Breaking: ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರ ನಿಧನ

By Suvarna News  |  First Published May 8, 2024, 6:06 PM IST

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರಾ ಅವರು ವಿಧಿವಶರಾಗಿದ್ದಾರೆ.


ಮಂಗಳೂರು (ಮೇ.8): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರಾ (79) ಅವರು ವಿಧಿವಶರಾಗಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ ಬೆಳ್ತಂಗಡಿಯಲ್ಲಿ ಐದು ಬಾರಿಯ ಶಾಸಕರಾಗಿದ್ದರು. 1946ರ ಜನವರಿ 15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದರು.

ಇಂದು ನಿಧನರಾದ ಬಂಗೇರ ಅವರ ಪಾರ್ಥಿವ ಶರೀರ ಮೇ 9ರಂದು ಮುಂಜಾನೆ  ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು.

Tap to resize

Latest Videos

ಮಗಳ ಪ್ರೀತಿಗೆ ಅಡ್ಡ ನಿಂತು ಭಗ್ನಪ್ರೇಮಿಗೆ ಚಾಕು ಇರಿದ ಅಪ್ಪ, ಬಿಡಿಸಲು ಬಂದ ಸಹೋದರನೂ ಬಲಿ!

ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಬಂಗೇರ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಬಂಗೇರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ  ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆಗೆ ಒಳಗಾಗಿದ್ದರು. 

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲುವು ಸಾಧಿಸಿ ಬಂಗೇರಾ ದಾಖಲೆ ಬರೆದಿದ್ದರು. 1983 ಮತ್ತು 1985ರಲ್ಲಿ ವಸಂತ ಬಂಗೇರ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತ  ಸೋಲು ಕಂಡಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ನಿಂತು ಗೆಲುವು ಕಂಡರು.  1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು.

ಪತ್ನಿ ಮಾಡಿದ ತಪ್ಪಿಗೆ ಸಂಧಾನಕ್ಕೆಂದು ಕರೆದು ಉದ್ಯಮಿಯಿಂದ ಕಪಾಳ ಮೋಕ್ಷ, ನೋವು ತಾಳಲಾರದೆ ಕ್ಯಾಬ್‌ ಡ್ರೈವರ್ ಬಲಿ!

ಜೆಡಿಎಸ್ ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

click me!