ಕಾವೇರಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಜನತಾ ದಂಗೆ ಖಚಿತ: ಮಾಜಿ ಸಿಎಂ ಬೊಮ್ಮಾಯಿ

By Kannadaprabha NewsFirst Published Sep 23, 2023, 10:02 AM IST
Highlights

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ. ಹೀಗೆ ನಿರ್ಲಕ್ಷ್ಯ ಮಾಡಿದರೆ ಸ್ವಾಮೀಜಿಗಳು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು (ಸೆ.23): ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ. ಹೀಗೆ ನಿರ್ಲಕ್ಷ್ಯ ಮಾಡಿದರೆ ಸ್ವಾಮೀಜಿಗಳು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಈ ಸರ್ಕಾರ ತೀವ್ರವಾದ ಗಂಡಾಂತರ ತಂದಿದೆ. 

ಮೊದಲಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ. ಸುಪ್ರೀಂಕೋರ್ಟ್ ನಲ್ಲಿ ಸರಿಯಾಗಿ ವಾದ ಮಾಡದೇ ಮತ್ತೆ 7.5 ಟಿಎಂಸಿ ನಿರು ಬಿಡುವ ಪರಿಸ್ಥಿತಿಗೆ ತಂದಿದೆ.‌ಇಷ್ಟೆಲ್ಲಾ ಆದರೂ ರಾಜ್ಯದ ಜನರಿಗೆ ಸರ್ಕಾರ ಮುಂದೇನು ಮಾಡುತ್ತದೆ ಅಂತ ಹೇಳಿಲ್ಲ ಎಂದರು. ಕಾವೇರಿ ನೆಲ ಜಲ ವಿಚಾರ ಬಂದಾಗ ನಾವು ಒಗಟ್ಟು ಪ್ರದರ್ಶನ ಮಾಡಬೇಕು. ಆ ದೃಷ್ಟಿಯಿಂದ ನಾವು ಸಹಕಾರ ಕೊಡುತ್ತೇವೆ. ಸರ್ವಪಕ್ಷದ ಸಭೆಯಲ್ಲಿ ನೀರು ಬಿಡುವುಸಿಲ್ಲ ಎಂದು ತೆಗೆದುಕೊಂಡ ತೀರ್ಮಾನ ಪಾಲನೆ ಮಾಡದಿದ್ದರೆ ನಾವು ಮಾತನಾಡುತ್ತೇವೆ. 

ಅಮಿತ್‌ ಶಾ ಜತೆಗೆ ಕಾವೇರಿ ವಿಚಾರ ಚರ್ಚಿಸಿದ ಎಚ್‌.ಡಿ.ಕುಮಾರಸ್ವಾಮಿ

ಸುಪ್ರೀಂ ಕೋರ್ಟ್ ನಲ್ಲಿ ಇವರು ಮಧ್ಯಂತರ ಅರ್ಜಿ (ಐಎ) ಹಾಕಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಗಲಾದರೂ ಸರ್ಕಾರ ಮೇಲ್ಮನವಿ ಸಲ್ಲಿಸಿ ಇದುವರೆಗೂ ವಿಚಾರಣೆಯಲ್ಲಿ ಚರ್ಚೆಗೆ ಬಾರದ ಬೆಂಗಳೂರಿನ ಕುಡಿಯುವ ನೀರು, ತಮಿಳುನಾಡು ಹೆಚ್ಚಿಗೆ ನೀರು ಬಳಕೆ ಮಾಡಿಕೊಂಡಿದ್ದು, ನಮ್ಮಲ್ಲಿ ಮುಂಗಾರು ಮುಕ್ತಾಯವಾಗಿದ್ದು, ತಮಿಳುನಾಡಿಗೆ ಹಿಂಗಾರು ಮಳೆ ಬರುವ ವಿಚಾರಗಳನ್ನು ಸುಪ್ರೀಂ ಕೋರ್ಟ್ ಮುಂದೆ ಹಾಕಬೇಕು. ಅದನ್ನು ಸುಪ್ರೀಂ ಕೋರ್ಟ್ ಪರಿಗಣಿಸುವ ಸಾಧ್ಯತೆ ಇದೆ ಎಂದರು.

ಕಾವೇರಿ ನೀರು ಬಿಟ್ಟು ವಾದ ಮಾಡಲು ಏನಿದೆ?: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ (ಕಾವೇರಿ ನಿರ್ವಹಣಾ ಪ್ರಾಧಿಕಾರ) ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂಕೋರ್ಟ್‌ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸೆ.12ರ ನಂತರ ತಮಿಳುನಾಡಿಗೆ ನೀರು ಬಿಡಲು ಆಗುವುದಿಲ್ಲ ಎಂದು ಸುಪ್ರೀಂಕೊರ್ಟ್ ಮುಂದೆ ಅಫಿಡವಿಟ್ ಹಾಕಿದೆ‌. 

ಕಾವೇರಿ ವಿಚಾರದಲ್ಲಿ ನಾನು ಅಧಿವೇಶನದಲ್ಲೇ ಕಣ್ಣೀರು ಹಾಕಿದ್ದೆ: ಎಚ್‌.ಡಿ.ದೇವೇಗೌಡ

ಅದಕ್ಕೆ ತಾವು ಬದ್ಧರಾಗಿರಬೇಕಲ್ಲ. ಸರ್ಕಾರದ ಅಫಿಡವಿಟ್ ಅಂದರೆ ಸುಮ್ಮನೆ ಅಲ್ಲ. ರಾಜ್ಯ ಸರ್ಕಾರ ಸುಪ್ರಿಂಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ ಎಂದಾಯಿತು‌ ಎಂದು ಅಭಿಪ್ರಾಯಪಟ್ಟರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೇನು ಆಗುವುದಿಲ್ಲ. ಅದರ ಅಗತ್ಯ ನನಗಿಲ್ಲ. ಸರ್ಕಾರದ ನಡೆ ರಾಜ್ಯದ ರೈತರನ್ನು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ‌ ಎಂದರು.

click me!