3 ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿ ತೆರವು ಸದ್ಯಕ್ಕಿಲ್ಲ: ಸಚಿವ ಈಶ್ವರ್‌ ಖಂಡ್ರೆ

By Kannadaprabha News  |  First Published Aug 28, 2024, 5:38 AM IST

ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥಕ್ಕೆ ಬಾಕಿ ಉಳಿದಿರುವ ಹಾಗೂ ಪಟ್ಟಾ ಭೂಮಿ ಸೇರಿದಂತೆ 3 ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವಿನ ಕುರಿತು ಸದ್ಯಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. 2015ರ ನಂತರದ ಮತ್ತು ದೊಡ್ಡ ಪ್ರಮಾಣದಲ್ಲಾದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.


ಬೆಂಗಳೂರು (ಆ.28): ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥಕ್ಕೆ ಬಾಕಿ ಉಳಿದಿರುವ ಹಾಗೂ ಪಟ್ಟಾ ಭೂಮಿ ಸೇರಿದಂತೆ 3 ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವಿನ ಕುರಿತು ಸದ್ಯಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. 2015ರ ನಂತರದ ಮತ್ತು ದೊಡ್ಡ ಪ್ರಮಾಣದಲ್ಲಾದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮಲೆನಾಡು ಮತ್ತು ಕರಾವಳಿ ಭಾಗದ ಜನರಲ್ಲಿನ ಗೊಂದಲ ನಿವಾರಣೆಗೆ ಪತ್ರಿಕಾ ಹೇಳಿಕೆ ನೀಡಿರುವ ಈಶ್ವರ್‌ ಖಂಡ್ರೆ, ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಲಾಗುತ್ತಿದೆ. ಸರ್ಕಾರ ಬಡವರ ಭೂಮಿ ಒತ್ತುವರಿ ತೆರವು ಮಾಡುತ್ತಿಲ್ಲ. ಬದಲಿಗೆ ದೊಡ್ಡ ಒತ್ತುವರಿ ಮತ್ತು 2015ರ ನಂತರದ ಒತ್ತುವರಿಯನ್ನು ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಅಲ್ಲದೆ, ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶಿಸಿದ್ದು, ಅದರ ಆಧಾರದಲ್ಲಿ ಒತ್ತುವರಿ ತೆರವಿಗೆ ಆದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Tap to resize

Latest Videos

ಕೇಂದ್ರ ಪುರಸ್ಕೃತ ಯೋಜನೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಸಂಸದ ಯದುವೀರ್ ಒಡೆಯರ್ ಅಧಿಕಾರಿಗಳಿಗೆ ಸೂಚನೆ!

ರಾಜ್ಯ ಸರ್ಕಾರ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳು ಅರಣ್ಯ ಹಕ್ಕು ಕಾಯ್ದೆ ಅಡಿ ಸಲ್ಲಿಸಿರುವ ಅರ್ಜಿಗಳನ್ನು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣವಾಗುವವರೆಗೆ ಆ ಒತ್ತುವರಿ ತೆರವು ಮಾಡದಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟು ಸಮುದಾಯದವರಿಗೆ ಸಮಾನವಾಗಿ ಇತರೆ ಪಾರಂಪರಿಕ ಅರಣ್ಯ ವಾಸಿಗಳನ್ನೂ ಪರಿಗಣಿಸುವಂತೆ ಮಾಡಲು ನಿರ್ಧರಿಸಲಾಗಿದೆ. ಅದಕ್ಕಾಗಿ ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006 ಮತ್ತು ಅದರಡಿಯ ನಿಯಮಗಳನ್ನು ಸಮರ್ಪಕವಾಗಿ ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದರು.

2015ರವರೆಗೆ 30 ಎಕರೆಗೂ ಹೆಚ್ಚಿನ 133 ಒತ್ತುವರಿ ಪ್ರಕರಣಗಳಿದ್ದು, 5,344.33 ಎಕರೆ ಒತ್ತುವರಿಯಾಗಿದೆ. ಹಾಗೆಯೇ, 10ರಿಂದ 30 ಎಕರೆವರೆಗಿನ 718 ಒತ್ತುವರಿ ಪ್ರಕರಣಗಳಲ್ಲಿ 12,898 ಎಕರೆ, 3ರಿಂದ 10 ಎಕರೆವರೆಗಿನ 23,423 ಪ್ರಕರಣಗಳಲ್ಲಿ 71,108 ಎಕರೆ ಭೂಮಿ ಒತ್ತುವರಿಯಾಗಿದೆ. ಹಾಗೆಯೇ, 3 ಎಕರೆಗಿಂತ ಕಡಿಮೆ ವಿಸ್ತೀರ್ಣ 86,352 ಒತ್ತುವರಿ ಪ್ರಕರಣಗಳಿದ್ದು, 11.50 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿಕೊಂಡಿರುವ ಅರ್ಹ ಒತ್ತುವರಿದಾರರ ಜೀವನೋಪಾಲಯಕ್ಕೆ ತೊಂದರೆಯಾಗದಂತೆ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಅಡಿ ಕ್ರಮವಹಿಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ.

ಚಾಮುಂಡಿಬೆಟ್ಟ ದೇವಸ್ಥಾನದ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು: ಸಂಸದ ಯದುವೀರ್ ಒಡೆಯರ್

ಆದರೆ, 2015ರ ನಂತರ ಅರಣ್ಯ ಭೂಮಿ ಒತ್ತುವರಿಯನ್ನು ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇ, ತೋಟ, ಬಡಾವಣೆಗಳ ತೆರವಿಗೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

click me!