
ಬೆಂಗಳೂರು (ಅ.20): ಆರೋಗ್ಯ ಪರೀಕ್ಷೆಗಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಡಾ। ಸತ್ಯನಾರಾಯಣ ಮತ್ತು ಡಾ। ಸುನಿಲ್ ಕಾರಂತ್ ಅವರು ತಪಾಸಣೆ ನಡೆಸುತ್ತಿದ್ದಾರೆ. ಅವರಿಗೆ ಕೆಲ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪ್ರಕ್ರಿಯೆ ಪೂರ್ಣಗೊಂಡ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ದಿನೇಶ್ ಗೂಳಿಗೌಡ ಹೇಳಿದ್ದಾರೆ.
ಬೈಕ್ ಕಾರ್ಖಾನೆ ತಂದಿದ್ದ ಎಸ್.ಎಂ.ಕೃಷ್ಣ: 980ರಲ್ಲಿ ಇಂದಿರಾಗಾಂಧಿ ಸಚಿವ ಸಂಪುಟದಲ್ಲಿ ಕೈಗಾರಿಕೆ ಖಾತೆ ರಾಜ್ಯ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರು ತಮ್ಮ ಹುಟ್ಟೂರು ಸೋಮನಹಳ್ಳಿಯನ್ನು ಕೈಗಾರಿಕಾ ಪ್ರದೇಶವನ್ನಾಗಿ ಅಭಿವೃದ್ಧಿಪಡಿಸಿದ್ದರು. ಬೈಕ್ ಫ್ಯಾಕ್ಟರಿ ಸೇರಿದಂತೆ ಹಲವು ಕೈಗಾರಿಕೆಗಳನ್ನು ಮಂಡ್ಯಕ್ಕೆ ತಂದಿದ್ದ ಕೀರ್ತಿ ಅವರಿಗೆ ಸಂದಿತ್ತು. ಆ ಕಾಲದಲ್ಲಿ ಯುವಕರ ಹಾರ್ಟ್ ಫೇವರಿಟ್ ಆಗಿದ್ದ ಬಿಎಸ್‌ಎ ಬಾಂಡ್ ಬೈಕ್ ಕಾರ್ಖಾನೆ ಸ್ಥಾಪಿಸಿದ್ದರು. ಸೋಮನಹಳ್ಳಿ ಮಾತ್ರವಲ್ಲದೆ ಗೆಜ್ಜಲಗೆರೆ, ತೂಬಿನಕೆರೆಯಲ್ಲೂ ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಿ ಗಮನಸೆಳೆದಿದ್ದರು.
ಬೆಂಕಿ ಹಚ್ಚುವುದೇ ಶೋಭಾ ಕರಂದ್ಲಾಜೆ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕೈಗಾರಿಕೆ ಖಾತೆ ರಾಜ್ಯ ಖಾತೆ ಸಚಿವರಾಗಿ ಎಸ್.ಎಂ.ಕೃಷ್ಣ ಅವರು ಸಾಕಷ್ಟು ಸಾಧನೆ ಮಾಡಿದ್ದರು. ಅಭಿವೃದ್ಧಿ ಬಗ್ಗೆ ಅವರಿಗಿದ್ದ ದೂರದೃಷ್ಟಿ ಇದಕ್ಕೆ ಸಾಕ್ಷಿಯಾಗಿತ್ತು. ಇದೀಗ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಮಂಡ್ಯಕ್ಕೆ ಕೈಗಾರಿಕಾ ವಲಯದ ಬೆಳವಣಿಗೆಗೆ ಅನುಕೂಲಕವಾಗುವಂತೆ ಹಲವು ಯೋಜನೆಗಳು, ವಿಶೇಷ ಅನುದಾನ ತರುವುದಕ್ಕೆ ಅವಕಾಶಗಳಿವೆ. ಹಲವು ಕೈಗಾರಿಕೆಗಳನ್ನ ತಂದು, ಜಿಲ್ಲೆಯಲ್ಲಿ ಉದ್ದಿಮೆಗಳನ್ನ ಸ್ಥಾಪಿಸುವರೆಂಬ ಮಹತ್ವಾಕಾಂಕ್ಷೆ ಜಿಲ್ಲೆಯ ಜನರಲ್ಲಿದ್ದು, ಉದ್ಯೋಗ ಅರಸಿಕೊಂಡು ಮೈಸೂರು, ಬೆಂಗಳೂರಿನತ್ತ ವಲಸೆ ಹೋಗುವುದನ್ನು ತಪ್ಪಿಸುವರೇ ಎಂಬುದನ್ನು ಕಾದುನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.