ಸಂಸದ ಡಾ.ಕೆ.ಸುಧಾಕರ್‌ ಗುರಿಯಾಗಿಸಿ ಎಫ್‌ಐಆರ್:‌ ಆರ್.ಅಶೋಕ್ ಆರೋಪ

Published : Aug 09, 2025, 07:25 AM ISTUpdated : Aug 10, 2025, 05:31 AM IST
Karnataka LoP R Ashoka

ಸಾರಾಂಶ

ಚಿಕ್ಕಬಳ್ಳಾಪುರ ಸಂಸದ ಡಾ। ಕೆ.ಸುಧಾಕರ್‌ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಆ.09): ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮ8ತ್ಯೆ ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಸಂಸದ ಡಾ। ಕೆ.ಸುಧಾಕರ್‌ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಡಾ। ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ಮಾಡಿ ಎ1 ಆರೋಪಿ ಮಾಡಿದ್ದಾರೆ. ಆತ್ಮ8ತ್ಯೆಗೆ ಅವರೇ ಸಂಪೂರ್ಣ ಒತ್ತಡ ಹೇರಿದರೆ ಮಾತ್ರ ಈ ರೀತಿ ಎಫ್‌ಐಆರ್‌ ಮಾಡಬೇಕಾಗುತ್ತದೆ.

ಆದರೆ ಸುಧಾಕರ್‌, ಚಾಲಕ ಬಾಬು ಅವರ ಜೊತೆ ಆಪ್ತ ಸಂಬಂಧವೇನೂ ಇಲ್ಲ. ಅಲ್ಲದೆ, ಈ ಪ್ರಕರಣದಲ್ಲಿ ಜಾತಿ ನಿಂದನೆಯ ಆರೋಪ ಬರುವುದೇ ಇಲ್ಲ. ಸುಧಾಕರ್‌ ಆ ವ್ಯಕ್ತಿಯನ್ನು ಎದುರಿಗೆ ನಿಲ್ಲಿಸಿಕೊಂಡು ನಿಂದಿಸಿಲ್ಲ, ಅಥವಾ ಸಂದೇಶ ಕಳುಹಿಸಿಲ್ಲ. ಕಾಂಗ್ರೆಸ್‌ ಸರ್ಕಾರ ವಿಪಕ್ಷಗಳ ನಾಯಕರನ್ನು ಗುರಿಯಾಗಿಸುವುದು ಸ್ಪಷ್ಟವಾಗಿದೆ ಎಂದರು. ಈ ಹಿಂದೆ ಶಾಸಕ ಬೈರತಿ ಬಸವರಾಜ್‌ ಅವರ ಮೇಲೂ ಇದೇ ರೀತಿ ಕ್ರಮ ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಡೆತ್‌ನೋಟ್‌ ಬರೆದಿಟ್ಟು ಸತ್ತಿದ್ದರು. ಆದರೆ ಕಾಂಗ್ರೆಸ್‌ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ಅವರ ಹೆಸರು ಎಫ್‌ಐಆರ್‌ನಲ್ಲಿ ಬರಲೇ ಇಲ್ಲ. ಪೊಲೀಸರು ಎಲ್ಲರಿಗೂ ಸಮಾನವಾಗಿ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಚಾಲಕ ಬಾಬು ಬೇರೆ ಬೇರೆ ಕಾರಣಗಳಿಂದ ಸಾಲ ಮಾಡಿದ್ದರು. ಅವರಿಗೆ ಕೆಲವರು ವಂಚನೆ ಮಾಡಿದ್ದರು. ಆದರೆ ಇದರಲ್ಲಿ ಡಾ। ಕೆ.ಸುಧಾಕರ್‌ ಪಾತ್ರವೇನು ಎಂಬುದು ಸ್ಪಷ್ಟವಾಗಿಲ್ಲ. ವಿರೋಧ ಪಕ್ಷದವರಿಗೆ ಕಿರುಕುಳ ಕೊಡಲು ಸರ್ಕಾರ ಹೀಗೆ ಮಾಡುತ್ತಿದೆ. ಈ ಪ್ರಕರಣದಲ್ಲಿ ಡೆತ್‌ನೋಟ್‌ ಮುಂಚಿತವಾಗಿಯೇ ಸಿಕ್ಕರೂ ಅದನ್ನು ಪೊಲೀಸರಿಗೆ ತಿಳಿಸಿಲ್ಲ. ಚಾಲಕ ಬಾಬು ಅವರ ಕುಟುಂಬದವರು ಡಾ। ಕೆ.ಸುಧಾಕರ್‌ ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದರೂ, ಅವರನ್ನು ಎ1 ಆರೋಪಿ ಮಾಡಿದ್ದಾರೆ ಎಂದು ದೂರಿದರು.

