕೆ ನೀಡಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ. ಆದ್ದರಿಂದ ತಕ್ಷಣ ಅವರನ್ನು ಮಂತ್ರಿಮಂಡಲದಿಂದ ವಜಾಗೊಳಿಸಬೇಕು. ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಷ್ಟ್ರದ್ರೋಹದ ಹೇಳಿಕೆ ನೀಡಿರುವ ಈಶ್ವರಪ್ಪ ಅವರಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ. ಈಶ್ವರಪ್ಪ ಅವರು ರಾಜೀನಾಮೆ ನೀಡಲೇಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಕೆಲ ಕಾಲ ಪ್ರತಿಭಟಿಸಿದ ನಂತರ ಪೊಲೀಸರು ನಲಪಾಡ್‌ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.

ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಬರುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬ್ಯಾರಿಕೇಡ್‌ ಹಾಕಿ 150ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ವಿನಾಯಕ ವಸಂತರಾವ್‌ ಪಾಟೀಲ್‌ ಭದ್ರತೆ ಒದಗಿಸಿದ್ದರು. ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನೂ ನಿಯೋಜಿಸಲಾಗಿತ್ತು. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ಯಲು ಮೊದಲೇ ಎರಡು ಬಸ್‌ಗಳನ್ನು ತಂದು ನಿಲ್ಲಿಸಲಾಗಿತ್ತು. ಪೊಲೀಸರ ಬಿಗಿ ಬಂದೋಬಸ್‌್ತ ನಡುವೆಯೂ ತಳ್ಳಿಕೊಂಡು ಈಶ್ವರಪ್ಪ ನಿವಾಸದ ಎದುರು ಹೋದ ಮೊಹಮ್ಮದ್‌ ನಲಪಾಡ್‌ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸರು ಮೊಹಮ್ಮದ್‌ ನಲಪಾಡ್‌ ಅವರನ್ನು ವಶಕ್ಕೆ ಪಡೆಯುವ ವೇಳೆ ಯುವತಿಯೊಬ್ಬರು ನಲಪಾಡ್‌ ಮೇಲೆ ಅಡ್ಡಲಾಗಿ ಬಿದ್ದು ವಶಕ್ಕೆ ಪಡೆಯಲು ಅಡ್ಡಿ ಉಂಟು ಮಾಡಿದರು. ಹೀಗಾಗಿ ಪೊಲೀಸರು ನಲಪಾಡ್‌ ವಶಕ್ಕೆ ಪಡೆಯಲು ಹರಸಾಹಸ ಪಟ್ಟರು.

click me!