ರಾಜ್ಯದ ಜನತೆ ಸಿದ್ದರಾಮಯ್ಯ ಜೇಬಲ್ಲಿದ್ದಾರಾ?: ಬಿಎಸ್‌ವೈ

By Govindaraj SFirst Published Nov 9, 2022, 11:30 AM IST
Highlights

ರಾಜ್ಯದಲ್ಲಿ ಚುನಾವಣೆ ಗೆದ್ದು ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಗೆ ಗಿಫ್ಟ್‌ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ, ಸಿದ್ದರಾಮಯ್ಯ ಯಾವುದೊ ಭ್ರಮೆಯಲ್ಲಿದ್ದಾರೆ, ರಾಜ್ಯದ ಜನರು ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 

ಉಡುಪಿ (ನ.09): ರಾಜ್ಯದಲ್ಲಿ ಚುನಾವಣೆ ಗೆದ್ದು ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಗೆ ಗಿಫ್ಟ್‌ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ, ಸಿದ್ದರಾಮಯ್ಯ ಯಾವುದೊ ಭ್ರಮೆಯಲ್ಲಿದ್ದಾರೆ, ರಾಜ್ಯದ ಜನರು ಅವರ ಜೇಬಿನಲ್ಲಿದ್ದಾರೆ ಎಂಬ ಭಾವನೆ ಮನಸ್ಸಲ್ಲಿದ್ದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಉಡುಪಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲ್ಲುವುದು ಅಸಾಧ್ಯ, ನಾನು ಮತ್ತು ಬೊಮ್ಮಾಯಿ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದು ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಮೋದಿ ಅವರ ಬೆಂಬಲದೊಂದಿಗೆ ಬಿಜೆಪಿಗೆ ಕರ್ನಾಟಕದಲ್ಲಿ ಸ್ಪಷ್ಟಬಹುಮತ ಸಿಗಲಿದೆ, ಇದನ್ನು ತಡೆಯಲು ಸಿದ್ದರಾಮಯ್ಯರಿಂದ ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ಸಿಗರ ಜಂಘಾಬಲವೇ ಉಡುಗಿ ಹೋಗಿದೆ: ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ಅದರಲ್ಲಿ ಯಾರೂ ಇರಲು ಇಷ್ಟಪಡುವುದಿಲ್ಲ. ಜನ ಸಂಕಲ್ಪ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ ನೋಡಿ ಕಾಂಗ್ರೆಸ್ಸಿಗರ ಜಂಘಾಬಲವೇ ಉಡುಗಿ ಹೋಗಿದೆ. ಮುಂಬರುವ ಚುನಾವಣೆಯಲ್ಲಿ ನಾವು 150 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಬ್ಯಾಡಗಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾಂಗ್ರೆಸ್‌ಗೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಚಾಟಿ

ಮೋದಿ ಅವರ ನಾಯಕತ್ವವನ್ನು ಇಡೀ ಜಗತ್ತೆ ಕೊಂಡಾಡುತ್ತಿದೆ. ರಾಜ್ಯದಲ್ಲಿ ರಾಹುಲ್‌ ಗಾಂಧಿ ಭಾರತ್‌ ಜೋಡೊ ಪಾದಯಾತ್ರೆ ಮಾಡಿದ್ದರೂ ಯಾವುದೇ ಪರಿಣಾಮ ಬೀರಿಲ್ಲ. ಕಾಂಗ್ರೆಸ್‌ ಕಳೆದ ಚುನಾವಣೆಗಿಂತಲೂ ಕಡಿಮೆ ಸ್ಥಾನ ಪಡೆಯಲಿದೆ. ಇತ್ತೀಚೆಗೆ ನಡೆದ ವಿಜಯಪುರ ಮಹಾನಗರ ಪಾಲಿಕೆ, ಕೊಳ್ಳೇಗಾಲ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದರು. ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರಿಗೆ ದೊಡ್ಡ ಪ್ರಮಾಣದ ಹಣ ರೈತರಿಗೆ ಸಿಕ್ಕಿದೆ. ಪ್ರತಿ ಹಳ್ಳಿಯ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ಕಾರ್ಯಕ್ರಮ ನಡೆಯುತ್ತಿದೆ. 

ರೈತರು, ನೇಕಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ 8000 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ ಎಂದರು. ಇಡೀ ದೇಶದಲ್ಲಿ ನಾನು ಜಾರಿಗೊಳಿಸಿದ ಭಾಗ್ಯಲಕ್ಷ್ಮಿ ಬಾಂಡ್‌ ಯೋಜನೆಯಡಿ ರಾಜ್ಯದ 20 ಲಕ್ಷಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಇದರ ಲಾಭ ದೊರೆತಿದೆ. 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯನವರು ಜನತೆ ನೆನಪಿಟ್ಟುಕೊಳ್ಳುವಂತಹ ಯಾವುದಾದರೂ ಯೋಜನೆ ಜಾರಿಗೊಳಿಸಿದ್ದರೆ ಹೇಳಲಿ ಎಂದು ಸವಾಲು ಹಾಕಿದ ಅವರು, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಜನ ತೀರ್ಮಾನ ಮಾಡಿದ್ದಾರೆ ಎಂದರು.

ಪ್ರಧಾನಿ ಎದುರು ಹೆಜ್ಜೆ ಇಡುವ ಧೈರ್ಯ ಕಾಂಗ್ರೆಸ್ಸಿಗರಿಗಿಲ್ಲ: ಜಗತ್ತೇ ಮೆಚ್ಚುವಂತಾ ಆಡಳಿತವನ್ನು ನೀಡಿ, ದೇಶವನ್ನು ಸ್ವಾವಲಂಬಿಯಾಗಿಸುವ ಪ್ರತಿ ಹಂತದಲ್ಲಿಯೂ ಕ್ರಾಂತಿಕಾರಕ ಹೆಜ್ಜೆ ಇಡುವ ಪ್ರಧಾನಿ ನರೇಂದ್ರ ಮೋದಿ ಎದುರು ಹೆಜ್ಜೆ ಇಡುವ ಧೈರ್ಯವನ್ನು ಕಾಂಗ್ರೆಸ್‌ ಸಂಪೂರ್ಣವಾಗಿ ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಅವರು ಮಂಗಳವಾರ ಶಿರಹಟ್ಟಿಯಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬಾದಾಮಿಯ ಜನರ ವಿಶ್ವಾಸ, ನಂಬಿಕೆ ಕಳೆದುಕೊಂಡ ಸಿದ್ದು: ಯಡಿಯೂರಪ್ಪ

ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹಲವಾರು ಜನಪರ ಕಾರ್ಯಕ್ರಮಗಳು ದೇಶದ ಪ್ರತಿಯೊಬ್ಬರ ಮನೆಗೂ ತಲುಪಿವೆ. ನಮ್ಮ ಸರ್ಕಾರದ ಯೋಜನೆಯ ಲಾಭವನ್ನು ನಾನು ಪಡೆದಿಲ್ಲ ಎನ್ನುವ ಯಾವುದಾದರೂ ಒಂದು ಮನೆ ಇದ್ದರೆ ತೋರಿಸಿ ನೋಡೋಣ. ನಮ್ಮ ಕಾರ್ಯಕರ್ತರು ಇದನ್ನು ಸರಿಯಾಗಿ ಜನರಿಗೆ ಮನವರಿಕೆ ಮಾಡಬೇಕು ಎಂದು ವಿವಿಧ ಯೋಜನೆಗಳ ಕುರಿತು ಸಮಗ್ರವಾಗಿ ಮಾತನಾಡಿದರು.

click me!