ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್.ಟಿ. ಶ್ರೀನಿವಾಸ್ ಪರವಾಗಿ ಶನಿವಾರ ಭರ್ಜರಿ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಸಿಲಿನ ತಾಪಕ್ಕೆ ತಾಳಲಾರದೇ ಕುಸಿದು ಬಿದ್ದ ಘಟನೆ ನಡೆದಿದೆ.
ವಿಜಯನಗರ (ಏ.29): ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್.ಟಿ. ಶ್ರೀನಿವಾಸ್ ಪರವಾಗಿ ಶನಿವಾರ ಭರ್ಜರಿ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಸಿಲಿನ ತಾಪಕ್ಕೆ ತಾಳಲಾರದೇ ಕುಸಿದು ಬಿದ್ದ ಘಟನೆ ನಡೆದಿದೆ.
ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರದ ಉಸ್ತುವಾರಿಯನ್ನು ಹೊತ್ತಿರುವ ಸಿದ್ದರಾಮಯ್ಯ ಅವರು ಹೆಚ್ಚಿನ ಕ್ಷೇತ್ರಗಳಲ್ಲಿ ಪ್ರಚಾರದ ಹೊಣೆಯನ್ನು ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ,ಇಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ ವೇಲೆ ಸಿದ್ದರಾಮಯ್ಯ ಅವರು ತಲೆ ತಿರುಗಿ ಬಿದ್ದಿರುವ ಘಟನೆ ನಡೆದಿದೆ.
ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಸಿದ್ದರಾಮಯ್ಯ, ಹೆಲಿಕ್ಯಾಪ್ಟರನಿಂದ ಇಳಿದ ಕೂಡಲೇ ಮೊಬೈಲ್ ನಲ್ಲಿ ಬ್ಯೂಸಿ ಆಗಿದ್ದಾರೆ. ಅಲ್ಲಿಂದ ಕಾರ್ಯಕರ್ತರೊಂದಿಗೆ ಕಾರಿನತ್ತ ಹೆಜ್ಜೆ ಹಾಕಿದ್ದಾರೆ. ಇನ್ನು ಕಾರು ಬಾಗಿಲು ತೆಗೆದು ಕಾರನ್ನು ಹತ್ತುವ ವೇಳೆ ಕುಸಿದು ಬಿದ್ದಿದ್ದಾರೆ.
undefined
ಇನ್ನು ಸಿದ್ದರಾಮಯ್ಯ ಕುಸಿದು ಬಿಳುತ್ತಿದ್ದಂತೆ ಅಕ್ಕ ಪಕ್ಕದಲ್ಲಿಯೇ ಇದ್ದ ಕಾರ್ಯಕರ್ತರು ಸಿದ್ದರಾಮಯ್ಯು ಅವರ ಕೈಯನ್ನು ಹಿಡಿದುಕೊಂಡು ಕಾರಿನಲ್ಲಿ ಕೂರಿಸಿದ್ದಾರೆ. ನಂತರ, ಕಾರಿನ ಸೀಟಿನ ಒಳಗೆ ಕೂಡಿಸಿ ಅವರಿಗೆ ಆರೈಕೆ ಮಾಡಿದ ಸ್ವತಃ ವೈದ್ಯರಾಗಿರುವ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಶ್ರೀನಿವಾಸ ಅವರು ಗ್ಲುಕೋಸ್ ಕುಡಿಸಿದ್ದಾರೆ. ಇನ್ನು ಗುಕ್ಲೋಸ್ ಕುಡಿದ ಬಳಿಕ ಮತ್ತೆ ಚೇತರಿಸಿಕೊಂಡು ಜನರತ್ತ ಕೈ ಬಿಸಿದ ಸಿದ್ದರಾಮಯ್ಯ ಕಾರಿನಲ್ಲಿ ಹೆಲಿಪ್ಯಾಡ್‌ನಿಂದ ಪ್ರಚಾಋದ ಸ್ಥಳಕ್ಕೆ ತೆರಳಿದರು.
