
ಬೆಂಗಳೂರು(ಏ.25): ರಾಜ್ಯದ ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಡೆದ ಅಬ್ಬರದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಇನ್ನೇನಿದ್ದರೂ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಿ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು ನಡೆಸಲಿದ್ದಾರೆ.
ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ 14 ಕ್ಷೇತ್ರದಲ್ಲಿ ಮತದಾನ ಆರಂಭವಾಗುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಗುರುವಾರ ಇಡೀ ದಿನ ಅಭ್ಯರ್ಥಿಗಳು ಮತ್ತು ಬೆಂಬಲಿಗರು ಮನೆ ಮನೆ ಪ್ರಚಾರ ನಡೆಸಲಿದ್ದಾರೆ.
ಮಂಗಳೂರು: ಆಸ್ಪತ್ರೆಯಿಂದ ಬಂದು ಮತ ಹಾಕಿದ ಮಾಜಿ ಯೋಧ ಆಸ್ಪತ್ರೆಯಲ್ಲೇ ನಿಧನ
ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿಗಳು ಕ್ಷೇತ್ರದಲ್ಲಿ ಕಾಣಿಸಿ ಕೊಳ್ಳುವಂತಿಲ್ಲ. ಮತದಾನಕ್ಕೂ 48 ಗಂಟೆ ಮೊದಲು ಶೂನ್ಯ ಅವಧಿ ಪ್ರಾರಂಭವಾಗಿರುವ ಕಾರಣ ಯಾವುದೇ ರೀತಿ ಅಬ್ಬರ ಪ್ರಚಾರ ಕೈಗೊ ಳ್ಳುವಂತಿಲ್ಲ. ಚುನಾವಣಾ ಕಣದಲ್ಲಿರುವ ಅಭ್ಯರ್ಥಿ ಗಳು ಮಾತ್ರ ಮನೆ ಮನೆ ಪ್ರಚಾರ ಕೈಗೊಂಡಿದ್ದಾರೆ. ಮನೆ ಮನೆಗೆ ತೆರಳಿ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು ಆರಂಭಿಸಿದ್ದಾರೆ. ಮನೆ ಮನಮತಯಾಚನೆ ವೇಳೆ ಐದು ಜನಕ್ಕಿಂತ ಹೆಚ್ಚು ಜನರು ಇರುವಂತಿಲ್ಲ, ಧ್ವನಿ ವರ್ಧಕ ಬಳಸದೆ ಮತಯಾಚನೆ ಮಾಡಬಹುದಾಗಿದೆ.
ಯಾವುದೇ ರೀತಿಯ ಸಾರ್ವಜನಿಕ ಸಭೆ, ಬ್ಯಾಲಿ ಗಳನ್ನು ನಿರ್ಬಂಧಿಸಲಾಗಿದೆ. ಬುಧವಾರ ಸಂಜೆ 6 ಗಂಟೆಯಿಂದಲೇ ಮದ್ಯ ಮಾರಾಟವನ್ನು ನಿಷೇಧಿಸಲಾ ಗಿದೆ. ಮತದಾರರಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಕ್ಷೇತ್ರ ಬಿಟ್ಟು ತೆರಳಿದ್ದಾರೆ. ಒಂದು ವೇಳೆ ಆಕ್ರಮವಾಗಿ ತಂಗುವ ಸಾಧ್ಯತೆ ಇರುವ ಕಾರಣ ಚುನಾವಣಾ ಸಿಬ್ಬಂದಿ ಕಲ್ಯಾಣಮಂಟಪ, ಹೋಟೆಲ್, ಅತಿಥಿಗೃಹ, ವಸತಿಗೃಹ ಸೇರಿದಂತೆ ಇತರೆ ಪ್ರದೇಶಗಳ ಪರಿಶೀಲನೆ ನಡೆಸಿದ್ದಾರೆ. ಯಾತ್ರಾರ್ಥಿಗಳು, ಪ್ರವಾಸಿಗರಿಗೆ ಕ್ಷೇತ್ರ ಬಿಟ್ಟು ತೆರಳುವ ನಿರ್ಬಂಧ ಇಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕ್ಷೇತ್ರದ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ ಕ್ಷೇತ್ರದ ಹೊರಗಿನಿಂದ ಬರುವ ವಾಹನಗಳ ಚಲನವಲ ನದ ನಿಗಾವಹಿಬೇಕು. ಆಕ್ರಮವಾಗಿ ಕ್ಷೇತ್ರದಲ್ಲಿ ಓಡಾಡುತ್ತಿರುವುದು ಅನುಮಾನ ಬಂದರೆ ಆಯಾ ಕ್ಷೇತ್ರದ ಮತದಾರರೇ ಅಥವಾ ಇಲ್ಲವೇ ಎಂಬುದನ್ನು ಪತ್ತೆಹಚ್ಚಲು ಗುರುತಿನ ಚೀಟಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ.
ಬಿಜೆಪಿ ಸರ್ಕಾರದ ಸಾಧನೆ ಚೊಂಬು: ಜಮೀರ್ ವಾಗ್ದಾಳಿ
ಮೊದಲ ಹಂತದ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನ ವರಿಷ್ಠರಾದ ರಾಹುಲ್‌ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಬಿರುಸಿನ ಮತ ಪ್ರಚಾರ ಕೈಗೊಂಡರು. ಬಹಿರಂಗ ಪ್ರಚಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಘಟಾನುಘಟಿ ನಾಯಕರು ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಒಂದು ವೇಳೆ ಚುನಾವಣಾ ಸಿಬ್ಬಂದಿ ಕ್ಷೇತ್ರಕ್ಕೆ ಸಂಬಂಧಪಡದವರು ಕಂಡು ಬಂದರೆ ಸೂಕ್ತ ಕ್ರಮ ಜರುಗಿಸಲಿದ್ದಾರೆ.
ಮೊದಲ ಹಂತದ ಮತದಾನ ಕ್ಷೇತ್ರಗಳು
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರಮರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.