ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಸ್ಪರ್ಧೆ ಮಾಡಲು 80 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಕುರಿತ ಮೊದಲ ಇಂದು ಬಿಡುಗಡೆ ಮಾಡಲಾಯಿತು.
ಬೆಂಗಳೂರು (ಮಾ.20): ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಆಮ್ ಆದ್ಮಿ ಪಕ್ಷದಿಂದ (ಎಎಪಿ) ಸ್ಪರ್ಧೆ ಮಾಡಲು 80 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಕುರಿತ ಮೊದಲ ಇಂದು ಬಿಡುಗಡೆ ಮಾಡಲಾಯಿತು.
ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಕೆಲವೆಡೆ ಘಟಾನುಘಟಿ ನಾಯಕರನ್ನು ಹಾಗೂ ಜನರಿಗೆ ಚಿರಪರಿಚಿತ ಮುಖಗಳನ್ನು ಕಣಕ್ಕಿಳಿಸಲು ಮುಂದಾಗಿದೆ. ಒಟ್ಟು 80 ಜನ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷ ಜೆಡಿಎಸ್‌ಗಳ ಮತಗಳನ್ನು ಕಸಿಯಲು ಸಿದ್ಧವಾಗಿದೆ. ಇದರಲ್ಲಿ ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7 ರೈತರು, 7 ಮಹಿಳೆಯರು ಹಾಗೂ 5 ಸಾಮಾಜಿಕ ಕಾರ್ಯಕರ್ತರಿಗೆ ಟಿಕೆಟ್ ನಿಡಲಾಗಿದೆ.
ತುರುವೇಕೆರೆಯಿಂದ ನಟ ಟೆನ್ನಿಸ್ ಕೃಷ್ಣ, ಚಿಕ್ಕಪೇಟೆಯಿಂದ ಬ್ರಿಜೇಶ್ ಕಾಳಪ್ಪ, ಸಿವಿ ರಾಮನ್ ನಗರದಿಂದ ಮೋಹನ್ ದಾಸರಿ, ಶಾಂತಿನಗರದಿಂದ ನಿವೃತ್ತ ಕೆಎಎಸ್ ಅಧಿಕಾರಿ ಕೆ. ಮಥಾಯಿ, ಮಹಾಲಕ್ಷ್ಮಿ ಲೇಔಟ್‌ನಿಂದ ಶಾಂತಲಾ ದಾಮ್ಲೆ ಹಾಗೂ ಚನ್ನಪಟ್ಟಣದಿಂದ ಡಿಕೆ ಶಿವಕುಮಾರ್ ಅವರ ಸಂಬಂಧಿ ಶರತ್ ಚಂದ್ರ ಸ್ಪರ್ಧೆ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.