ಗಲಭೆ ನಡೆಯುತ್ತೆ ಎಂದು ಅಮಿತ್ ಶಾ ಹೇಳಿದ ಬೆನ್ನಲ್ಲೇ ಪರಂಗೆ ಕಲ್ಲು: ಕಾಂಗ್ರೆಸ್
ಸಿದ್ದರಾಮಯ್ಯ ಕುಸಿಯಲು ಇನ್ನೊಂಂದು ಕಾರಣ : ಸಿದ್ದರಾಮಯ್ಯ ಕುಸಿದಿರೋದು ಸನ್ ಸ್ಟೋಕ್ ಜೊತೆಗೆ ಮತ್ತೊಂದು ಕಾರಣವಿದೆ. ನಿನ್ನೆ ಎಡಗೈಗೆ ಸ್ವಲ್ಪ ಗಾಯವಾ ಗಿತ್ತಂತೆ. ಅದರ ಮೇಲೆ ಭಾರ ಹಾಕಿರೋದ್ರಿಂದಲೇ ಕುಸಿದಿದ್ದಾರೆ. ಕಾರು ಏರುವಾಗ ಡೋರ್ ಮೇಲೆ ಹತ್ತಿ ನಿಲ್ಲುವಾಗ ಎಡಗೈ ಮೇಲೆ ಭಾರವಾಗಿದೆ. ಹೀಗಾಗಿ ಸನ್ ಸ್ಟ್ರೋಕ್ ಜೊತೆಗೆ ಕೈ ಮೇಲೆ ಭಾರ ಹಾಕಿರೋದೆ ಬಿಳಲು ಕಾರಣವೆಂದು ಹೇಳಲಾಗ್ತಿದೆ ಕಳೆದ ವಾರ ಬೆಂಗಳೂರಿನಲ್ಲಿ ಇದ್ದಾಗ ಎಡಗೈಗೆ ಪಟ್ಟಿ ಹಾಕಿಕೊಂಡು ಓಡಾಡಿದ್ದರು ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್‌ನ ಇಬ್ಬರು ನಾಯಕರಿಗೆ ಅನಾನೂಕೂಲ: ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ತಲೆಗೆ ಏಟು ಬಿದ್ದ ಘಟನೆ ಶುಕ್ರವಾರ ನಡೆದಿತ್ತು. ಬಾವುಟದ ಕೋಲು ತಗುಲಿ ಈ ಘಟನೆ ನಡೆದಿದೆ ಎಂದು ಕೆಲವರು ಹೇಳಿದರೆ, ಕಲ್ಲು ತೂರಾಟದಿಂದಾಗಿ ಪರಮೇಶ್ವರ್‌ರಿಗೆ ಗಾಯವಾಗಿದೆ ಎಂದು ಮತ್ತೆ ಕೆಲವರು ಆರೋಪಿಸಿದ್ದಾರೆ. ಆದರೆ, ಈವರೆಗೂ ಪರಮೇಶ್ವರ್ ಅವರಿಗೆ ಪೆಟ್ಟು ಬಿದ್ದದ್ದು ಹೇಗೆಂಬುದು ಖಚಿತವಾಗಿಲ್ಲ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಈಗ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕುಸಿದಿರುವುದು ಪಕ್ಷದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬಿಸಿಲಿನಲ್ಲಿ ಪ್ರಚಾರ ಮಾಡದಂತೆ ಆರೋಗ್ಯ ಇಲಾಖೆ ಸಲಹೆ: ರಾಜ್ಯದಲ್ಲಿ ಬೇಸಿಗೆಯಿಂದ ಉಷ್ಣಾಂಶ ಹೆಚ್ಚಾಗಿರುವುದರಿಂದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊರಾಂಗಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ ಜನರನ್ನು ಸೇರಿಸಿ ಸಭೆ, ಸಮಾರಂಭ ನಡೆಸಬಾರದು, ಒಂದು ವೇಳೆ ಜನರನ್ನು ಸೇರಿಸಿದರೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಸುತ್ತೋಲೆ ಹೊರಡಿಸಿದ್ದು, ಬೇಸಿಗೆ ಹೆಚ್ಚುತ್ತಿರುವುದರಿಂದ ಉಷ್ಣಾಂಶ ಹೆಚ್ಚಾಗಿ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಇದನ್ನು ನಿಭಾಯಿಸಲು ಬಿಸಿಲಿನ ಪ್ರಖರತೆ ಹೆಚ್ಚಿರುವಂತಹ ಬೆಳಗ್ಗೆ 11 ರಿಂದ ಸಂಜೆ 4 ಗಂಟೆ ಅವಧಿಯಲ್ಲಿ ಹೊರಾಂಗಣ ಪ್ರದೇಶಗಳಲ್ಲಿ ಸಭೆ, ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ತಿಳಿಸಲಾಗಿದೆ.
ಹುಬ್ಬಳ್ಳಿ: ಬಿಜೆಪಿಯಿಂದ 27 ಮಂದಿ ಶೆಟ್ಟರ್ ಬೆಂಬಲಿಗರ ಉಚ್ಚಾಟನೆ
ಆರೋಗ್ಯ ಇಲಾಖೆ ಆದೇಶ ಮೀರಿ ಪ್ರಚಾರ ಕಾರ್ಯ: ಒಂದು ವೇಳೆ ಅನಿವಾರ್ಯವಾಗಿ ಆಯೋಜಿಸಬೇಕಿದ್ದರೆ ಭಾಗವಹಿಸುವ ಸಭಿಕರಿಗೆ ಬಿಸಿಲಿನಿಂದ ರಕ್ಷಣೆ ನೀಡಲು ಅಗತ್ಯ ಶಾಮಿಯಾನ, ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು. ಜತೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಂಶಗಳ ಪಾಲನೆ ಮಾಡುವುದು ಕಡ್ಡಾಯ. ಇದನ್ನು ಬಿಬಿಎಂಪಿ ಹಾಗೂ ಸಂಬಂಧಪಟ್ಟ ಜಿಲ್ಲಾಡಳಿತಗಳು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.