
ಹುಬ್ಬಳ್ಳಿ(ಮಾ.18): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಅಸಮಾಧಾನ ಎರಡ್ಮೂರು ದಿನಗಳಲ್ಲಿ ಶಮನವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಿ ವಿಮಾನ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು.
ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ. ಕೆ.ಎಸ್. ಈಶ್ವರಪ್ಪ ಸೇರಿದಂತೆ ರಾಜ್ಯದ ಹಲವು ನಾಯಕರಲ್ಲಿ ಉಂಟಾಗಿದ್ದ ಅಸಮಾಧಾನವೆಲ್ಲ ಎರಡ್ಮೂರು ದಿನಗಳಲ್ಲಿ ಶಮನವಾಗುತ್ತದೆ. ಈ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದರು.
ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ನಾವು ಕೂಡ ಚುನಾವಣೆ ಸಿದ್ಧತೆ ಮಾಡಿಕೊಂಡಿದ್ದೇವೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸೀಟ್ ಗೆಲ್ಲುವ ಭರವಸೆ ಇದೆ ಎಂದರು.
ಧಾರವಾಡದಲ್ಲಿ ಯಾರಿಗೆ ಗೆಲುವಿನ ‘ಪೇಡಾ’? ಕೇಂದ್ರ ಸಚಿವ ಜೋಶಿ ವಿರುದ್ಧ ಯಾರಾಗ್ತಾರೆ ಕಾಂಗ್ರೆಸ್ ಕಲಿ?
ಕರ್ನಾಟಕದಲ್ಲಿ ಕನಿಷ್ಠ 25-26 ಲೋಕಸಭಾ ಕ್ಷೇತ್ರದ ಚುನಾವಣೆ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡುವುದು ಶತಸಿದ್ಧ. ಕರ್ನಾಟಕದಿಂದ ಮೋದಿ ಅವರಿಗೆ ದೊಡ್ಡ ಕೊಡುಗೆ ನೀಡುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.