ಪರಿಷತ್ ಎಲೆಕ್ಷನ್ ರಿಸಲ್ಟ್: ಬಿಜೆಪಿ ಅಭ್ಯರ್ಥಿ ಪರ 5 ಹೆಚ್ಚುವರಿ ಮತಗಳು ಪತ್ತೆ, ತನಿಖೆಗೆ ಒತ್ತಾಯ

By Suvarna News  |  First Published Jun 15, 2022, 3:08 PM IST

* ಕರ್ನಾಟಕ ವಿಧಾನಪರಿಷತ್ ಚುನಾವಣೆ ಫಲಿತಾಂಶ
* ವಾಯುವ್ಯ ಶಿಕ್ಷಕರ ‌ಕ್ಷೇತ್ರದ ಮತಪೆಟ್ಟಿಗೆಯಲ್ಲಿ ಗೊಂದಲ
* ಮತಪೆಟ್ಟಿಗೆಯಲ್ಲಿ ಹೆಚ್ಚವರಿ 5 ಮತ ಪತ್ತೆ


ಬೆಂಗಳೂರು, (ಜೂನ್15): ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು(ಬುಧವಾರ) ಬೆಳಗ್ಗೆ 8 ಗಂಟೆಯಿಂದ ನಡೆಯುತ್ತಿದ್ದು, ಸಂಜೆ ಹೊತ್ತಿಗೆ ಅಧಿಕೃತ ಸ್ಪಷ್ಟ ಫಲಿತಾಂಶ ಹೊರಬರಲಿದೆ.

ಇನ್ನು ಇದರ ಮಧ್ಯೆ ವಿಧಾನ ಪರಿಷತ್​ನ ವಾಯುವ್ಯ ಶಿಕ್ಷಕರ ‌ಕ್ಷೇತ್ರದ ಚುನಾವಣೆ ಮತ ಎಣಿಕೆಯಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತ ಕ್ಷೇತ್ರದ ಮತ ಪೆಟ್ಟಿಗೆಯಲ್ಲಿ 5 ಹೆಚ್ಚುವರಿ ಮತಗಳು ಪತ್ತೆಯಾಗುರುವುದು ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ಆ ಐದು ಮತಗಳು ಬಿಜೆಪಿ ಅಭ್ಯರ್ಥಿ ಪರ ಬಿದ್ದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

Tap to resize

Latest Videos

MLC Elections Result: ರಾಜಕೀಯ ಇತಿಹಾಸದಲ್ಲೇ ದಾಖಲೆ ಬರೆದ ಹೊರಟ್ಟಿ

ಈ ಬಗ್ಗೆ ವಾಯುವ್ಯ ಶಿಕ್ಷಕರ ‌ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ಬಿ.ಬನ್ನೂರ ಆಕ್ಷೇಪಿಸಿದ್ದು. 71 ಮತಗಳು ಇರಬೇಕಿದ್ದ ಪೆಟ್ಟಿಗೆಯಲ್ಲಿ 76 ಮತಗಳು ಹೇಗೆ ಬಂತು ಎಂದು ಪ್ರಶ್ನಿಸಿದ್ದಾರೆ. ಬಾಗಲಕೋಟೆಯ ಇಳಕಲ್ ಮತ ಪೆಟ್ಟಿಗೆಯಲ್ಲಿ 5 ಮತಗಳು ಹೆಚ್ಚಿಗೆ ಬಂದಿವೆ. ಬಿಜೆಪಿ ಅಭ್ಯರ್ಥಿ ಅರುಣ ಶಾಹಾಪುರ ಪರ 5 ಮತಗಳು ಹೆಚ್ಚಿಗೆ ಬಂದಿದೆ. ಇದು ಹೇಗೆ ಸಾಧ್ಯ ಎಂದು? ಈ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲ, ಮತಗಟ್ಟೆ ಸಂಖ್ಯೆ 3ರ ವಾಯುವ್ಯ ಶಿಕ್ಷಕರ ಕ್ಷೇತ್ರದ ಮತಪೆಟ್ಟಿಗೆಯಲ್ಲಿ ಮೂರು ಪದವೀಧರ ಮತಗಳು ಕಂಡು ಬಂದಿವೆ. ಮತ ಎಣಿಕೆ ಆರಂಭಕ್ಕೂ ಮುನ್ನವೇ ಕೇಂದ್ರದಲ್ಲಿ ಬೆಳಗ್ಗೆ ಕೆಲಕಾಲ ಗೊಂದಲ ಉಂಟಾಗಿತ್ತು. ಮತಗಟ್ಟೆ ನಂಬರ್​ 4ರ ಮತಪೆಟ್ಟಿಗೆಯ ಮೇಲೆ ಕಟ್ಟಿದ ಬಟ್ಟೆ ಬದಲಾವಣೆಯಾಗಿತ್ತು. ಪೆಟ್ಟಿಗೆ ಮೇಲೆ ಸೀಲ್ ಹಾಕದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಲೋನಿ ಪರ ಏಜೆಂಟರು ಆಕ್ಷೇಪ ವ್ಯಕ್ತಪಡಿಸಿದರು.

