
ಚಿತ್ರದುರ್ಗ (ಮಾ.20): ಮೋದಿ ಪ್ರಧಾನಿ ಆದ ಮೇಲೆ ಒಂದು ದಿನವೂ ವಿಶ್ರಾಂತಿ ತೆಗೆದುಕೊಂಡಿಲ್ಲ. ಇಡೀ ಪ್ರಪಂಚವೇ ಮೋದಿಯತ್ತ ನೋಡುತ್ತಿದೆ. ಮೋದಿ ಅವರನ್ನು ಇಡೀ ದೇಶ ಹಾಡಿ ಹೊಗಳುತ್ತಿದ್ದರೆ ಕಾಂಗ್ರೆಸ್ ಮಾತ್ರ ಟೀಕೆ ಮಾಡುತ್ತಿದೆ. ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಗೆ ಸಮ ಆಗಲು ಸಾಧ್ಯವೇ? ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಹೊಳಲ್ಕೆರೆಯಲ್ಲಿ ಭಾನುವಾರ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ನನಗೆ 80 ವರ್ಷ ಆಗಿದ್ದರೂ ರಾಜ್ಯದ ಉದ್ದಗಲಕ್ಕೂ ಓಡಾಡಿ ಪ್ರಚಾರದಲ್ಲಿ ತೊಡಗುವೆ.
ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದರು. ಎಲ್ಲಿ ಮೋದಿ, ಎಲ್ಲಿಯ ರಾಹುಲ್ ಗಾಂಧಿ? ಅವರು ಹೊರದೇಶಕ್ಕೆ ಹೋಗಿ ಭಾರತಕ್ಕೆ ಅವಮಾನ ಮಾಡಿದ್ದಾರೆ. ಕ್ಷಮೆ ಯಾಚಿಸಿ ಅಂದರೂ ಕ್ಷಮೆ ಕೇಳುತ್ತಿಲ್ಲ. ಒಬ್ಬ ಮನುಷ್ಯ ಯಾವ ರೀತಿ ಕೆಟ್ಟದಾಗಿ ನಡೆದುಕೊಳ್ಳಬಹುದೋ ಆ ರೀತಿ ನಡೆದುಕೊಳ್ಳುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಸಮ ಆಗೋದು ಗ್ಯಾರಂಟಿ ಎಂದು ಯಡಿಯೂರಪ್ಪ ಹೇಳಿದರು.
ಗೋಹತ್ಯೆ ನಿಷೇಧ, 3 ಸಾವಿರ ಪ್ರಕರಣ ದಾಖಲು: ಸಚಿವ ಪ್ರಭು ಚವ್ಹಾಣ್
ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ನಿಶ್ಚಿತ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಈಗಾಗಲೇ ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ಎಲ್ಲ ದಿಕ್ಕುಗಳಿಂದ ಪ್ರಾರಂಭವಾಗಿದ್ದು, ಜನತೆಯಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 140 ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದ್ದು, ಪ್ರಧಾನಿ ಮೋದಿ ಅವರ ಅಭಿವೃದ್ಧಿಪರ ಚಿಂತನೆಗಳು ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ವರ್ಗಗಳ ಅಭಿವೃದ್ಧಿಪರ ಯೋಜನೆಗಳಿಂದ ರಾಜ್ಯದ ಜನರ ಹೃದಯದಲ್ಲಿ ಬಿಜೆಪಿ ಶಾಶ್ವತವಾಗಿ ನೆಲೆ ನಿಂತಿದ್ದು, 140ಕ್ಕಿಂತಲೂ ಅಧಿಕ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ವಿರೋಧ ಪಕ್ಷಗಳಿಗೆ ಪಾಠ ಕಲಿಸುತ್ತೇವೆ ಎಂದರು.
ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳನ್ನೂ ಗೆಲ್ಲುವ ಮೂಲಕ ನಮ್ಮ ಸಾಧನೆಯನ್ನು ತೋರಿಸುವ ಮೂಲಕ ಸರ್ಕಾರಕ್ಕೆ ಶಕ್ತಿ ತುಂಬಲಾಗುವುದು ಎಂದರು. ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ರಾಷ್ಟಾ್ರಧ್ಯಕ್ಷ ನಡ್ಡಾ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಅಮಿಶ್ ಶಾ ಚಾಲನೆ ನೀಡಿರುವ ವಿಜಯ ಸಂಕಲ್ಪ ಯಾತ್ರೆ ರಾಜ್ಯಾದ್ಯಂತ ನಡೆಯತ್ತಿರುವುದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಮಾ.25ರಂದು ದಾವಣಗೆರೆಯಲ್ಲಿ ಸಮಾವೇಶಗೊಳ್ಳಲಿದೆ ಎಂದು ತಿಳಿಸಿದರು.
ಮೋದಿ, ಬೊಮ್ಮಾಯಿ ಆಡಳಿತದಿಂದ ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ ಖಚಿತ: ಸಚಿವ ಹಾಲಪ್ಪ ಆಚಾರ್
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಕುಮಾರ ಬಂಗಾರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ತಾಲೂಕು ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ, ಜಿಲ್ಲಾ ಮುಖಂಡ ದತ್ತಾತ್ರಿ, ಮಡಿವಾಳ ಮಾಚಿದೇವ ನಿಗಮ ಮಂಡಳಿ ಅಧ್ಯಕ್ಷ ರಾಜು ಎಂ. ತಲ್ಲೂರು ಮೊದಲಾದವರು ಇದ್ದರು. ನಂತರ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಿಂದ ಮುಖ್ಯರಸ್ತೆಯ ಮೂಲಕ ಡೊಳ್ಳು ಮೊದಲಾದ ವಾದ್ಯಗೋಷ್ಠಿಗಳೊಂದಿಗೆ ಸುಮಾರು 6 ಸಾವಿರಕ್ಕೂ ಅಧಿಕ ಬಿಜೆಪಿ ಮುಖಂಡರು, ಕಾರ್ಯಕರ್ತರೊಂದಿಗೆ ವಿಜಯ ಸಂಕಲ್ಪ ರಥ ಯಾತ್ರೆ ನಡೆಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.