ಕಾಂಗ್ರೆಸ್‌ ಬಂದ್‌ ಮಾಡಿದರೆ ಕೋರ್ಟ್‌ ಆದೇಶ ಉಲ್ಲಂಘಿಸಿದಂತೆ: ಬಿಎಸ್‌ವೈ

Published : Mar 08, 2023, 09:22 AM IST
ಕಾಂಗ್ರೆಸ್‌ ಬಂದ್‌ ಮಾಡಿದರೆ ಕೋರ್ಟ್‌ ಆದೇಶ ಉಲ್ಲಂಘಿಸಿದಂತೆ: ಬಿಎಸ್‌ವೈ

ಸಾರಾಂಶ

ಶಾಸಕ ಮಾಡ್ಯಾಳು ಭ್ರಷ್ಟಾಚಾರ ಆರೋಪಗಳ ವಿರುದ್ಧ ಕಾಂಗ್ರೆಸ್‌ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ನ್ಯಾಯಾಲಯದ ಆದೇಶ ಉಲ್ಲಂಘಿಸಿದಂತಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದರು. 

ಯಾದಗಿರಿ (ಮಾ.08): ಶಾಸಕ ಮಾಡ್ಯಾಳು ಭ್ರಷ್ಟಾಚಾರ ಆರೋಪಗಳ ವಿರುದ್ಧ ಕಾಂಗ್ರೆಸ್‌ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ನ್ಯಾಯಾಲಯದ ಆದೇಶ ಉಲ್ಲಂಘಿಸಿದಂತಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದರು. ಮಂಗಳವಾರ ಬಿಜೆಪಿ ಸಂಕಲ್ಪ ರಥಯಾತ್ರೆ ಅಂಗವಾಗಿ ಇಲ್ಲಿಗಾಗಮಿಸಿದ್ದ ಅವರನ್ನು ಭೇಟಿಯಾದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿರೂಪಾಕ್ಷಪ್ಪ ಮಾಡ್ಯಾಳ್‌ಗೆ ಹೈಕೋರ್ಟ್‌ ನಿಂದ ಬೇಲ್‌ ಸಿಕ್ಕಿದೆ. 

ಬೇಲ್‌ ಸಿಕ್ಕ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ಜಾಮೀನು ಸಿಕ್ಕಿದ್ದರೆ ಅದು ಒಳ್ಳೆಯದೇ ಆಯ್ತು ಎಂದರು. ಹೈಕೋರ್ಟ್‌ನಿಂದ ಬೇಲ್‌ ಸಿಕ್ಕಾಗ ಕಾಂಗ್ರೆಸ್‌ನವರು ಹೋರಾಟ ಮಾಡೋದು ಎಷ್ಟುಸರಿ ಎಂದು ಪ್ರಶ್ನಿಸಿದ ಬಿಎಸ್ವೈ, ಈ ರೀತಿ ಹೋರಾಟ ಮಾಡಿದರೆ ಕೋರ್ಟ್‌ ಆದೇಶದ ವಿರುದ್ಧವೇ ಹೋರಾಟ ಮಾಡಿದಂತೆ. ಯಾವುದೇ ರೀತಿಯಿಂದ ಬಂದ್‌ ಅಥವಾ ಮತ್ತೊಂದರ ಅಗತ್ಯ ಇಲ್ಲ ಎಂದರು. 

ಕಾಂಗ್ರೆಸ್ಸನ್ನು ಜನ ಗ್ಯಾರಂಟಿ ಮನೆಗೆ ಕಳಿಸ್ತಾರೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಟಿಕೆಟ್‌ ಕಟ್‌ ಅಂದಿಲ್ಲ, ಕಷ್ಟಅಂದಿದ್ದೀನಿ: ಈ ಬಾರಿ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕು ಹಾಲಿ ಶಾಸಕರಿಗೆ ಟಿಕೆಟ್‌ ಸಿಗದಿರಬಹುದು ಎಂಬ ಕುರಿತ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ ಬಿಎಸ್ವೈ, ನಾನು ಕಟ್‌ ಅಂತ ಹಾಗೇನೂ ಹೇಳಿಲ್ಲ, ಕೆಲವು ಮೂರು ನಾಲ್ಕು ಜನರಿಗೆ ಟಿಕೆಟ್‌ ಕೊಡೋದು ಕಷ್ಟಆಗ್ತದೆ ಅಂತಾ ಹೇಳಿದ್ದೀನಿ. ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡ್ತೀವಿ ಎಂದರು.

ಹಾಲಿ 4-5 ಶಾಸಕರಿಗಿಲ್ಲ ಟಿಕೆಟ್‌?: ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿರುವ ಯಡಿಯೂರಪ್ಪ ಮಂಗಳವಾರ ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಜೋರಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದರು. ಟಿಕೆಟ್‌ ಹಂಚಿಕೆ ವಿಷಯದಲ್ಲಿಯೂ ಕಟ್ಟುನಿಟ್ಟಿನ ಮಾನದಂಡಗಳನ್ನು ಅನುಸರಿಸಲಾಗುವುದು. 

ಟಿಕೆಟ್‌ ಹಂಚಿಕೆಯಲ್ಲಿ ಗುಜರಾತ್‌ ಮಾದರಿ ಅನ್ನೋದಕ್ಕಿಂತ ಪಕ್ಷದ ಹೈಕಮಾಂಡ್‌ ಹಾಲಿ ಶಾಸಕರೆಲ್ಲರ ಚಲನ ವಲನ ಗಮನಿಸುತ್ತಿದೆ. ಇದನ್ನಾಧರಿಸಿ ಹೇಳೋದಾದಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಉಮೇದುವಾರರ ಮೊದಲ ಪಟ್ಟಿಶೀಘ್ರವೇ ಹೊರಬೀಳುತ್ತದೆ. ವಿಜಯೇಂದ್ರ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬುದನ್ನು ಪಕ್ಷದ ಹೈಕಮಾಡ್‌ ತೀರ್ಮಾನಿಸಲಿದೆ. ಬಹುಶ: ಈಗಿನ ಮಟ್ಟಿಗೆ ಶಿಕಾರಿಪುರದಿಂದಲೇ ಸ್ಪರ್ಧಿಸುವ ಸಾಧ್ಯತೆಗಳು ಅಧಿಕ ಎಂದು ಹೇಳಿದರು. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. 

ಉಚಿತ ವಿದ್ಯುತ್‌ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚೆಗೆ ಬರಲಿ: ಡಿ.ಕೆ.ಶಿವಕುಮಾರ್‌

ಚುನಾವಣೆ ಮುಗಿದ ಬಳಿಕ ನಡೆಯುವ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ನಿರ್ಧಾರವಾಗಲಿದೆ ಎಂದರು. ಹೊರ ದೇಶಗಳಲ್ಲಿ ಭಾರತದ ಕುರಿತಂತೆ, ಇಲ್ಲಿನ ವ್ಯವಸ್ಥೆಯ ಕುರಿತಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಗುರವಾಗಿ ಮಾತನಾಡುವ ಚಾಳಿ ಹೊಂದಿದ್ದಾರೆ. ಇದು ಸರಿಯಲ್ಲ. ಈಚೆಗೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತಂತೆ ನೀಡಿರುವ ಹೇಳಿಕೆಯನ್ನು ಹಿಂದಕ್ಕೆ ಪಡೆದು ಕ್ಷಮೆ ಯಾಚಿಸಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್
ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