ಶೆಟ್ಟರ್‌ ಸೇರ್ಪಡೆಯಿಂದ ಲೊಕಸಭೆಗೆ ಸಹಕಾರಿ: ಯಡಿಯೂರಪ್ಪ

Published : Jan 26, 2024, 05:54 AM IST
ಶೆಟ್ಟರ್‌ ಸೇರ್ಪಡೆಯಿಂದ ಲೊಕಸಭೆಗೆ ಸಹಕಾರಿ: ಯಡಿಯೂರಪ್ಪ

ಸಾರಾಂಶ

ಶೆಟ್ಟರ್‌ ಈ ಹಿಂದೆ ಮಾಜಿ ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ ಅನನ್ಯ ಜವಾಬ್ದಾರಿ ನಿರ್ವಹಿಸಿದ್ದಾರೆ. ಅವರ ಅನುಭವ ಪಕ್ಷಕ್ಕೆ ಅಗತ್ಯವಾಗಿತ್ತು. ಅಲ್ಲದೆ, ಶೆಟ್ಟರ್‌ ಮರಳಿ ಬಿಜೆಪಿಗೆ ಬರಬೇಕು ಎಂಬುದು ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆಯೂ ಆಗಿತ್ತು ಎಂದು ತಿಳಿಸಿದ ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ

ನವದೆಹಲಿ(ಜ.26):  ಜಗದೀಶ್‌ ಶೆಟ್ಟರ್‌ ಅವರ ಸೇರ್ಪಡೆಯಿಂದ ಬಲ ಬಂದಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25ಕ್ಕೂ ಅಧಿಕ ಕ್ಷೇತ್ರ ಗೆಲ್ಲಲು ಸಹಕಾರಿಯಾಗಲಿದೆ. ಮತ್ತೆ ಅವರಿಗೆ ಬಿಜೆಪಿಗೆ ಸ್ವಾಗತಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷದ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಬಿಜೆಪಿಗೆ ಬರಮಾಡಿಕೊಂಡು ಮಾತನಾಡಿದ ಅವರು, ಗೃಹ ಸಚಿವ ಅಮಿತ್‌ ಶಾ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಶೆಟ್ಟರ್‌ ಜೊತೆ ಹೋಗಿ ಭೇಟಿ ಮಾಡಿದ್ದೇವೆ. ಅಮಿತ್‌ ಶಾ ಅವರು ಶೆಟ್ಟರ್‌ ಅವರನ್ನು ಸಂತಸದಿಂದ ಸ್ವಾಗತಿಸಿದ್ದು, ಬಿಜೆಪಿ ಸೇರುವಂತೆ ತಿಳಿಸಿದ್ದರು. ಶಾ ಅಣತಿಯಂತೆ ಶೆಟ್ಟರ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದರು.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಉಳಿಯಲ್ಲ, ಇದನ್ನರಿತೇ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿದ್ದಾರೆ: ಬೊಮ್ಮಾಯಿ

ಶೆಟ್ಟರ್‌ ಈ ಹಿಂದೆ ಮಾಜಿ ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ ಅನನ್ಯ ಜವಾಬ್ದಾರಿ ನಿರ್ವಹಿಸಿದ್ದಾರೆ. ಅವರ ಅನುಭವ ಪಕ್ಷಕ್ಕೆ ಅಗತ್ಯವಾಗಿತ್ತು. ಅಲ್ಲದೆ, ಶೆಟ್ಟರ್‌ ಮರಳಿ ಬಿಜೆಪಿಗೆ ಬರಬೇಕು ಎಂಬುದು ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆಯೂ ಆಗಿತ್ತು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!