ಪ್ರತಿಪಕ್ಷಗಳು ಭಾರತದಲ್ಲಿ ಶಕ್ತಿಯುತವಾಗಿಲ್ಲ. ಇವುಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಾಗಿವೆ. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷ ಗಳಾಗಿ ಕೆಲಸ ಮಾಡುತ್ತಿವೆ ಅಷ್ಟೆ. ಜು.17ರಂದು ನಡೆಯುವ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿ ಸಬೇಕು ಎಂದು ಒಗ್ಗಟ್ಟಾಗುತ್ತಿದ್ದಾರೆ. ಅದು ಆಗುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ(ಜು.17): ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಒಂದೇ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಇದು ಅಸಾಧ್ಯವಾದ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳು ಭಾರತದಲ್ಲಿ ಶಕ್ತಿಯುತವಾಗಿಲ್ಲ. ಇವುಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಾಗಿವೆ. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷ ಗಳಾಗಿ ಕೆಲಸ ಮಾಡುತ್ತಿವೆ ಅಷ್ಟೆ. ಜು.17ರಂದು ನಡೆಯುವ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿ ಸಬೇಕು ಎಂದು ಒಗ್ಗಟ್ಟಾಗುತ್ತಿದ್ದಾರೆ. ಅದು ಆಗುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದರು.
ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಸಿಲುಕಿರುವ ಭಯ: ಬೊಮ್ಮಾಯಿ
ಎಚ್‌ಡಿಡಿ ಜತೆ ಮಾತುಕತೆ: ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಷಯ ಕುರಿತು ಮಾತನಾಡಿದ ಬೊಮ್ಮಾಯಿ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ಹೈಕಮಾಂಡಿಗೆ ಬಿಟ್ಟವಿಚಾರ. ಪಕ್ಷದ ವರಿಷ್ಠರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಡುವೆ ಮಾತುಕತೆಯಾಗಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೆಲವೊಂದಿಷ್ಟುಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶ್ರುತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ. ವಿಪಕ್ಷ ಸ್ಥಾನ ಜು.18ರ ನಂತರ ಘೋಷಣೆ ಆಗಬಹುದು ಎಂದ ಅವರು, ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕೇವಲ ಉಹಾಪೋಹ. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.