ಸರ್ಕಾರದ ನಿರ್ಲಕ್ಯದಿಂದ ಟಿಬಿ ಡ್ಯಾಮ್ ಸಮಸ್ಯೆ, ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ: ಬಸವರಾಜ ಬೊಮ್ಮಾಯಿ

By Sathish Kumar KH  |  First Published Aug 11, 2024, 11:58 PM IST

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಲೇ ತುಂಗಭದ್ರಾ ಜಲಾಶಯದಲ್ಲಿ ಸಮಸ್ಯೆಯಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.


ಬೆಂಗಳೂರು (ಆ.11): ರಾಜ್ಯ ಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದರಿಂದ ಡ್ಯಾಮ್ ಕ್ರಸ್ಟ್ ಗೇಟ್ ಮುರಿದು ಸಮಸ್ಯೆ ಎದುರಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿದೆ. ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಹೀಗಾಗಿ  ಸಮಾನಾಂತರವಾದ ಅಣೆಕಟ್ಟು  ಕಟ್ಟಬೇಕು ಅಂತ ನಮ್ಮ ಅವಧಿಯಲ್ಲಿ  ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು. ಡ್ಯಾಂ ಮ್ಯಾನೇಜ್ ಮೆಂಟ್ ಕಮಿಟಿ ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರುತ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ, ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನಿಸುತ್ತದೆ. ಅವರ ಸಲಹೆ ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

Tap to resize

Latest Videos

undefined

ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸರ್ಕಾರದ ನಿರ್ಲಕ್ಷ್ಯತನದಿಂದಲೇ ಹೀಗೆ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಹಣಕಾಸು ಅಥವಾ ತಾಂತ್ರಿಕ ಸಮಸ್ಯೆ ಆಗಿರಬಹುದು.  ನೋಡೋಣ  ಏನಾಗಿದೆ ಎಂದು ಗೊತ್ತಾಗುತ್ತದೆ.  ಡ್ಯಾಂನಲ್ಲೇ ಇಂಜಿಜಿಯರ್ ಗಳು, ತಾಂತ್ರಿಕ ತಜ್ಞರು ಇದ್ದರು. ಅವರೆಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ವರ್ಷ ಅತೀ ಹೆಚ್ಚು ಮಳೆ ಬರುತ್ತದೆ ಅಂತ ಮೊದಲೇ ಹವಾಮಾನ ತಜ್ಞರು ಹೇಳಿದ್ದರು. ಅದನ್ನು ಅರ್ಥ ಮಾಡಿಕೊಂಡು ಇವರು ಕೆಲಸ ಮಾಡಬೇಕಿತ್ತು. ಆದರೆ ಸರಿಯಾದ ನಿರ್ವಹಣೆ ಮಾಡದೇ ಈ ಸಮಸ್ಯೆ ಆಗಿದೆ. ಈ ಬಗ್ಗೆ ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ ಕಲ್ಪಿಸಿದ್ದಾರೆ. ಹೀಗಾಗಿ ಇದು ಬ್ರಾಂಡ್ ಬೆಂಗಳೂರು ಆಗುತ್ತದೊ, ಬ್ಯಾಂಡ್ ಬೆಂಗಳೂರು ಆಗುತ್ತದೊ ಗೊತ್ತಿಲ್ಲ. ಬೆಂಗಳೂರನ್ನು ಸ್ವಚ್ಚ ಬೆಂಗಳೂರನ್ನಾಗಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ತುಂಗಭದ್ರಾ ಡ್ಯಾಂ ಅವಘಡ ಇದೇ ಮೊದಲಲ್ಲ, 2019ರಲ್ಲೂ ನಡೆದಿತ್ತು ದುರಸ್ಥಿಗಾಗಿ ವಾರಗಳ ಕಾಲ ಹರಸಾಹಸ!

ಗಾಣಿಗ ಸಮಾಜ ತನ್ನದೇ ಆದ ಇತಿಹಾಸ ಪರಂಪರೆ ಹೊಂದಿದೆ. ಚಿಂತನೆಯಲ್ಲಿ ಬಹಳ ಶ್ರೇಷ್ಠವಾಗಿದೆ. ವಿಜಯನಗರ ಕಾಲದಿಂದಲೂ ತನ್ನ ಶ್ರೇಷ್ಠತೆಯನ್ನು ಉಳಿಸಿಕೊಂಡು ಬಂದಿದೆ. ಯಾರಿಗೆ  ಸ್ವಾಭಿಮಾನದ ಬದುಕು ಬದುಕಲು ಸಾಧ್ಯವಿಲ್ಲವೋ ಅವರಿಗೆ ಬದುಕು ಕಟ್ಟುವ ಕೆಲಸ ಮಾಡುವುದು ಮುಖ್ಯ. ಬಡತನದಿಂದ ಬಂದು ಬಡವರ ಪರವಾಗಿ ಕೆಲಸ ಮಾಡುವ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರು. ಅವರು ಗಾಣಿಗ ವೃತ್ತಿ ಮಾಡುತ್ತ ಬೆಳೆದವರು. ಅವರನ್ನು ನೋಡಿದಾಗ ಈ ಸಮಾಜದ ಶಕ್ತಿ ಎಷ್ಟಿದೆ ಅಂತ ಗೊತ್ತಾಗುತ್ತದೆ ಎಂದರು. 

click me!