ಕೇಂದ್ರದಿಂದ ಬರ ಪರಿಹಾರ ಬಂದೇ ಇಲ್ಲವೆಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೇಂದ್ರ ಸರ್ಕಾರ ವಿಪತ್ತು ನಿರ್ವಹಣೆಯಡಿ 6 ಸಾವಿರ ಕೋಟಿ ರು. ಅನುದಾನ ನೀಡಿದೆ. ಕಾಂಗ್ರೆಸ್ಸಿಗರು ದೆಹಲಿಗೆ ಹೋಗಿ, ರಾಜ್ಯದ ಮಾನ ಕಳೆಯುವ ಕೆಲಸ ಮಾಡಿದ್ದಾರೆ. ಸರ್ಕಾರದ ದುಡ್ಡಿನಲ್ಲಿ ಜಾಹೀರಾತು ನೀಡಿ, ಸುಳ್ಳು ಹೇಳಿ ಸಿಕ್ಕಿ ಹಾಕಿಕೊಳ್ಳುವ ಹೀನಸ್ಥಿತಿಗೆ ಕಾಂಗ್ರೆಸ್ ಸರ್ಕಾರ ತಲುಪಿದೆ ಎಂದು ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ದಾವಣಗೆರೆ(ಫೆ.09): ಕರ್ನಾಟಕಕ್ಕೆ ಕೇಂದ್ರ ಸಮರ್ಪಕ ಅನುದಾನ ನೀಡುತ್ತಿಲ್ಲವೆಂದು ಆರೋಪ ಮಾಡಿ, ದೆಹಲಿ ಚಲೋ, ಪ್ರತಿಭಟನೆ ನಡೆಸಿದ ಭ್ರಷ್ಟ ಸಿದ್ದರಾಮಯ್ಯ ಸರ್ಕಾರವು ಸುಳ್ಳು ಹೇಳಿ, ದೇಶದ ಜನತೆ ಮುಂದೆ ಸಿಕ್ಕಿ ಹಾಕಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಬುಧವಾರ ನಡೆದ ಬಿಜೆಪಿ ನೂತನ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸಮರ್ಪಕ ಅನುದಾನ ನೀಡಿಲ್ಲವೆಂದು ಸುಳ್ಳು ಹೇಳಿಕೊಂಡು ದೆಹಲಿ ಜಂತರ್ ಮಂತರ್ ಮುಂದೆ ಹೋದ ಸಿದ್ದರಾಮಯ್ಯ ಸರ್ಕಾರ ರಾಷ್ಟ್ರಮಟ್ಟದಲ್ಲಿ ರಾಜ್ಯದ ಮಾನ ಕಳೆಯುತ್ತಿದ್ದಾರೆ ಎಂದರು.
ನೈತಿಕತೆ ಪಾಲನೆ ಪತ್ರಕರ್ತರ ಜವಾಬ್ದಾರಿ: ಸಚಿವ ಮಲ್ಲಿಕಾರ್ಜುನ್
ಕೇಂದ್ರದಿಂದ ಬರ ಪರಿಹಾರ ಬಂದೇ ಇಲ್ಲವೆಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೇಂದ್ರ ಸರ್ಕಾರ ವಿಪತ್ತು ನಿರ್ವಹಣೆಯಡಿ 6 ಸಾವಿರ ಕೋಟಿ ರು. ಅನುದಾನ ನೀಡಿದೆ. ಕಾಂಗ್ರೆಸ್ಸಿಗರು ದೆಹಲಿಗೆ ಹೋಗಿ, ರಾಜ್ಯದ ಮಾನ ಕಳೆಯುವ ಕೆಲಸ ಮಾಡಿದ್ದಾರೆ. ಸರ್ಕಾರದ ದುಡ್ಡಿನಲ್ಲಿ ಜಾಹೀರಾತು ನೀಡಿ, ಸುಳ್ಳು ಹೇಳಿ ಸಿಕ್ಕಿ ಹಾಕಿಕೊಳ್ಳುವ ಹೀನಸ್ಥಿತಿಗೆ ಕಾಂಗ್ರೆಸ್ ಸರ್ಕಾರ ತಲುಪಿದೆ ಎಂದು ಹರಿಹಾಯ್ದರು.
ಪ್ರಧಾನಿ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆ, ರಾಜ್ಯಸಭೆ ಕಲಾಪದಲ್ಲಿ ಸಿದ್ದರಾಮಯ್ಯ ಆರೋಪಗಳಿಗೆ ಸರಿಯಾದ ಉತ್ತರವನ್ನೇ ನೀಡಿದ್ದಾರೆ. ಒಕ್ಕೂಟ ವ್ಯವಸ್ಥೆಯನ್ನೇ ಪ್ರಶ್ನಿಸುವ, ದೇಶ ವಿಭಜನೆ ಮಾತುಗಳನ್ನಾಡುವವರನ್ನು ಇನ್ನು ಕೆಲವೇ ಕೆಲ ದಿನಗಳಲ್ಲಿ ಜನರೇ ಅಪ್ರಸ್ತುತ ಮಾಡಲಿದ್ದಾರೆ. ರಾಷ್ಟ್ರ ರಾಜಧಾನಿಗೂ ಹೋಗಿ ಸುಳ್ಳು ಹೇಳಿ ರಾಜ್ಯದ ಜನರ ಮರ್ಯಾದೆ ತೆಗೆಯುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡಿದೆ ಎಂದು ಕಿಡಿಕಾರಿದರು.