ಜೋರಾಗಿ ಗದ್ದಲ ಶರುವಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾನ್ ಬಿಸ್ವಾಸ್, ಸದಲಗಾ- ಚಿಕ್ಕೋಡಿ ಭಾಗದ ಎರಡು ಮತಪೆಟ್ಟಿಗೆ ಮೇಲೆ ಈ ರೀತಿ ಆಗಿದೆ. ಮತದಾನ ಮುಗಿದ ಬಳಿಕ ಇದೇ ಬಟ್ಟೆಯನ್ನೇ ಸುತ್ತಲಾಗಿತ್ತು. ಇದರಲ್ಲಿ ಅನುಮಾನ ಬೇಡ ಎಂದು ಮನವೊಲಿಸಿದರು.

ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಲೈವ್ ಅಪ್ಡೇಟ್ಸ್

ಹೊರಟ್ಟಿಗೆ ಗೆಲುವು
ಬೆಳಗಾವಿ, (ಜೂನ್15): ಈ ಬಾರಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. 

ಈ ಬಾರಿ ಬಸವರಾಜ  ಹೊರಟ್ಟಿ ಅವರು ಜೆಡಿಎಸ್‌ಗೆ ರಾಜೀನಾಮೆ ನೀಡಿ ಬಿಜೆಪಿಯಿಂದ ಅಖಾಡಕ್ಕಿಳಿದಿದ್ದರು. ಇದೀಗ ಮತ್ತೊಮ್ಮೆ ಪರಿಷತ್‌ಗೆ ಪ್ರವೇಶ ಮಾಡಿದ ಹೊಸ ದಾಖಲೆ ಬರೆದಿದ್ದಾರೆ.

ಮಾಹಿತಿ ಪ್ರಕಾರ 7501 ಮತಗಳನ್ನು ಪಡೆಯುವ ಮೂಲಕ ಮೊದಲ ಪ್ರಾಶಸ್ತ್ಯದಲ್ಲೇ  ಬಸವರಾಜ ಹೊರಟ್ಟಿ ಅವರು ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ  ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 8ನೇ ಬಾರಿಗೆ ಗೆಲುವು ಸಾಧಿಸಿಸುವ ಮೂಲಕ ದೇಶದ ರಾಜಕೀಯ ಇತಿಹಾಸದಲ್ಲಿಯೇ ದಾಖಲೆ‌ ನಿರ್ಮಿಸಿದ್ದೇನೆ.

ಇನ್ನು ಈ ಬಗ್ಗೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಪ್ರತಿಕ್ರಿಯಿಸಿರುವ ಹೊರಟ್ಟಿ, 1890ರಿಂದ 2022 ರವರೆಗೆ ನಿರಂತರವಾಗಿ ಗೆಲುವು ಸಾಧಿಸಿದ್ದೇನೆ. ರಾಜಕೀಯದಲ್ಲಿ ಇತಿಹಾಸದಲ್ಲಿ‌ ಸತತವಾಗಿ 8 ಬಾರಿ ಗೆದ್ದಿಲ್ಲ. ಈ ಗೆಲುವು ಶಿಕ್ಷಕರದ್ದು ಎಂದು ಸಂತಸ ವ್ಯಕ್ತಪಡಿಸಿದರು,

ಚುನಾವಣೆಯಲ್ಲಿ ಚಲಾಯಿಸಿದ ಮತಗಳಲ್ಲಿ ಶೇ.50 ಮತ ಪಡೆದುಕೊಂಡವರು ಗೆಲುವು ಸಾಧಿಸಲಿದ್ದಾರೆ. ಈಗಾಗಲೇ ನಾನು 15 ಸಾವಿರ ಮತಗಳ ಪೈಕಿ 7500 ಮತಗಳನ್ನು ಪಡೆದು ಗೆದ್ದಿದ್ದೇನೆ ಎಂದು ಹೇಳಿದರು.

click me!