ಬಿಜೆಪಿ ಟಾರ್ಗೆಟ್‌: ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಶಾಸಕರಾದ ಮುನಿರತ್ನ, ಸಿ.ಟಿ.ರವಿ, ರವಿಕುಮಾರ್‌ ಮೊದಲಾದ ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಟಾರ್ಗೆಟ್‌ ಮಾಡಿದೆ. ಮಂಜುನಾಥ್‌ ಹಾಗೂ ನಾಗೇಶ್‌ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಚಾಲಕ ಬಾಬು ಆತ್ಮ8ತ್ಯೆ ಪತ್ರದಲ್ಲಿ ಬರೆದಿದ್ದಾರೆ. ಹಾಗೆಯೇ ಆನ್‌ಲೈನ್‌ ಗೇಮ್‌ನಿಂದಲೂ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಇಲ್ಲಿ ಎಲ್ಲೂ ಸಂಸದ ಡಾ। ಕೆ.ಸುಧಾಕರ್‌ ಅವರ ಬಗ್ಗೆ ಆರೋಪ ಮಾಡಿಲ್ಲ. ನಮ್ಮ ಬಳಿ ಯಾರೇ ಬಂದರೂ ಸಹಾಯ ಮಾಡುತ್ತೇವೆ. ಆದರೆ ಹಾಗೆ ಸಹಾಯ ಕೇಳಿ ಹೋದವರು ಸುಸೈಡ್‌ ಮಾಡಿಕೊಂಡರೆ ಅದಕ್ಕೆ ನಾವೇ ಕಾರಣರಾಗುವುದಿಲ್ಲ ಎಂದರು.

ಈ ಹಿಂದೆ ಕೊಡಗು ಶಾಸಕರಾದ ಮಂಥರ್‌ ಗೌಡ ಹಾಗೂ ಎ.ಎಸ್‌.ಪೊನ್ನಣ್ಣ, ಸಚಿವ ಪ್ರಿಯಾಂಕ್‌ ಖರ್ಗೆ ಹೆಸರು ಆತ್ಮ8ತ್ಯೆ ಪ್ರಕರಣದಲ್ಲಿ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯಾಧಾರಗಳೂ ಇತ್ತು. ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಅನೇಕ ಬಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಸಚಿನ್‌ ಸಚಿವರ ಜೊತೆಗೆ ಮಾತಾಡಿದ್ದರು. ಅಷ್ಟೆಲ್ಲ ಸಾಕ್ಷಿಗಳಿದ್ದರೂ ಸಚಿವರ ವಿರುದ್ಧ ಪೊಲೀಸರು ಕ್ರಮ ವಹಿಸಲಿಲ್ಲ ಎಂದು ದೂರಿದರು.

ಚಾಲಕನಿಗೆ ಕೆಲಸ ಕೊಡಿಸಲು ಸಂಸದ ಡಾ। ಕೆ.ಸುಧಾಕರ್‌ಗೆ ಅಧಿಕಾರವಿಲ್ಲ. ಅವರ ವಿರುದ್ಧ ವಿನಾಕಾರಣ ಸಂಚು ಮಾಡಲಾಗಿದೆ. ಆದ್ದರಿಂದ ಈ ಎಫ್‌ಐಆರ್‌ನಿಂದ ಹೆಸರು ಕೈ ಬಿಡಬೇಕು. ಇಲ್ಲವಾದರೆ ಕೋರ್ಟ್‌ನಲ್ಲಿ ನಮಗೆ ನ್ಯಾಯ ದೊರೆತು ಸರ್ಕಾರಕ್ಕೆ ಮುಖಭಂಗವಾಗುತ್ತದೆ ಎಂದು ಎಚ್ಚರಿಸಿದರು. ಜಾತಿ ನಿಂದನೆ ಪ್ರಕರಣದಲ್ಲಿ ವ್ಯಕ್ತಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂದಿಸಿದ ಉದಾಹರಣೆ ಇರಬೇಕಾಗುತ್ತದೆ. ಅದಕ್ಕೆ ಬೇರೆಯವರ ಸಾಕ್ಷಿ ಇರಬೇಕು. ಈ ಪ್ರಕರಣದಲ್ಲಿ ಇಂತಹ ನಿದರ್ಶನಗಳೇ ಇಲ್ಲವೆಂದ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸುವುದು ತಪ್ಪು. ಸರ್ಕಾರಕ್ಕೆ ಈ ಮಾಹಿತಿ ಇಲ್ಲವೇ? ಕಾಂಗ್ರೆಸ್‌ ಸರ್ಕಾರ ತಂತ್ರಗಾರಿಕೆಯ ಮೂಲಕ ಬಿಜೆಪಿ ನಾಯಕರನ್ನು ಟಾರ್ಗೆಟ್‌ ಮಾಡುತ್ತಿದೆ ಎಂದು ಆರೋಪಿಸಿದರು.

ಸುಧಾಕರ್‌ ವಿರುದ್ಧ ಷಡ್ಯಂತ್ರ; ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ: ಚಿಕ್ಕಬಳ್ಳಾಪುರ ಸಂಸದ ಡಾ। ಕೆ. ಸುಧಾಕರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ವಿಚಾರವಾಗಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಚಿಕ್ಕಬಳ್ಳಾಪುರದಲ್ಲಿ ಮಹಿಳೆ ಸುಧಾಕರ್‌ ಹೆಸರು ತೆಗೆದುಕೊಂಡಿರಲಿಲ್ಲ ಎಂಬ ಮಾಹಿತಿ ಇದೆ. ಇದನ್ನು ಎದುರಿಸಲು ಸುಧಾಕರ್‌ ಅವರಿಗೆ ಶಕ್ತಿ ಇದೆ. ಅವರನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ಮಾಡಲಾಗಿದೆ ಅಷ್ಟೇ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು