ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ್ದ ವಿಚಾರವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು (ಏ.7): ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ್ದ ವಿಚಾರವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ರೇಣುಕಾಚಾರ್ಯ ಶಿವಾನಂದ ಸರ್ಕಲ್ ಬಳಿ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಕ್ಷೇತ್ರದ ಕಾರ್ಯಕರ್ತರ ಜೊತೆಗೆ ಸಭೆ ನಡೆಸಿದ್ದರು. ಈ ಸಭೆಯ ವೇಳೆಯೇ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದರು. ಅನುಮತಿ ಪಡೆಯದೆ ಈ ಸಭೆ ಆಯೋಜನೆ ಮಾಡಲಾಗಿತ್ತು. ಮಾತ್ರವಲ್ಲ ಆಯೋಜಕರು ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಕೂಡ ಮಾಡಿದ್ದರು. ರೇಣುಕಾಚಾರ್ಯ ಸ್ಟೇಜ್ ಮೇಲೆ ಮಾತನಾಡುತ್ತಿದ್ದ ವೇಳೆಯೇ ಮೈಕ್ ಕಸಿದುಕೊಂಡು ಅಧಿಕಾರಿಗಳು ಕಾರ್ಯಕ್ರಮ ನಿಲ್ಲಿಸಿದ್ದರು. ಚುನಾವಣಾ ಅಧಿಕಾರಿ ವಿಜಯ್ ರಿಂದ ಈ ಬಗ್ಗೆ ದೂರು ದಾಖಲಾಗಿದ್ದು, ಶಾಸಕ ರೇಣುಕಾಚಾರ್ಯ ಮತ್ತು ಸಂತೋಷ ಎಂಬುವವರ ಮೇಲೆ ದೂರು ದಾಖಲು ಮಾಡಲಾಗಿದೆ. ಕೋರ್ಟ್ ಅನುಮತಿ ಪಡೆದು ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬಿಜೆಪಿ ಬೆಂಬಲಿಸಿದ ಸುದೀಪ್‌ಗೆ ಸಂಕಷ್ಟ, ಕಿಚ್ಚನ ಚಿತ್ರ, ಜಾಹೀರಾತು ಪ್ರಸಾರಕ್ಕೆ ತಡೆ ಕೋರಿ ಜೆಡಿಎಸ್ ದೂರು!
ಟಿಕೆಟ್ ಘೋಷಣೆಗೂ ಮುನ್ನವೇ ಪ್ರಚಾರ ಆರಂಭಿಸಿದ ರೇಣುಕಾಚಾರ್ಯ
ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಟಿಕೆಟ್ ಘೋಷಣೆಗೂ ಮುನ್ನವೇ ಪ್ರಚಾರ ಆರಂಭಿಸಿದ ಶಾಸಕ ರೇಣುಕಾಚಾರ್ಯ. ಹೊನ್ನಾಳಿ ತಾಲೂಕಿನ ಶಿಮ್ಲಾ ಪುರ ತಾಂಡದಲ್ಲಿ ರೇಣುಕಾಚಾರ್ಯ ಪ್ರಚಾರ. ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇದೇ ತಿಂಗಳ 20 ನೇ ತಾರೀಕು ನಾಮಪತ್ರ ಸಲ್ಲಿಸಲು ರೇಣುಕಾಚಾರ್ಯ ನಿರ್ಧಾರ. ತಿಮ್ಲಾಪುರ ತಾಂಡಕ್ಕೆ ಭೇಟಿ ನೀಡಿ ಗ್ರಾಮದ ಮುಖಂಡರು, ಕಾರ್ಯಕರ್ತರಿಗೆ ಆಹ್ವಾನ. ತಿಮ್ಲಾಪುರ ತಾಂಡದಲ್ಲಿ ಮತಯಾಚನೆ. ನಿಮ್ಮ ಗ್ರಾಮಕ್ಕೆ ನೀರಾವರಿ ಸೌಕರ್ಯಕ್ಕಾಗಿ 19 ಕೋಟಿ ಬಿಡುಗಡೆ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆಂದು ಮತಯಾಚನೆ.
'ನನಗೆ ಅವಿರೋಧ ಆಯ್ಕೆ ಬೇಡ ಕುಸ್ತಿ ಬೇಕು; ಕಣಕ್ಕೆ ಯಾರು ಬರ್ತಿರೋ ಬನ್ನಿ':
ಏಪ್ರಿಲ್ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಅಲ್ಲದೆ, ನಾಮಪತ್ರ ಸಲ್ಲಿಕೆ ಆರಂಭವೂ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಇನ್ನು, ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.